Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಬಿ ಆರ್ ಅಂಬೇಡ್ಕರ್ ಜೀವನ ಚರಿತ್ರೆ ಪ್ರತಿಯೊಬ್ಬರೂ ತಿಳಿಯಬೇಕು: ವಿ. ಮಂಜುನಾಥ್

ಸುದ್ದಿಮೂಲ ವಾರ್ತೆ
ದೇವನಹಳ್ಳಿ, ಏ.14: ಎಲ್ಲ ಜನತೆಗೆ ನ್ಯಾಯವನ್ನು ನೀಡುವ ಉದ್ದೇಶದಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಲು ಜಗತ್ತಿಗೆ ಒಂದು ನಿದರ್ಶನವಾದರು ಎಂದರೆ ತಪ್ಪಾಗಲಾರದು ಎಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ  ಪಕ್ಷೇತರ ಅಭ್ಯರ್ಥಿ ವೆಲ್ಪೇರ್ ಫೌಂಡೇಶನ್  ವಿ.ಮಂಜುನಾಥ್ ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಫೌಂಡೇಶನ್ ನ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರು ಸಹ
ಸಂವಿಧಾನ ತಿಳಿದುಕೊಳ್ಳಬೇಕು. ಆಗ ಮನುಷ್ಯನ ಬದುಕಿಗೆ ಒಂದು ಅರ್ಥ ಸಿಗುತ್ತದೆ ಹಾಗೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ಗೌರವವನ್ನು ತಂದುಕೊಟ್ಟಂತೆ ಎಂದು ಹೇಳಿದರು.

ಪ್ರತಿಯೊಬ್ಬರು ಸಹ ಸಂವಿಧಾನವನ್ನು ಗೌರವಿಸಬೇಕು. ಕಾರಣ ಸಂವಿಧಾನವು ರಾಜ್ಯದೆಲ್ಲಡೆ ಒಂದು ಸ್ಥಾನವನ್ನು ಪಡೆದುಕೊಂಡಿದೆ. ಆದ್ದರಿಂದ ಅದಕ್ಕೆ ಧಕ್ಕೆ ತರುವಂತಹ ಕೆಲಸವನ್ನು ಯಾರೊಬ್ಬರೂ ಮಾಡಬಾರದು ಎಂದರು.

ಈ ಸಮಯದಲ್ಲಿ ಮುಖಂಡರಾದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಆರ್.ಕೆ. ನಂಜೇಗೌಡ,
ಎಚ್.ವಿ ಶ್ರೀನಿವಾಸ್‌, ಆರ್.ಎಂ.ಸಿ.ಟಿ.ಮಂಜುನಾಥ್, ಕೇಶವ, ಹರೀಶ್, ವಿಶ್ವನಾಥ್, ಶ್ರೀನಿವಾಸ್, ಸೀನಪ್ಪ, ಕುರುಬರಹಳ್ಳಿ ದೇವರಾಜ್, ಚಪ್ಪರದಕ್ಕಲ್ಲು ರಾಜಣ್ಣ, ತೂಬಗೆರೆ ರಾಜಣ್ಣ, ದೇವನಹಳ್ಳಿ ಮಂಜುನಾಥ್ ಸೇರಿದಂತೆ ವೆಲ್ಫೇರ್ ಸಂಸ್ಥೆಯ ಸದಸ್ಯರು,ಕ್ಷೇತ್ರದ  ರೈತ ಮುಖಂಡರು ಹಾಗೂ ನಮ್ಮ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ