Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂ-ಮೈ ದಶಪಥ ಹೆದ್ದಾರಿ ಅಪಘಾತ ತಡೆಗೆ ತಜ್ಞರ ಸಮಿತಿ

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.26: ಇತ್ತೀಚೆಗಷ್ಟೇ ಉದ್ಘಾಟನೆಗೊಂಡು ಕೆಲವೇ ತಿಂಗಳಲ್ಲಿ ನೂರಾರು ಜನರ ಸಾವಿಗೆ ಕಾರಣವಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಬಗ್ಗೆ ರಾಜ್ಯ ಸರ್ಕಾರ ಕೊನೆಗೂ ಗಮನವಹಿಸಿದೆ.



ಈ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನಲೆಯಲ್ಲಿ ರಸ್ತೆ ನಿರ್ಮಾಣದಲ್ಲಿ ಆಗಿರಬಹುದಾದ ಲೋಪ ಪರಿಶೀಲನೆಗೆ ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿಗಳಿಗೆ ಒತ್ತಾಯಿಸಲು

ಇಂದು ವಿಧಾನಸೌಧದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಚೆಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಮಂಡ್ಯ ಜಿಲ್ಲಾ ಸಂಸದರು ಮತ್ತು ಶಾಸಕರ ಸಮ್ಮುಖದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಉನ್ನತ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರು ಮೈಸೂರು ರಸ್ತೆಯಲ್ಲಿ ಅಪಘಾತಗಳು ಪ್ರತಿದಿನ ವರದಿಯಾಗುತ್ತಿರುವ ಬಗ್ಗೆ ಸಚಿವರು ಆತಂಕ ವ್ಯಕ್ತಪಡಿಸಿದ್ದು ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಿರುವುದಕ್ಕೆ ಸಚಿವರು, ಸಂಸದರು, ಶಾಸಕರಿಂದ ಅಸಮಾಧಾನ ವ್ಯಕ್ತವಾಯಿತು.

ಅವೈಜ್ಞಾನಿಕ ಬೈಪಾಸ್ ರಸ್ತೆ ನಿರ್ಮಿಸಿರುವುದು, ಲೈಟ್ ವ್ಯವಸ್ಥೆ ಇರುವುದಿಲ್ಲ, ಸಂಪರ್ಕ ರಸ್ತೆ ಅಭಿವೃದ್ಧಿ ಸಮರ್ಪಕವಾಗಿ ಆಗದಿರುವುದು, ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳ ಸೌಲಭ್ಯವಿಲ್ಲದಿರುವುದರಿಂದ

ದರೋಡೆ ಪ್ರಕರಣಗಳು ವರದಿಯಾಗುತ್ತಿವೆ. ರಸ್ತೆಯಲ್ಲಿ ಜನರು ಓಡಾಡಲು ಭಯಪಡುವಂತ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಮಧ್ಯೆ ನಿರ್ಮಿಸಿರುವ ಡಿವೈಡರ್ ಕೇವಲ 225.ಸೆ.ಮಿ ಇದೆ. ಇದನ್ನು ಕನಿಷ್ಟ 4 ಅಡಿ ಇದ್ದರೆ ಎಷ್ಟೊ ಅಪಘಾತಗಳು ತಪ್ಪುತಿತ್ತು. ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಂಡಿಲ್ಲ ಮತ್ತು ರಸ್ತೆಯಲ್ಲಿ ಮರಳು ಸಂಗ್ರಹವಾಗುವುದು ತಕ್ಷಣ ಸರಿಪಡಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ರಸ್ತೆ ಪಕ್ಕದಲ್ಲಿರುವ ವಿದ್ಯುತ್ ಪರಿವರ್ತಕಗಳ ಸ್ಥಳಾಂತರ, ಆಗಮನ, ನಿರ್ಗಮನ ಮಾರ್ಗಗಳು ಅವೈಜ್ಞಾನಿಕ ವಾಗಿರುವುದು. ಟೋಲ್‌ನಲ್ಲಿ ಗಣ್ಯರಿಗೆ‌, ಅಂಬ್ಯೂಲೆನ್ಸ್‌ ತುರ್ತು ಸಂಚಾರಕ್ಕೆ ಪ್ರತ್ಯೇಕ ಮಾರ್ಗ ನಿರ್ಮಿಸಬೇಕು. ಸಾರ್ವಜನಿಕ‌ ಹಿತದೃಷ್ಟಿಯಿಂದ ಎಲ್ಲಾ ಲೋಪಗಳನ್ನು ಕಾಲಮಿತಿಯೊಳಗೆ ಸರಿಪಡಿಸಬೇಕೆಂದು ಅಧಿಕಾರಿಗಳಿಗೆ ಸಚಿವರಾದ ಚೆಲುವರಾಯಸ್ವಾಮಿ ಅವರು ತಾಕೀತು ಮಾಡಿದರು.

ಸಂಸದರು, ಶಾಸಕರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಗಳನ್ನೊಳಗೊಂಡ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಗಳನ್ನು ಒತ್ತಾಯಿಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಸಮಿತಿಯು ಶೀಘ್ರದಲ್ಲಿ ಅಪಘಾತ ನಡೆಯುವ ಸ್ಥಳಗಳು ಮತ್ತು ಎಂಟ್ರಿ ಮತ್ತು ಎಕ್ಸಿಟ್ ಸ್ಥಳಗಳನ್ನು ನಿರ್ಮಾಣ ಸಮಸ್ಯೆಗಳನ್ನು ಪರಿಶೀಲಿಸಿ ಕಾಲಮಿತಿಯಲ್ಲಿ ವರದಿ ನೀಡಲು ತೀರ್ಮಾನಿಸಲಾಯಿತು.

ಈ ವರದಿಯನ್ನು ಮುಖ್ಯಮಂತ್ರಿಗಳಿಗೆ ಮತ್ತು ಲೋಕೋಪಯೋಗಿ ಸಚಿವರಿಗೆ ಸಲ್ಲಿಸಲಾಗುವುದು. ಭಾರತೀಯ ಹೆದ್ದಾರಿ ಪ್ರಾಧಿಕಾರದ ಮಂತ್ರಿಗಳ ಜೊತೆ ಮಾತನಾಡಿ ಸರಿಪಡಿಸುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ , ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ಗಾಣಿಗ ರವಿಕುಮಾರ್, ಉದಯ್, ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ ಮತ್ತು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ