Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ; ೯.೧೭ ಲಕ್ಷ ಮೌಲ್ಯದ ಚಿನ್ನಾಭರಣ, ೩೯.೫೧ ಲೀ. ಮದ್ಯ ವಶ

ಸುದ್ದಿಮೂಲ ವಾರ್ತೆ,

ಬಳ್ಳಾರಿ, ಏ. ೭:

ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಿಲ್ಲೆಯಾದ್ಯಂತ ಜಾರಿಯಲ್ಲಿದ್ದು, ವಿವಿಧ ಚೆಕ್‌ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆದಿದೆ.ಗುರುವಾರದಂದು ೧೬೧.೭೧ ಗ್ರಾಂ ಚಿನ್ನ ರೂ.೮.೯೯ ಲಕ್ಷ, ೬೬ ಗ್ರಾಂ ಬೆಳ್ಳಿ ಅಂದಾಜು ಮೌಲ್ಯ ರೂ.೩ ಸಾವಿರ, ೪ ಬಿಳಿ ರತ್ನ (ರೂ.೧೫ ಸಾವಿರ ಮೌಲ್ಯ) ಸೇರಿ ಒಟ್ಟು ೯.೧೭ ಲಕ್ಷ ಮೌಲ್ಯದ ಚಿನ್ನಾಭರಣ, ೩೯.೫೧ ಲೀಟರ್ (ರೂ.೧೮,೪೯೨ ಬೆಲೆಯ) ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಿಂದ ೩೫.೨೮ ಲೀಟರ್ ಮದ್ಯ (ರೂ.೧೬,೮೪೭ ಬೆಲೆಯ) ಹಾಗೂ ಪೊಲೀಸ್ ಇಲಾಖೆಯಿಂದ ೪.೨೩ ಲೀಟರ್ (ರೂ.೧,೬೪೫ ಬೆಲೆಯ) ಮದ್ಯ ಸೇರಿದಂತೆ ಒಟ್ಟು ೩೯.೫೧ ಲೀಟರ್ ರೂ.೧೮,೪೯೨ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು ೪೩ ಫ್ಲೆöÊಯಿಂಗ್ ಸ್ವಾö್ಯಡ್, ೨೭ ಎಸ್‌ಎಸ್‌ಟಿ ತಂಡ ಹಾಗೂ ೭ ಅಬಕಾರಿ ತಂಡ ಕೆಲಸ ನಿರ್ವಹಿಸುತ್ತಿವೆ.

ಚುನಾವಣೆ ಪ್ರಕ್ರಿಯೆಯಲ್ಲಿ ಇಲ್ಲಿಯವರೆಗೆ ಎಫ್‌ಎಸ್‌ಟಿ, ಎಸ್‌ಎಸ್‌ಟಿ ಹಾಗೂ ಪೊಲೀಸ್ ಇಲಾಖೆ ತಂಡಗಳು ದಾಖಲಿಸಿದ ಎಫ್‌ಐಆರ್ ಮತ್ತು ವಸೂಲಿ ಮಾಡಿದ ಒಟ್ಟು ೫.೮೦ ಲಕ್ಷ ರೂ.ಗಳನ್ನು ನ್ಯಾಯಾಲಯದ ನಿರ್ದೇಶನದಂತೆ ಚುನಾವಣಾ ಅಧಿಕಾರಿಗಳ ಸಮಕ್ಷಮದಲ್ಲಿ ಖಜಾನೆಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ