Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ಕಳ್ಳರ ಬಂಧನ : 41 ಬೈಕ್‌ಗಳ ವಶ

ಸುದ್ದಿಮೂಲ ವಾರ್ತೆ

ಹೊಸಕೋಟೆ, ನ.19 : ಮನೆಯ ಮುಂದೆ ಹಾಗೂ ಪಾರ್ಕಿಂಗ್‌ಗಳಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಬೈಕ್ ಕಳ್ಳರನ್ನು ಬಂಧಿಸಿ ಸುಮಾರು 35 ಲಕ್ಷ ಬೆಲೆಬಾಳುವ ಒಟ್ಟು 41 ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ಮೂಲದ ಕಲೀಂ ಬಂಧಿತ ಆರೋಪಿ. ಆರೋಪಿಯಿಂದ 17 ಡಿಯೋ ಸ್ಕೂಟರ್, 4 ಜಾಜ್ ಡಿಸ್ಕವರಿ, 6 ಪಲ್ಸರ್ ಬೈಕ್, 5 ಸ್ಪ್ಲೆಂಡರ್ ಮೋಟಾರ್ ಸೈಕಲ್, 6 ಆಕ್ಟಿವ ಹೋಂಡಾ, 1 ರಾಯಲ್ ಎನ್ಫೀಲ್ಡ್, 1 ಯಮಹಾ ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 41 ಪ್ರಕರಣಗಳನ್ನು ಬೇಧಿಸುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಕಲೀಮ್ ಪಾಷ ಮಾಲೂರು ಟೌನ್ ನಲ್ಲಿ ಒಂದು ಪಂಚರ್ ಅಂಗಡಿಯಲ್ಲಿ 2 ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದ. ಆ ಸಮಯದಲ್ಲಿ ಸುತ್ತಮುತ್ತಲ ಜನರನ್ನ ಪರಿಚಯ ಮಾಡಿಕೊಂಡಿದ್ದು, ನಂತರ ಬೆಂಗಳೂರು ನಗರಕ್ಕೆ ಬಂದು ನೆಲೆಸಿದ್ದ. ಬೆಂಗಳೂರಿನಲ್ಲಿ ಆತನ ಸ್ನೇಹಿತ ಜಮೀಲ್ ಜೊತೆಗೆ ಸೇರಿಕೊಂಡು ಹೊಸಕೋಟೆ ಟೌನ್, ಮಾಲೂರು ಮತ್ತು ಬೆಂಗಳೂರು ನಗರ ಸೇರಿದಂತೆ ಪಾರ್ಕಿಂಗ್ ಸ್ಥಳಗಳಲ್ಲಿ, ಮನೆಗಳ ಮುಂದೆ ಬೈಕ್ ನಿಲ್ಲಿಸಿ ಕೆಲಸ ಕಾರ್ಯಗಳಿಗೆ ಹೋಗುವ ಸಾರ್ವಜನಿಕರನ್ನ ಗುರಿಯಾಗಿಸಿಕೊಂಡು ಚಾಣಾಕ್ಷತನದಿಂದ ಹ್ಯಾಂಡಲ್ ಲಾಕ್ ಮುರಿದು ಇಗ್ನಿಷಿಯನ್ ಡೈರೆಕ್ಟ್ ಮಾಡಿಕೊಂಡು ಬೈಕ್ ಗಳನ್ನು ಕಳುವು ಮಾಡುತ್ತಿದ್ದ.

ಕಳವು ಮಾಡಿದ ಬೈಕ್ ಗಳನ್ನು ಈ ಹಿಂದೆ ಕೆಲಸ ಮಾಡುತ್ತಿದ್ದ ಮಾಲೂರು ಹಾಗೂ ಸುತ್ತಮುತ್ತಲಿನ ಪರಿಚಯ ಇರುವವರಿಗೆ ಕಡಿಮೆ ಬೆಲೆಗೆ ಬೈಕುಗಳನ್ನ ಮಾರಾಟ ಮಾಡಿ ದಾಖಲಾತಿಗಳನ್ನ ನಂತರ ನೀಡುವುದಾಗಿ ಹೇಳುತ್ತಿದ್ದ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡೆ ತಿಳಿಸಿದ್ದಾರೆ.

ಎಎಸ್ಪಿ ಪುರುಷೋತ್ತಮ್ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಿದ ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್ ಅಣ್ಣಾಸಾಹೇಬ್ ಪಾಟೀಲ್, ಪಿಐ ಅಶೋಕ್, ಪಿಎಸೈ ಸಂಪತ್ ಸೇರಿದಂತೆ ಅಪರಾಧ ವಿಭಾಗದ ಸಿಬ್ಬಂದಿಯನ್ನು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅಭಿನಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ