Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದನದ ಶಿಸ್ತು, ಘನತೆ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ - ಬಿ.ಕೆ. ಹರಿಪ್ರಸಾದ್

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.22:
ಸದನದ ಶಿಸ್ತು, ಘನತೆ, ಗೌರವದ ಬಗ್ಗೆೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.ರಾಜ್ಯಪಾಲರ ಭಾಷಣಕ್ಕೆೆ ಅಡ್ಡಿಿಪಡಿಸಿದ ತಮ್ಮನ್ನು ಬಿಜೆಪಿಯವರು ಟೀಕಿಸಿರುವ ಹಿನ್ನೆೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿಿರುವ ಅವರು, ಬಿಜೆಪಿ ಪಕ್ಷದವರಿಗೆ ಕಿಂಚಿತ್ತಾಾದರೂ ನೈತಿಕತೆ ಇದೆಯೇ? ಸದನದಲ್ಲಿ ಬಟ್ಟೆೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡ ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆೆಗಳ ಬಗ್ಗೆೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಎಂದು ಖಾರವಾಗಿ ಪ್ರಶ್ನಿಿಸಿದ್ದಾರೆ.
ಸಭಾಪತಿಗಳ ಮುಖದ ಮೇಲೆ ಕಾಗದ ಪತ್ರಗಳನ್ನು ಹರಿದು ಬಿಸಾಕಿ ಅವಮಾನ ಮಾಡಿ ಸದನದಿಂದಲೇ ಉಚ್ಛಾಾಟಿತರಾದವರು ಯಾವ ಪಕ್ಷದವರು? ಇಂತಹ ಶಿಸ್ತು, ಸಂಸ್ಕಾಾರ, ಗೌರವ, ಘನತೆ ತಂದುಕೊಟ್ಟಿಿರುವ ಎಲ್ಲರೂ ನಮ್ಮ ಪಕ್ಷದವರೇ ಎಂದು ಎದೆ ತಟ್ಟಿಿ ಹೇಳುವ ಧೈರ್ಯ ಬಿಜೆಪಿಯವರಿಗೆ ಇದೆಯಾ?
ಸಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯನ್ನೇ ದುರಪಯೋಗ ಪಡಿಸಿಕೊಂಡು ರಾಜ್ಯ ರಾಜಕಾರಣದಲ್ಲೇ ಅತ್ಯಂತ ಕರಾಳ ದಿನವನ್ನು ಸೃಷ್ಟಿಿ ಮಾಡಿರುವ ಬಿಜೆಪಿ ನಾಯಕರು ಸಂವಿಧಾನದ ಮೌಲ್ಯಗಳ ಬಗ್ಗೆೆ ಮಾತಾನಾಡಲು ನೈತಿಕತೆ ಇಲ್ಲ. ರಾಜ್ಯಪಾಲರು ರಾಜ್ಯದ ತೆರಿಗೆಯ ಹಣದಿಂದ ಅಧಿಕಾರ ಅನುಭವಿಸುತ್ತಿಿದ್ದಾರೆ ಹೊರತು ನಾಗಪುರದಲ್ಲಿರುವ ನೊಂದಣಿಯೇ ಆಗದ ಸಂಘಟನೆಗೆ ಬರುವ ಬಿಟ್ಟಿಿ ಹಣದಿಂದಲ್ಲ. ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ರಾಜ್ಯಪಾಲರೇ ಇರಲಿ, ಸಾಂವಿಧಾನಿಕ ಹುದ್ದೆಯಲ್ಲೇ ಇರಲಿ ನಮ್ಮ ಹಕ್ಕನ್ನು ಪ್ರತಿಪಾದಿಸುತ್ತಲೇ ಇರುತ್ತೇವೆ. ಬಿಜೆಪಿಯವರಿಂದ ನೈತಿಕತೆ ಕಲಿಯುವ ದಾರಿದ್ರ್ಯ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಬಿ.ಕೆ. ಹರಿಪ್ರಸಾದ್ ಕುಟುಕಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ