Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ.31: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಬಿಳಗುಲಿ ಗ್ರಾಮದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕ, ಅಂದರೆ ಮಾರ್ಚ್ 29ರ ಸಂಜೆ 4.15ರ ಸುಮಾರಿಗೆ ಪ್ರಚಾರ ಸ್ಥಳದಲ್ಲಿದ್ದ ವಾಲಗ ಮತ್ತು ಡೋಲು ಬಾರಿಸುವವರಿಗೆ ಸುಮಾರು 1 ಸಾವಿರ ರೂಪಾಯಿ ನೀಡಿ ಮಾದರಿ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಕ್ಕಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಬಿಜೆಪಿ ಮನವಿ ಮಾಡಿದೆ.

ಈ ಸಂಬಂಧ ಇಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಹಣ ಹಂಚಿರುವ ವಿಡಿಯೋದ ಲಿಂಕ್ ವಿವರವನ್ನು ಮನವಿಪತ್ರದಲ್ಲಿ ನೀಡಲಾಗಿದೆ. ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ವಕ್ತಾರ ಡಾ. ರಾಘವೇಂದ್ರ ರಾವ್, ಕಾನೂನು ಪ್ರಕೋಷ್ಠದ ಸದಸ್ಯ ಶಿವಕುಮಾರ್ ಅವರ ನಿಯೋಗವು ಈ ದೂರುಗಳನ್ನು ಸಲ್ಲಿಸಿತು.

ಚುನಾವಣಾ ಆಯೋಗದ ವಿಶ್ವಾಸಾರ್ಹತೆಗೆ ಚ್ಯುತಿ ಬರುವಂತೆ ಸಿದ್ದರಾಮಯ್ಯನವರು ಮಾತನಾಡಿದ್ದಾಗಿ ಇನ್ನೊಂದು ದೂರು ನೀಡಲಾಗಿದೆ. “ಕಾಂಗ್ರೆಸ್ ಕಟ್ಟಿಹಾಕುವುದಕ್ಕಾಗಿಯೇ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳನ್ನು ಚುನಾವಣಾ ಆಯೋಗ ನಿಯೋಜಿಸಿದೆ” ಎಂದು ಹೇಳಿದ್ದು, ಇದು ಸಂವಿಧಾನಾತ್ಮಕ ಸಂಸ್ಥೆಯ ವಿರುದ್ಧ ಆಧಾರರಹಿತ ಆರೋಪವಾಗಿದೆ. ಇದರಿಂದ ಜನರ ಮನಸ್ಸಿನಲ್ಲಿ ಸಂಸ್ಥೆಯ ವಿರುದ್ಧ ನಕಾರಾತ್ಮಕ ಅಭಿಪ್ರಾಯ ಮೂಡಿಸುವಂತಿದೆ. ಆದ್ದರಿಂದ ಸಿದ್ದರಾಮಯ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಕೋರಲಾಗಿದೆ.

ಸುರ್ಜೇವಾಲಾ ವಿರುದ್ಧ ದೂರು

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ. ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕರ್ನಾಟಕ ಚುನಾವಣೆ ಸಂಬಂಧ ನೀಡಿದ ಹೇಳಿಕೆಯಲ್ಲಿ “ದಿ ಬಿಜೆಪಿ 40% ಕಮಿಷನ್ ಸರ್ಕಾರ, ವಿಚ್ ಹ್ಯಾಸ್ ಬ್ರೇಜನ್ಲಿ ಲೂಟೆಡ್ ದಿ ಸ್ಟೇಟ್” ಎಂದುದಾಗಿ ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿ ಮತದಾರರಲ್ಲಿ ತಪ್ಪು ಮಾಹಿತಿ ನೀಡಿ, ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಸುರ್ಜೇವಾಲಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕೋರಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ