Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ. 13 ಕ್ಕೆ ಆವತಿ ಶಕ್ತಿ ಕೇಂದ್ರದಿಂದ ರಕ್ತದಾನ ಶಿಬಿರ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ. 2 : ಚುನಾವಣೆಗಳಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯ. ಸೋತೆವೆಂದು ಧೃಡಿಗೆಡದೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತ ಪಡೆ ಸಜ್ಜಾಗಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿಯ ಕೋಡಗುರ್ಕಿ ಗ್ರಾಮದ ಕತ್ತಿ ಮಾರಮ್ಮ ದೇವಾಲಯದಲ್ಲಿ 'ಆವತಿ ಶಕ್ತ ಕೇಂದ್ರದ ವತಿಯಿಂದ ಆಯೋಜಿಸುವ ರಕ್ತದಾನ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಪಕ್ಷದ ಕಾರ್ಯಕರ್ತರು ದೇಶಕ್ಕೆ ದುಡಿಯುವ ಮೂಲಕ ಸಮಾಜದಲ್ಲಿ ಉತ್ತಮ ಹೆಸರು ಹೊಂದಿದ್ದಾರೆ. ಆದರೂ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಿಳಿಸುವಲ್ಲಿ ಎಲ್ಲೋ ಕಾರ್ಯಕರ್ತರ ಪಡೆ ಎಡವಿದೆ. ಸೋಲಿನ ನಿರಾಸೆ ಬಿಟ್ಟು ಮುಂಬರುವ ಚುನಾವಣೆಗೆ ಸಜ್ಜಾಗಬೇಕು. ಕಾಂಗ್ರೆಸ್ ನ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಕಾಂಗ್ರೆಸ್ ದಲ್ಲಾಳಿಗಳ ಪರ ಕೆಲಸ ಮಾಡಿದರೇ, ಕೇಂದ್ರ ಬಿಜೆಪಿ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿದ್ಯಾನಿಧಿ ಯೋಜನೆ ಸ್ಥಗಿತ ಮಾಡಿದೆ. ಕಾಂಗ್ರೆಸ್ ಗೆ ಮುಸಲ್ಮಾನರು ಮಾತ್ರವೇ ಕಾಡುತ್ತಾರೇ ಹೊರತು ಬೇರೆಯವರು ಯಾರು ಕಾಣುತ್ತಿಲ್ಲ. ಕಿಸಾನ್ ಸಮಾನ್ ಯೋಜನೆಯಡಿ, ಕೇಂದ್ರ ಸರ್ಕಾರ 6 ರಾಜ್ಯ ಸರ್ಕಾರ 4 ಸಾವಿರ ಸಹಾಯಧನ ನೀಡುತಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ 4 ಸಾವಿರ ಸ್ಥಗಿತ ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡಿದೆ ಎಂದರು.

ಇಂತಹ ರೈತ ವಿರೋಧಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಬೇಕು. ಸರ್ಕಾರ ನೀಡುವ ಬಿಟ್ಡಿ ಭಾಗ್ಯಗಳು ಕೇಲವ ಮುಂದಿನ ಲೋಕಾಸಭಾ ಚುನಾವಣೆಯವರೆಗೂ ಸೀಮಿತವಾಗಿದೆ. ಬಿಜೆಪಿ ಸರ್ಕಾರ ನೀರಾವರಿ ಯೋಜನೆಗೆ ಮೀಸಲಿಡಿಸಿದ್ದ 23 ಸಾವಿರ ಕೋಟಿಯನ್ನು 19 ಸಾವಿರ ಕೋಟಿಗೆ ಕಾಂಗ್ರೆಸ್ ಸರ್ಕಾರ ಇಳಿಸಿದೆ ಎಂದು ಹರಿಹಾದ್ದರು.

ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠ ಜಿಲ್ಲಾ ಸಂಚಾಲಕ ಅಂಬರೀಶ್ ಗೌಡ ಮಾತನಾಡಿ, 'ಬಿಜೆಪಿ ಪಕ್ಷದಲ್ಲಿ ಯುವ ಪಡೆ ಹೆಚ್ಚಾಗಿದ್ದು, ಕಾರ್ಯಕರ್ತರು ರಾಜಕೀಯ ಹೊರತಾಗಿಯೂ ರಕ್ತದಾನ ಶಿಬಿರ, ಸಸಿ ನೆಡುವ ಕಾರ್ಯಕ್ರಮ, ಸ್ವಚ್ಚತಾ ಕಾರ್ಯಗಳಂತಹ ಸಮಾಜ ಸೇವೆಯಲ್ಲಿಯೂ ತೊಡೆಗಿಕೊಂಡಿದ್ದಾರೆ ಎಂದರು.

ಆ. 13 ರಂದು ಹಮ್ಮಿಕೊಂಡಿರುವ ರಕ್ತದಾನ ಶಿಬಿರಕ್ಕೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ತೋಡಗಿಸಿಕೊಂಡು ರಕ್ತದಾನಿಗಳನ್ನು ಅಪಾರ ಸಂಖ್ಯೆಯಲ್ಲಿ ಕರೆತಂದು, ಕಾರ್ಯಕ್ರಮ ಯಶಸ್ವಿ ಮಾಡೋಣ ಎಂದರು.

ಇದೇ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ.ರವಿಕುಮಾರ್, ಮುಖಂಡರಾದ ನಾಗರಾಜ್ ಗೌಡ, ಮುನೀಂದ್ರ, ನಾಗೇಶ್, ಮಂಜುನಾಥ್, ಓಬದೇನಹಳ್ಳಿ ಮುನಿಯಪ್ಪ, ಭರತ್, ಮುನಿರಾಜು, ಸುರೇಶ್ ಆಚಾರ್, ಪುನೀತಾ, ದಾಕ್ಷಾಯಿಣಿ, ಸೇರಿದಂತೆ ಅನೇಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ