Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ದೇಶ ವಿಭಜಿಸಿದವರಿಂದ ಭಾರತ ಜೋಡೊ ಯಾತ್ರೆ: ಬೊಮ್ಮಾಯಿ ಟೀಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.15: ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜಿಸಿದವರು ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ಸ್ವಾತಂತ್ರ್ಯೋತ್ವವದ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ವಿಭಜಿಸಿದರು, ಕಾಂಗ್ರೆಸ್ ನವರು ಅಧಿಕಾರದ ಆಸೆಗೆ ದೇಶ ವಿಭಜನೆಗೆ ಒಪ್ಪಿಕೊಂಡರು. ಭಾರತ ಥೊಡೊ ಆಗಿನಿಂದಲೇ ಆರಂಭವಾಗಿದೆ. ಈಗ ಭಾರತ ಜೋಡೊ ಯಾತ್ರೆ ಮಾಡುತ್ತಾರೆ.‌ ಇದು ವಿಪರ್ಯಾಸ ಎಂದರು.

ಸ್ವಾತಂತ್ರ್ಯ ಎಲ್ಲರಿಗೂ ಬೇಕು. ಸ್ವತಂತ್ರ ಅನ್ನುವ ಪದ ಎಲ್ಲರಿಗೂ ಇಷ್ಟ. ಮಕ್ಕಳು ಶಾಲೆಯ ಗುರುಗಳಿಂದ, ಅಪ್ಪ ಅಮ್ಮನಿಂದ ಸ್ವತಂತ್ರ ‌ಪಡೆಯಲು ಬಯಸುತ್ತಾರೆ. ತೆರಿಗೆದಾರರು ಸರ್ಕಾರದಿಂದ ಸ್ವಾತಂತ್ರ್ಯ ಪಡೆಯಲು ಬಯಸುತ್ತಾರೆ. ಆದರೆ, ನಾವು ಸರ್ವ ಸ್ವತಂತ್ರ ವಾಗಿ ಬದುಕಲು ಸಾಧ್ಯವಿಲ್ಲ. ಮನುಷ್ಯ ಸಂಘ ಜಿವಿ, ಮನೆ, ಊರು, ರಾಜ್ಯ ದೇಶ ಅಂತ ಕಟ್ಟಿಕೊಂಡಿದ್ದೇವೆ. ಎಲ್ಲರೂ ನಮ್ಮ ದೇಶದ ಮೇಲೆ ಯಾಕೆ ದಾಳಿ ಮಾಡುತ್ತಾರೆ ಎಂದರೆ, ಭಾರತ ಸಮೃದ್ಧವಾಗಿದೆ. ಹೀಗಾಗಿ ಮುಸ್ಲೀಮರು ಹಾಗೂ ಬ್ರಿಟೀಷರು ಒಂಬೈನೂರು ವರ್ಷ ಆಳಿದರು ಎಂದು ಅಭಿಪ್ರಾಯ ಪಟ್ಟರು.

ಎಲ್ಲ ಧರ್ಮಗಳು ಸಂಘರ್ಷದಿಂದ ಹುಟ್ಡಿಕೊಂಡಿವೆ. ಆದರೆ, ಹಿಂದೂ ಧರ್ಮ ಮಾತ್ರ ಸಂಸ್ಕಾರದಿಂದ ಹುಟ್ಟಿಕೊಂಡಿದೆ. ನಮ್ಮ ಇತಿಹಾಸದಲ್ಲಿ ಅನೇಕ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರು ಇದ್ದಾರೆ. ರಾಣಿ ಚೆನ್ನಮ್ಮ, ರಾಯಣ್ಣ, ಬಾಲಬಂಗಾಧರ ತಿಲಕ, ಭಗತ್ ಸಿಂಗ್, ರಾಜಗುರು, ಇವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಸುಭಾಶ್ಚಂದ್ರ ಬೋಸ್ ಕಾಂಗ್ರೆಸ್ ನವರಾಗಿದ್ದರೂ ಪಕ್ಷ ತೊರೆದು ಹೋರಾಟ ನಡೆಸಿದರು. ಅನೇಕ ಅನಾಮಧೆಯರಿದ್ದಾರೆ. ಇತಿಹಾಸದ ಸತ್ಯವನ್ನು ಹೇಳಲು ಮುಂದೆ ಬಂದಿಲ್ಲ ಎಂದರು.

ಭಾರತ ವಿಭಜನೆಯ ಸಂದರ್ಭದಲ್ಲಿ ಲಕ್ಷಾಂತರ ಜನರು ಪ್ರಾಣ‌ಕಳೆದುಕೊಂಡರು, ಅನೇಕ ಮಕ್ಕಳು ಅನಾಥರಾದರು. ಇಡಿ ಜಗತ್ತಿನಲ್ಲಿ ಅತ್ಯಂತ ಕರಾಳ ಇತಿಹಾಸ ಬೇರೆ ಯಾವ ದೇಶದಲ್ಲಿಯೂ ಇಲ್ಲ. ಒಂದೇ ದಿನ ಸ್ವಾತಂತ್ರ್ಯ ಮತ್ತು ಒಂದೇ ದಿನ ವಿಭಜನೆ ಯಾವ ದೇಶದಲ್ಲಿಯೂ ಇಲ್ಲ ಎಂದರು.

ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ 9 ವರ್ಷಗಳಿಂದ ಸಕಾರಾತ್ಮಕ ಆಡಳಿತ ನೀಡುತ್ತಿದ್ದಾರೆ. ಕಾಶ್ಮೀರದಲ್ಲಿ 370 ರದ್ದು ಮಾಡಿದ್ದಾರೆ. ವಿಜ್ಞಾನ ತಂತ್ರಜ್ಞಾನ, ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಮಾಡಿದ್ದಾರೆ. ಮೋದಿ ನಾಯಕತ್ವವನ್ನು ನಮ್ಮ ವಿರೋಧಿ ದೇಶಗಳೆ ಮೆಚ್ಚಿಕೊಳ್ಳುತ್ತಿವೆ. ಆದರೆ, ನಮ್ಮ ದೇಶದ ಕೆಲವು ನಾಯಕರು ವಿದೇಶಗಳಲ್ಲಿ ಹೋಗಿ ಭಾರತವನ್ನು ದ್ವೇಷಿಸುವ ಕೆಲಸ ಮಾಡಿದ್ದಾರೆ. ಭಾರತದಲ್ಲಿ ಅಲ್ಪ ಸಂಖ್ಯಾತರು ಸುರಕ್ಷಿತರಾಗಿಲ್ಲ ಎಂದು ಹೇಳುತ್ತಾರೆ. ಆದರೆ, ಮುಸ್ಲೀಮರೇ ಬಹುಸಂಖ್ಯಾತರಾಗಿರುವ ದೇಶಗಳಲ್ಲಿ ಅವರ ಪರಸ್ಥಿತಿ ಏನಿದೆ ಎನ್ನುವುದನ್ನು ನೋಡಬೇಕು. ಸಮರ್ಥ ಭಾರತ ನಿರ್ಮಾಣ ಮಾಡುವ ಪ್ರಯತ್ನ ಒಂದೆಡೆ ನಡೆಯುತ್ತಿದ್ದರೆ, ಇಸ್ಲಾಂ ರಾಷ್ಟ್ರ ಮಾಡುವ ಪ್ರಯತ್ನ ನಡೆಯುತ್ತಿದೆ. ಭಾರತಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅಗತ್ಯವಿದೆ. ಅವರ ಜೊತೆಗೆ ನಾವೂ ದೇಶದ ಭವಿಷ್ಯಕ್ಕಾಗಿ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತಿತರರು ಹಾಜರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ