Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಲೂರು, ಹಳೇಬೀಡಿಗೆ ಯುನೆಸ್ಕೋ ಮನ್ನಣೆ ಸಿಗುವ ನಿರೀಕ್ಷೆ– ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು, ಜನವರಿ 19: ಬೇಲೂರು, ಹಳೇಬೀಡಿಗೆ ಯುನೆಸ್ಕೋ ಮನ್ನಣೆ ಸಿಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಚಿಕ್ಕಮಗಳೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಕೃಷಿ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ ಆಯೋಜಿಸಿರುವ “ "ಚಿಕ್ಕಮಗಳೂರು ಹಬ್ಬ”ದ ಉದ್ಘಾಟಿಸಿ ಮಾತನಾಡಿದರು.

ನಿಸರ್ಗದ ಸಂಪತ್ತು ಇರುವ ಜೊತೆ ಜಿಲ್ಲೆ ಐತಿಹಾಸಿಕವಾಗಿಯೂ ಶ್ರೀಮಂತವಾಗಿದೆ. ಹೊಯ್ಸಳ ಸಾಮ್ರಾಜ್ಯ ದ ಕಾಲದಲ್ಲಿ ಸಂಸ್ಕೃತಿ, ಶಿಲ್ಪಕಲೆ ಇರುವ ಬೇಲೂರು , ಹಳೇಬೀಡು ಕ್ಷೇತ್ರಕ್ಕೆ ಕೆಲವೇ ತಿಂಗಳುಗಳಲ್ಲಿ ಯೂನಿಸ್ಕೋದ ಮನ್ನಣೆ ಸಿಗುವ ನಿರೀಕ್ಷೆಯಿದೆ. ತರೀಕೆರೆ ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದೆ. ಶೃಂಗೇರಿಯ ಶಾರದಾಂಬೆ, ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರ ಜಿಲ್ಲೆಯಲ್ಲಿದ್ದು, ವಿದ್ಯೆ ಮತ್ತು ಅನ್ನವನ್ನು ಜಿಲ್ಲೆಗೆ ಕರುಣಿಸಿದ್ದಾರೆ ಎಂದರು.

ಚಿಕ್ಕಮಗಳೂರು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸಬೇಕಿದೆ. ಜಿಲ್ಲೆಯಲ್ಲಿ ಹೆಲಿಕಾಪ್ಟರ್ ರೈಡ್ ನ್ನು ಒಳಗೊಂಡಂತೆ ಪ್ರವಾಸಿ ಹಬ್ ಮಾಡುತ್ತಿರುವುದು ಒಳ್ಳಯ ಕೆಲಸ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಟ್ರ್ಯಾಕ್ ರೇಸಿಂಗ್, ಗ್ಲೈಡಿಂಗ್, ಗಾಲ್ಫಿಂಗ್ ಸೇರಿದಂತೆ ಅಡ್ವೆಂಚರ್ ಟೂರಿಸಂ (ಸಾಹಸ ಪ್ರವಾಸಿ ತಾಣ) ಅಭಿವೃದ್ಧಿ ಪಡಿಸಲು ಸರ್ಕಾರ ಎಲ್ಲ ಸಹಕಾರ ನೀಡಲಿದೆ. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.



ಚಿಕ್ಕಮಗಳೂರಿನ ಗ್ರಾಮೀಣ ಭಾಗದ ಮನೆ ಮನೆ ನೀರು :

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ಕಾರ ಹಲವು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪ್ರಧಾನಿ ಮೋದಿಯವರು ದೇಶದ ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ಕಳೆದ 2 ವರ್ಷದಲ್ಲಿ 50 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ತಲುಪಿಸಲಾಗಿದೆ. ತರೀಕೆರೆ, ಕಡೂರು, ಚಿಕ್ಕಮಗಳೂರಿನಲ್ಲಿ ಸುಮಾರು 1400 ಕೋಟಿ ರೂ.ಗಳಲ್ಲಿ ಮನೆಮನೆಗೆ ಕುಡಿಯುವ ನೀರು ತಲುಪಿಸಲಾಗುತ್ತಿದೆ. ಗೋಂದಿ ಕೆರೆ ತುಂಬಿಸುವ ಯೋಜನೆಗೆ 12 ಕೋಟಿ ರೂ. ಅನುಷ್ಠಾನಗೊಳಿಸಲಾಗುವುದು ಎಂದರು.

ಚಿಕ್ಕಮಗಳೂರಿನಲ್ಲಿ ಆರೋಗ್ಯ, ಮನಸ್ಸಿಗೆ ಹೊಸ ಚೈತನ್ಯ :

ಚಿಕ್ಕಮಗಳೂರಿನಲ್ಲಿ ಶುದ್ಧವಾದ ಹವಾಮಾನವಿರುವುದರಿಂದ ಇಲ್ಲಿಗೆ ಬಂದರೆ ಆರೋಗ್ಯ, ಮನಸ್ಸಿಗೆ ಹೊಸ ಚೈತನ್ಯ ಬರುತ್ತದೆ. ಕೇರಳ ರಾಜ್ಯವನ್ನು ದೇವರ ನಾಡು ಎನ್ನುತ್ತಾರೆ. ಆದರೆ ಕರಾವಳಿ, ಪಶ್ಚಿಮ ಘಟ, ಬಯಲು ಸೀಮೆ, ಕನ್ನಡ ನಾಡು, ನುಡಿ ಸಂಸ್ಕೃತಿಯನ್ನು ನೋಡಿದರೆ , ದೇವರಿಂದ ಬಹುವಾಗಿ ಪ್ರೀತಿಸಲ್ಪಟ್ಟ ರಾಜ್ಯ ವೆಂದು ಹೇಳಬಹುದು. ನಿಸರ್ಗದತ್ತವಾದ ಕೊಡುಗೆಯನ್ನು ದೇವರು ನೀಡಿದ್ದಾರೆ. ಕವಿಗಳು ಹಾಡಿ ಹೊಗಳಿದ್ದಾರೆ. ಹಸುರಿನ ಗಿರಿಗಳ ಸಾಲೇ ಎಂದು ಕುವೆಂಪುರವರು ಬರೆದಿದ್ದಾರೆ. ಇಂತಹ ಹಸಿರನಾಡಿನಲ್ಲಿ ಹುಟ್ಟಿ ಬೆಳೆದು ಬದುಕುತ್ತಿರುವವರು ಪುಣ್ಯವಂತರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರ್ನಾಟಕದ ಜೀವನದಿಗಳಾದ ಪಂಚನದಿಗಳು ಹುಟ್ಟಿದೆ. ಪಶ್ಚಿಮ ಘಟ್ಟ ಇಲ್ಲದಿದ್ದರೆ ಇಡೀ ದಕ್ಷಿಣ ಭಾರತ ಬರಡಾಗುತ್ತಿತ್ತು. ಎಲ್ಲ ನದಿಗಳು ಪಶ್ಚಿಮದಲ್ಲಿ ಹುಟ್ಟಿ ಪೂರ್ವಕ್ಕೆ ಹರಿಯುತ್ತವೆ ಎಂದರು.

ಮುಂದಿನ ವರ್ಷ ಹೆಲಿಪೋರ್ಟ್ ಸಿದ್ಧವಾಗಿರಬೇಕು

ಎಲ್ಲಾ ಬೆಂಬಲವನ್ನು ಒದಗಿಸಲಾಗುವುದು. ಬರುವ ದಿನಗಳಲ್ಲಿ ಬದಲಾವಣೆ ತರಲಾಗುವುದು. ಈಗಾಗಲೇ ಹೆಲಿಪೋರ್ಟ್ ಗಾಗಿ 30 ಕೋಟಿ ರೂ.ಗಳನ್ನು ನೀಡಲಾಗಿದ್ದು, ಅದನ್ನು ಕೂಡಲೇ ಕೈಗೊಳ್ಳಲಾಗುವುದು. ಸುಮಾರು 40 ಎಕರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭ ಮಾಡಿದರೆ, ಅದಕ್ಕೆ ಅನುದಾನ ಒದಗಿಸಲಾಗುವುದು. ಮುಂದಿನ ವರ್ಷ ಹೆಲಿಪೋರ್ಟ್ ಸಿದ್ಧವಾಗಿರಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಈ ವರ್ಷ ರೋಪ್ ವೇ ಗೆ ಸಹ ಮಂಜೂರು ಮಾಡಲಾಗಿದೆ. ಅನುದಾನಕ್ಕೆ ಅನುಮತಿ ನೀಡುವ ಭರವಸೆ ದೊರೆತಿದೆ ಎಂದರು.

ಮೊಬೈಲ್ ಕ್ಲಿನಿಕ್

ಸಿಎಂ ಆರೋಗ್ಯ ವಾಹಿನಿ ಎಂದು ಬಜೆಟ್ ನಲ್ಲಿ 11 ಕೋಟಿ ರೂ.ಗಳನ್ನು ಚಿಕ್ಕಮಗಳೂರಿಗೆ ನೀಡಲಾಗಿದೆ. ಪ್ರತಿ ತಾಲ್ಲೂಕಿಗೆ ಮೊಬೈಲ್ ಕ್ಲಿನಿಕ್ ಒದಗಿಸಲಾಗುತ್ತಿದ್ದು, ಮುಂದಿನ ತಿಂಗಳು ಚಾಲನೆ ನೀಡಲಾಗುವುದು ಎಂದರು.ಮೊಬೈಲ್ ಕ್ಲಿನಿಕ್ ಒದಗಿಸಲು ಆಯ್ಕೆಯಾಗಿರುವ 5 ಜಿಲ್ಲೆಗಳಲ್ಲಿ ಚಿಕ್ಕಮಗಳೂರು ಕೂಡ ಒಂದು. ಚಿಕ್ಕಮಗಳೂರು ಹಬ್ಬ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿ. ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಇನ್ನೊಬ್ಬರಿಗೆ ಅನ್ಯಾಯವಾಗದಂತೆ ನ್ಯಾಯದಾನ

ಕಲೆ, ಕಲಾವಿದರು, ಭಾಷೆ, ಎಲ್ಲವೂ ಮನಸ್ಸುಗಳನ್ನು ಕೂಡಿಸುತ್ತದೆ. ನಾಗರಿಕತೆ ಸಂಸ್ಕೃತಿಯ ವ್ಯತ್ಯಾಸ ತಿಳಿದುಕೊಳ್ಳಬೇಕು. ಇದರ ಕಲ್ಪನೆ ಬರಲು ಇಂಥ ಹಬ್ಬಗಳು ಸಹಕಾರಿ. ಕಲಾವಿದರು. ಕಲೆಗೆ ಬೆಲೆ ನೀಡಬೇಕು. ಶಾಂತಿ, ಸಮಾಧಾನದಿಂದ ಕೂತು ಮಾತನಾಡಿದಾಗ ಎಲ್ಲಾ ಸಮಸ್ಯೆಗೂ ಪರಿಹಾರವಿದೆ. ದತ್ತ ಪೀಠದ ವಿಚಾರ ದಲ್ಲಿ ಅನ್ಯಾಯವಾಗಿರುವುದಕ್ಕೆ ನ್ಯಾಯ ಕೊಡೋಣ, ಆದರೆ ಇನ್ನೊಬ್ಬರಿಗೆ ಅನ್ಯಾಯವಾಗದಂತೆ ನ್ಯಾಯದಾನ ಮಾಡಬೇಕು. ಶಾಂತಿ ಸೌಹಾರ್ದತೆ, ಭಾತೃತ್ವದಲ್ಲಿ ಇನ್ನಷ್ಟು ಕೆಲಸ ಮಾಡೋಣ. ಚಿಕ್ಕಮಗಳೂರಿನ ಶ್ರೇಯಸ್ಸು ಆಕಾಶವನ್ನು ಮುಟ್ಟಲಿ ಎಲ್ಲರ ಹಬ್ಬವಾಗಲಿ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ