Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸ್ಪೀಕರ್ ಖಾದರ್ ವಿರುದ್ಧ ಬಿಜೆಪಿ, ಜೆಡಿಎಸ್ ಅವಿಶ್ವಾಸ ನಿರ್ಣಯ





ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.19: ವಿಧಾನಸಭೆಯಲ್ಲಿ ಬಿಜೆಪಿಯ 10  ಮಂದಿ ಸದಸ್ಯರನ್ನು ಅಮಾನತು ಮಾಡಿದ ಪ್ರಕರಣದ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ವಿಧಾನಸಭೆ ಕಾರ್ಯದರ್ಶಿ ಅವರ ಮೂಲಕ ಜಂಟಿಯಾಗಿ ಅವಿಶ್ವಾಸ ನೋಟಿಸ್ ನೀಡಿದ್ದಾರೆ.

ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ಪ್ರತಿಪಕ್ಷಗಳ ಸಭೆ ವೇಳೆ ವಿಧಾನಸಭೆ ಸ್ವೀಕರ್ ಯು.ಟಿ ಖಾದರ್ ಭೇಟಿ ನೀಡಿದ್ದನ್ನು ವಿರೋಧಿಸಿ ಅವರ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.

"ಕರ್ನಾಟಕ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಚುನಾಯಿತರಾಗಿರುವ ಸ್ಪೀಕರ್ ಅವರು ಸದನದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಅವರನ್ನು ಸ್ಥಾನದಿಂದ ತೆಗೆದುಹಾಕಲು, ನಾವು ಕಾರ್ಯವಿಧಾನದ ನಿಯಮಗಳು ಮತ್ತು ನಿಯಮ 169 ರ ಪ್ರಕಾರ ಕರ್ನಾಟಕ ವಿಧಾನಸಭೆಯಲ್ಲಿ ವ್ಯವಹಾರ ನಡೆಸುವುದರ ವಿರುದ್ಧ ಪ್ರಸ್ತಾವನೆಯನ್ನು ಮಂಡಿಸಲು ಅವಕಾಶವನ್ನು ಕೋರುತ್ತೇವೆ ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಐಎಎಸ್ ಅಧಿಕಾರಿಗಳ ದುರ್ಬಳಕೆ ಆರೋಪ ಮಾಡಿರುವ ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರತ್ತ ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸದಸ್ಯರ ನಡೆಯನ್ನು ಸ್ಪೀಕರ್ ಸ್ಥಾನಕ್ಕೆ ಅಗೌರವ ಎಂದು ಪರಿಗಣಿಸಿರುವ ಸ್ಪೀಕರ್ ಯುಟಿ ಖಾದರ್ ಅವರು 10 ಸದಸ್ಯರನ್ನು ಹಾಲಿ ಅಧಿವೇಶನದಿಂದ ಅಮಾನತು ಮಾಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ವಿಪಕ್ಷಗಳು ಸ್ಪೀಕರ್ ವಿರುದ್ಧವೇ ಅವಿಶ್ವಾಸ ನೋಟಿಸ್ ನೀಡಿವೆ.

ವಿಧಾನಸಭೆಯಲ್ಲಿ ದಿನದ ಕಲಾಪ ಆರಂಭವಾದಾಗಿನಿಂದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್‌ ಸರ್ಕಾರವು 30 ಐಎಎಸ್‌ ಅಧಿಕಾರಿಗಳನ್ನು ತನ್ನ ಮೈತ್ರಿಕೂಟದ ನಾಯಕರ ಸೇವೆಗೆ ನಿಯೋಜಿಸಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದವು.




Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ