Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಲಾಟೆಯಲ್ಲಿ ಗಾಯಗೊಂಡಿದ್ದ ಬಿಜೆಪಿ ಕಾರ್ಯಕರ್ತ ನಾಗೇಶ್ ಆಸ್ಪತ್ರೆಯಿಂದ ಮನೆಗೆ ವರುಣಾದಲ್ಲಿ ಗಲಾಟೆ: ಕಾಂಗ್ರೆಸ್ - ಬಿಜೆಪಿ ಮಧ್ಯೆ ಆರೋಪ, ಪ್ರತ್ಯಾರೋಪ

‌ ಸುದ್ದಿಮೂಲ ವಾರ್ತೆ

ಮೈಸೂರು, ಏ.28: ಚುನಾವಣೆಯ ಪ್ರಚಾರ ಅಬ್ಬರ  ಹೆಚ್ಚಾಗುತ್ತಿದ್ದಂತೆ ಆರೋಪ, ಪ್ರತ್ರಾರೋಪಗಳು ಮತ್ತು ಟೀಕೆ, ಟಿಪ್ಪಣೆಗಳು ಎಲ್ಲೆ ಮೀರುತ್ತಿವೆ. ಹಾಗೆಯೇ ಹಲ್ಲೆ, ಕಲ್ಲು ತೂರಾಟ ಪ್ರಕರಣಗಳು ಮತ್ತು ವೈಯಕ್ತಿಕ ನೆಲೆಯಲ್ಲಿ ಆರೋಪ ಮಾಡಲಾಗುತ್ತಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣನವರು ಗುರುವಾರ ರಾತ್ರಿ ಪ್ರಚಾರ ಮಾಡುತ್ತಿದ್ದ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ  ಘರ್ಷಣೆ ನಡೆದು, ಕಲ್ಲು ತೂರಾಟ ನಡೆದು, ಓರ್ವ ಬಿಜೆಪಿ ಕಾರ್ಯಕರ್ತ ಗಾಯಗೊಂಡಿದ್ದ ಪ್ರಕರಣ ಈಗ ಮಗದಷ್ಟು ಆರೋಪ, ಟೀಕೆಗಳಿಗೆ ಗ್ರಾಸವಾಗಿದೆ. ಎರಡೂ ಪಕ್ಷಗಳ ನಡುವೆ ಈ ಘಟನೆ ಹಿನ್ನೆಲೆಯಲ್ಲಿ ಸಮರವೇ ನಡೆಯುತ್ತಿದೆ.

ಅಭ್ಯರ್ಥಿ ಸೋಮಣ್ಣ ಮತ್ತು ಸಂಸದ ಪ್ರತಾಪ್‌ ಸಿಂಹ ಮತ್ತವರ ಬೆಂಬಲಿಗರು ನೇರವಾಗಿ ಇದೇ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಸಿದ್ದರಾಮಯ್ಯನವರ ಕುಮ್ಮಕ್ಕಿನಿಂದಲೇ ನಡೆದಿದೆ. ಇದು ಅವರ ಪಾಳೆಗಾರಿಕೆಗೆ ಸ್ಪಷ್ಟ ನಿರ್ದಶನ. ಸೋಲುವ ಹತಾಶೆಯಿಂದ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ ಮಾಡಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯನವರು ಈ ಗಲಾಟೆಗೆ ಬಿಜೆಪಿಯವರೇ ನೇರ ಕಾರಣ, ಬಿಜೆಪಿ ಸಂಸದ ಕುಮ್ಮಕ್ಕಿನಿಂದಲೇ ಇದು ನಡೆದಿದೆ ಎಂದು ಹೇಳಿದ್ದರೆ, ಕಾಂಗ್ರೆಸ್‌ ವಕ್ತಾರ ಲಕ್ಷಣ ಅವರು ಮತದಾರರು ಕಾಂಗ್ರೆಸ್‌ ಪರ ಒಲಿಯುತ್ತಿರುವದನ್ನು ಸಹಿಸದೇ ಸುಖಾಸುಮ್ಮನೆ ಗಲಾಟೆಗಳನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಪ್ರತಿಯಾಗಿ ಟೀಕಿಸಿದ್ದಾರೆ.

ಏತ್ಮಧ್ಯೆ ಗಾಯಗೊಂಡು ಜೆಎಸ್‌ಎಸ್‌ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಕಾರ್ಯಕರ್ತ ಕೀಳನಪುರದ ನಾಗೇಶ್‌ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಪ್ರತಿಕ್ರಿಯೆಗಳು ಹೀಗಿವೆ.

ಸಿದ್ದರಾಮಯ್ಯ ಪಾಳಯದಲ್ಲಿ ಹತಾಶೆ ಮತ್ತು ಸೋಲಿನ ಭಯ ಶುರುವಾಗಿದೆ.ಬಿಜೆಪಿ ಅವರು ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ.ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆ ಗೊತ್ತಿಲ್ಲ.ನಿನ್ನೆ ನಮ್ಮ ಪ್ರಚಾರ ಮೆರವಣಿಗೆ ಮೇಲೆ ಕಲ್ಲಲ್ಲಿ ಹೊಡೆದಿದ್ದಾರೆ.ಬಕೆಟ್ ಗಳಲ್ಲಿ ಕಲ್ಲು ಇಟ್ಟು ಕೊಂಡಿದ್ದರು.

--ಪ್ರತಾಪ್‌ಸಿಂಹ

----------------------------

ಸಿದ್ದರಾಮಯ್ಯ ಅವರು ತಮ್ಮ ಸ್ವಜಾತಿಗೆ ಚಿತಾವಣೆ ಕೊಟ್ಟು ಈ ರೀತಿ ತೊಂದರೆ ಕೊಡಿಸುತ್ತಿದ್ದಾರೆ. ಸಿದ್ದರಾಮಯ್ಯ ಒಬ್ಬ ಜಾತಿವಾದಿ. ಸಿದ್ದರಾಮಯ್ಯ ಅವರಿಗೆ ಸ್ವಜಾತಿ ಮಾತ್ರ ಮುಖ್ಯ ಅನ್ನೋದು ವರುಣ ಜನರಿಗೆ ಗೊತ್ತಿದೆ. ಸಿದ್ದರಾಮಯ್ಯನವರ ಅಣ್ಣನ ಮನೆ ಮುಂದೆಯೇ ನಡೆದಿದೆ. ಚುನಾವಣೆ ಆಯುಕ್ತರಿಗೆ ಪತ್ರ ಬರೆಯುತ್ತೇನೆ.

--ವಿ.ಸೋಮಣ್ಣ, ಬಿಜೆಪಿ ಅಭ್ಯರ್ಥಿ

ನಮ್ಮೂರಿನಲ್ಲಿ ಗಲಾಟೆ ಶುರು ಮಾಡಿದ್ದೇ ಬಿಜೆಪಿಯವರೇ ಹೀಗೆ ಗಲಾಟೆ ಮಾಡಿಸುವ ಮೂಲಕ ಕೆಟ್ಟ ಹೆಸರು ತರವ ಪ್ರಯತ್ನ ಮಾಡುತ್ತಿದ್ದಾರೆ. ಇವೆಲ್ಲಾ ನಡೆಯುವುದಿಲ್ಲ. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಪ್ರಚಾರ ನಡೆಯಬೇಕು. ಅದು ಬಿಜೆಪಿ.ಮತ ಗಳಿಕೆಯ ಕಾರಣಕ್ಕಾಗಿ ಗಲಾಟೆ ಮಾಡಿಸಿದ್ದಾರೆ. ಆರೋಪ ಮಾಡಲು ಪ್ರತಾಪ್‌ ಸಿಂಹ ಯಾರು ?

ಸಿದ್ದರಾಮಯ್ಯ, ಕಾಂಗ್ರೆಸ್‌ ಅಭ್ಯರ್ಥಿ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ