Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೀದರ್‌ : ಬಂಡಾಯ ಅಭ್ಯರ್ಥಿಯಾಗಿ ಸ್ವರ್ಥಿಸುವುದು ಖಚಿತ

ಸುದ್ದಿಮೂಲ ವಾರ್ತೆ,

ಬೀದರ: ಮೇ.10ರಂದು ನಡೆಯಲಿರುವ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌  ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಬೀದರ್ ದಕ್ಷಿಣ ಕ್ಷೇತ್ರದ ಮತದಾರರು, ಅಭಿಮಾನಿಗಳು, ಹಿತೈಷಿಗಳು ಯಾರೂ ಅನ್ಯ ಪಕ್ಷಗಳ ಮುಖಂಡರ ಮಾತುಗಳಿಗೆ ಕಿವಿ ಕೊಡಬೇಡಿ. ಸೂರ್ಯ- ಚಂದ್ರರು ಇರುವುದೆಷ್ಟು ಸತ್ಯವೋ, ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುವುದು ಸಹ ಅಷ್ಟೇ ಸತ್ಯ ಎಂದು ಕಾಂಗ್ರೆಸ ಬಂಡಾಯ ಅಭ್ಯರ್ಥಿ ಚಂದ್ರಾಸಿಂಗ್ ಅವರು ತಿಳಿಸಿದ್ದಾರೆ.‌

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನನಗೆ ಸಿಗುತ್ತಿರುವ ಜನ ಬೆಂಬಲದಿಂದ ಎದುರಾಳಿ ಅಭ್ಯರ್ಥಿಗಳಲ್ಲಿ ನಡುಕ ಹುಟ್ಟಿದೆ. ಆದ್ದರಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎನ್ನುವ ಗಾಳಿ ಸುದ್ದಿಯನ್ನು ತೇಲಿ ಬಿಡಲಾಗಿದೆ. ನನ್ನ ಕಾರ್ಯಕರ್ತರು, ಅಭಿಮಾನಿಗಳು, ಕ್ಷೇತ್ರದ ಸಹಸ್ರಾರು ಸಂಖ್ಯೆಯ ಮತದಾರರು ಯಾವುದಕ್ಕೂ ಬೆಲೆ ಕೊಡಬೇಡಿ ಎಂದು ಚಂದ್ರಾಸಿಂಗ್ ಅವರು ಜನರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.

13ರಂದು ನಾಮಪತ್ರ ಸಲ್ಲಿಕೆ
ಏಪ್ರಿಲ 13 ರಂದು ತಾವು ನಾಮಪತ್ರ ಸಲ್ಲಿಸುತ್ತಿದ್ದು, ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಹಸ್ರಾರು ಮತದಾರರು, ಬೆಂಬಲಿಗರು, ಕಾರ್ಯಕರ್ತರು ಈ ವೇಳೆ ಹಾಜರಿದ್ದು, ಆಶೀರ್ವದಿಸಬೇಕು ಎಂದು ಚಂದ್ರಾಸಿಂಗ್ ಮನವಿ ಮಾಡಿದ್ದಾರೆ. ಎಪ್ರಿಲ 13 ರಂದು ಬೆಳಿಗ್ಗೆ 11ಕ್ಕೆ ಬೀದರ ನಗರದ ಗುಂಪಾ ರಸ್ತೆಯ ಕೈಲಾಶ್ ಲೇ ಔಟ್‍ನ ತಮ್ಮ ನಿವಾಸದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುತ್ತದೆ. ಆದ್ದರಿಂದ ಈ ವೇಳೆ ಕ್ಷೇತ್ರದ ಮತದಾರರು. ಅಭಿಮಾನಿಗಳು. ಕಾರ್ಯಕರ್ತರು. ಹಿತೈಷಿಗಳೆಲ್ಲ ಆಗಮಿಸಿ ನನಗೆ ಬೆಂಬಲ ಸೂಚಿಸಿ, ಆಶೀರ್ವಾದ ಮಾಡಬೇಕು ಎಂದು ಕಾಂಗ್ರೆಸ ಬಂಡಾಯ ಅಭ್ಯರ್ಥಿ ಚಂದ್ರಾಸಿಂಗ್ ಮನವಿ ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ