Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಿಜೆಪಿಯಿಂದ ಮಹಾ ಸಂಪರ್ಕ ಅಭಿಯಾನ: ಭಗವಂತ ಖೂಬಾ

ಬೆಂಗಳೂರು: ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಯಶಸ್ವಿ 9 ವರ್ಷಗಳ ಆಡಳಿತ ಮತ್ತು ಸಾಧನೆಗಳ ಕುರಿತು ತಿಳಿಸಲು ಬಿಜೆಪಿ ವತಿಯಿಂದ ಜೂನ್ 30ರವರೆಗೆ ಮಹಾ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಕೇಂದ್ರದ ಬಿಜೆಪಿ ಸರಕಾರವು 9 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ”ದಲ್ಲಿ ಇಂದು ರಾಜ್ಯದ ಆಯ್ದ ಲೋಕಸಭಾ ಸದಸ್ಯರ ಸಭೆ ನಡೆಯಿತು. ಈ ಸಭೆಯ ಬಳಿಕ ಭಗವಂತ ಖೂಬಾ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಕೇಂದ್ರದಲ್ಲಿ ನರೇಂದ್ರ ಮೋದಿಜಿ ಅವರ ಸರಕಾರವು ಯಶಸ್ವಿಯಾಗಿ ಮತ್ತು ಫಲಪ್ರದವಾಗಿ 9 ವರ್ಷಗಳನ್ನು ಪೂರೈಸಿದೆ. ಇದರ ಅಂಗವಾಗಿ ಇಡೀ ದೇಶಾದ್ಯಂತ ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ ಕಳೆದ 9 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಮೂಲಭೂತ ಸೌಕರ್ಯ ಯೋಜನೆಗಳ ಯಶಸ್ವಿ ಅನುಷ್ಠಾನ, ಸಾಮಾಜಿಕ ಸುರಕ್ಷತಾ ಯೋಜನೆಗಳ ಜಾರಿ ಸೇರಿದಂತೆ ಅನೇಕ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಜೂನ್ 30ರವರೆಗೆ ಮಹಾಸಂಪರ್ಕ ಅಭಿಯಾನವನ್ನು ಬಿಜೆಪಿ ಕೈಗೊಂಡಿದೆ ಎಂದರು.

ಈ ಅಭಿಯಾನದಲ್ಲಿ ಲಾಭಾರ್ಥಿಗಳ ಸಮಾವೇಶ ನಡೆಸಲಾಗುವುದು. ಕೇಂದ್ರ ಸರಕಾರದ ಅನುದಾನದಿಂದ ಲೋಕಸಭಾ ಕ್ಷೇತ್ರಗಳಲ್ಲಿ ಕೈಗೊಂಡ ಮೂಲಸೌಕರ್ಯಗಳ ವಿವರ ಕೊಡಲಾಗುವುದು. ಪ್ರಬುದ್ಧರ ಸಭೆ, ವ್ಯಾಪಾರಸ್ಥರ ಸಭೆ, ಯೋಗ ದಿನ ಆಚರಣೆ ಸೇರಿ ಅನೇಕ ಆಯಾಮಗಳಲ್ಲಿ ಕಾರ್ಯಕರ್ತರು ಕೆಲಸ ಮಾಡಲಿದ್ದಾರೆ. 2024ರ ಲೋಕಸಭಾ ಚುನಾವಣಾ ತಯಾರಿ ದೃಷ್ಟಿಕೋನದಿಂದ ಕೆಲಸ ನಿರ್ವಹಿಸಲಾಗುವುದು ಎಂದು ವಿವರಿಸಿದರು.

ಇವತ್ತು ರಾಜ್ಯಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಆಯ್ದ ಲೋಕಸಭಾ ಸದಸ್ಯರ ಸಭೆ ನಡೆಸಲಾಗಿದೆ. ಈ ವಿಚಾರಗಳ ಚರ್ಚೆ ನಡೆದಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಸಂಕಲ್ಪದೊಂದಿಗೆ, ಕಾರ್ಯತಂತ್ರ ಮತ್ತು ಕಾರ್ಯಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

2014ಕ್ಕಿಂತ ಮೊದಲು 10 ವರ್ಷಗಳ ಕಾಲ ಯುಪಿಎ ಆಳ್ವಿಕೆ ಇತ್ತು. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತದಲ್ಲಿ ಯಾವ ರೀತಿ ಅಭಿವೃದ್ಧಿಗೆ ಹಿನ್ನಡೆ ಆಗಿತ್ತು ಮತ್ತು ಕಳೆದ 9 ವರ್ಷಗಳಲ್ಲಿ ನಾವು ಅಭಿವೃದ್ಧಿಯನ್ನು ಯಾವ ಮಟ್ಟಕ್ಕೆ ಏರಿಸಿದ್ದೇವೆ ಎಂದು ತಿಳಿಸಲಾಗುವುದು.

ಭಾರತದ ಜಿಡಿಪಿ 4.8 ಶೇ ಇರುವುದು, ಹಣದುಬ್ಬರವು ಶೇ 6.3 ಇದೆ; ನಿರುದ್ಯೋಗ ಪ್ರಮಾಣ ಶೇ 6.8 ಇದೆ. ಯುಪಿಎ ಕಾಲದಲ್ಲಿ ಜಿಡಿಪಿ- ಹಣದುಬ್ಬರ, ನಿರುದ್ಯೋಗ ಮಟ್ಟವು ಡಬಲ್ ಡಿಜಿಟ್‍ನಲ್ಲಿತ್ತು. ಈ ಪ್ರಗತಿ ಸಾಧ್ಯವಾಗಲು ನರೇಂದ್ರ ಮೋದಿಜಿ ಅವರ ಸಮರ್ಥ ಆಡಳಿತ, ದಿಟ್ಟ ನಿರ್ಧಾರ ಮತ್ತು ಯೋಜನೆಗಳು ಕಾರಣ ಎಂದು ಜನರಿಗೆ ಮನವರಿಕೆ ಆಗಿದೆ. ಇದನ್ನು ಮತ್ತೊಮ್ಮೆ ಜನರಿಗೆ ತಿಳಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ನೂತನ ಸಂಸತ್ ಭವನದ ಉದ್ಘಾಟನೆಗೆ ಹಲವು ವಿರೋಧ ಪಕ್ಷದವರು ಗೈರುಹಾಜರಾಗಿದ್ದರು. ಇದು ಶೋಭೆ ತರುವ ವಿಚಾರವಲ್ಲ. ವಿರೋಧ ಪಕ್ಷದವರು ತಮ್ಮ ವಿರೋಧಕ್ಕೆ ಕಾರಣವನ್ನು ಸಾರ್ವಜನಿಕವಾಗಿ ಹೇಳಲು ಅವರಿಗೆ ವಿಷಯಗಳಿಲ್ಲ ಎಂದು ಟೀಕಿಸಿದರು. ಮೋದಿಯವರ ಉಪಸ್ಥಿತಿಯ ಯಾವುದೇ ಕಾರ್ಯಕ್ರಮ ಇದ್ದರೂ ಅದು ಮೋದಿಮಯ ಆಗುತ್ತಿದೆ. ಇದಕ್ಕೆ ಅವರ ಜನಪ್ರಿಯತೆ ಮತ್ತು ವರ್ಚಸ್ಸೇ ಕಾರಣ ಎಂದು ವಿಶ್ಲೇಷಿಸಿದರು.

ಮೋದಿಜಿ ಅವರ ಜನಪ್ರಿಯತೆ ಮತ್ತು ವರ್ಚಸ್ಸನ್ನು ಸಹಿಸಲು ವಿಪಕ್ಷಗಳಿಗೆ ಆಗುತ್ತಿಲ್ಲ. ಹೀಗಾಗಿ ವಿಪಕ್ಷದವರು ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೈರುಹಾಜರಾಗಿದ್ದರು ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಕುಸ್ತಿಪಟುಗಳ ವಿಚಾರ ನ್ಯಾಯಾಲಯದಲ್ಲಿದೆ. ಆದರೂ ಅಗತ್ಯ ಕ್ರಮಗಳನ್ನು ಕೇಂದ್ರ ಸರಕಾರ ಕೈಗೊಂಡಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ