Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಘರ್ಷಣೆ ಸಿಬಿಐಗೆ ಇಲ್ಲ : ಗೃಹ ಸಚಿವ ಪರಂ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.8:
ಬಳ್ಳಾಾರಿ ಘರ್ಷಣೆಯ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಈ ಪ್ರಕರಣವನ್ನು ತನಿಖೆ ಮಾಡುವ ಸಾಮಾರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಪರಿಸ್ಥಿಿತಿ ಬಂದರೆ ಸಿಬಿಐಗೆ ನೀಡುವ ಬಗ್ಗೆೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದು ಹೇಳಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಾಮಿ ಹೇಳಿಕೆಗೆ ಪ್ರತಿಕ್ರಿಿಯಿಸಿ, ಕುಮಾರಸ್ವಾಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಿಗಳಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆೆ ವೈಯಕ್ತಿಿಕವಾಗಿ ಹೇಳಿಕೆ ಕೊಟ್ಟಿಿದ್ದಾರೆ. ನಾನು ಅವರ ಬಗ್ಗೆೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾಾರಿಯುತವಾಗಿ ಹೇಳಿಕೆ ಕೊಟ್ಟಿಿದ್ದಾರೆ ಅದನ್ನು ಸ್ವೀಕಾರ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ ಎಂದು ಅವರಿಗೆ ಹೇಳಬಯಸುತ್ತೇನೆ. 38 ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮರ್ಥ್ಯ ಮತ್ತು ವ್ಯಕ್ತಿಿತ್ವನೂ ಅವರಿಗೆ ಗೊತ್ತಿಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
ಹುಬ್ಬಳ್ಳಿಿ ಘಟನೆಯ ಬಗ್ಗೆೆ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ನಾವು ಮಹಿಳೆಯನ್ನು ವಿವಸಗೊಳಿಸಿಲ್ಲ. ಬಂಧಿಸುವ ವೇಳೆ ಮಹಿಳೆಯೇ ಆ ರೀತಿ ಮಾಡಿಕೊಂಡಿದ್ದಾರೆ ಎನ್ನುವ ಸ್ಪಷ್ಟನೆಯನ್ನು ಅವರು ನೀಡಿದ್ದಾರೆ. ಕಮಿಷನರ್ ಸ್ಪಷ್ಟಪಡಿಸಿದ ಮೇಲೆ ಅದಕ್ಕಿಿಂತ ಇನ್ನೇನು ಬೇಕಾಗಿದೆ ಎಂದರು.
ಎಲ್ಲದರಲ್ಲೂ ರಾಜಕೀಯ ಮಾಡುವುದು ಒಳ್ಳೆೆಯದಲ್ಲ. ಹೆಣ್ಣುಮಗಳ ವಿಚಾರವನ್ನು ಕೈಗೆತ್ತಿಿಕೊಂಡು ರಾಜಕೀಯ ಮಾಡುವುದು ಸರಿ ಕಾಣುವುದಿಲ್ಲ ಎಂದು ಹೇಳಿದರು. ಯಾವ ಪಕ್ಷದವನ್ನು ಅವರ ರಾಜಕೀಯ ಪಕ್ಷದ ಹಿನ್ನೆೆಲೆಯಲ್ಲಿ ಟಾರ್ಗೆಟ್ ಮಾಡುವುದಿಲ್ಲ. ಪೊಲೀಸರು ಆ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ, ಮಾಡಕೂಡದು. ಇದಕ್ಕೆೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ. ಯಾವುದೇ ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಕ್ರಮ ಬಾಂಗ್ಲಾಾ ವಲಿಸಗರನ್ನು ಹಿಡಿದು, ಗಡಿಪಾರು ಮಾಡಲಾಗುತ್ತಿಿದೆ. ಈಗಾಗಲೇ ಸಾಕಷ್ಟು ಪ್ರಕರಣಗಳನ್ನು ಮಾಡಿದ್ದೇವೆ. ಬಾಂಗ್ಲಾಾ ದೇಶದವರು ರಾಜ್ಯದಲ್ಲಿ ಅನಧಿಕೃತವಾಗಿ ಎಲ್ಲಿಯೇ ಇದ್ದರು ಪತ್ತೆೆ ಹಚ್ಚಿಿ, ಗಡಿಪಾರು ಮಾಡುತ್ತೇವೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ