Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡಬಳ್ಳಾಪುರ ಸ್ಯಾಟ್‌ಲೈಟ್ ಟೌನ್ ಮಾಡಲು ನಿರ್ಧಾರ: ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ದೊಡ್ಡಬಳ್ಳಾಪುರ, ಏ.24: ದೊಡ್ಡಬಳ್ಳಾಪುರದಲ್ಲಿ ಸ್ಯಾಟ್‌ಲೈಟ್ ಟೌನ್ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಶಿಕ್ಷಣ ಉದ್ಯೋಗ ದೊರೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ದೊಡ್ಡಬಳ್ಳಾಪುರದಲ್ಲಿ  ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಬೆಂಗಳೂರಿನ ಎಲ್ಲ ಸೌಕರ್ಯ ದೊಡ್ಡಬಳ್ಳಾಪುರದಲ್ಲಿ ಸಿಗುವಂತೆ ಮಾಡುತ್ತೇವೆ.

ಹಾಲಿ ಶಾಸಕರು ಹತ್ತು ವರ್ಷ ಶಾಸಕರಾಗಿದ್ದಾರೆ. ಅವರನ್ನು ಈ ಬಾರಿ ಮನೆಗೆ ಕಳಿಸಬೇಕು. ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಧೀರಜ್ ಗೆ ಅವಕಾಶ ಕಲ್ಪಿಸಬೇಕು. ಮತ್ತೆ ನಮ್ಮ ಸರ್ಕಾರ ರಚನೆಯಾಗುತ್ತದೆ.

ಈ ಭಾಗದಲ್ಲಿ ಕೆರೆ ಅಭಿವೃದ್ಧಿ ಮಾಡಬೇಕೆಂದು ಜನರ ಬೇಡಿಕೆ ಇದೆ‌. ಅದನ್ನು ಸಂಪುಟದ ಮೊದಲ ಸಭೆಯಲ್ಲಿಯೇ ತೀರ್ಮಾನ ಮಾಡಲಾಗುವುದು. ಈ ಬಾರಿ ದೊಡ್ಡಬಳ್ಳಾಪುರದ ದೊಡ್ಡ ಜನರು ಧೀಜರ್ ನನ್ನು ಆಯ್ಕೆ ಮಾಡಿ ಕಳುಹಿಸಿ ಎಂದು ಮನವಿ ಮಾಡಿದರು. ಕಾಂಗ್ರೆಸ್ ನವರು ಹತಾಶರಾಗಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡದಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಕಾಲದಲ್ಲಿ ನೇಕಾರರು ಅನೇಕ ಸಮಸ್ಯೆ ಎದುರಿಸಿದ್ದರು. ನೇಕಾರ ಸಮ್ಮಾನ ಯೋಜನೆಯನ್ನು ನಮ್ಮ ನಾಯಕರಾದ ಯಡಿಯೂರಪ್ಪ ಅರಂಭಬಿಸಿದರು‌. 2000 ರೂ ನೇಕಾರರಿಗೆ ಧನ ಸಹಾಯ ನೀಡಲಾಗುತ್ತಿತ್ತು‌.

ಅದನ್ನು 5000ಕ್ಕೆ ಹೆಚ್ಚಳ ಮಾಡಿದ್ದೇನೆ‌. 5 ಲಕ್ಷದ ವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲಾಗುತ್ತಿದೆ. ನೇಕಾರರ ಅಭಿವೃದ್ಧಿ ನಿಗಮ ಮಾಡಿದ್ದೇವೆ. ನೇಕಾರರ ಆರೊಗ್ಯ, ಶಿಕ್ಷಣ ನೀಡಲು ನೇಕಾರರ ಅಭಿವೃದ್ಧಿ ನಿಗಮ ಮಾಡಿದ್ದೇವೆ ಎಂದರು.

ಹೂವು ಹಣ್ಣು ವ್ಯಾಪಾರ ಮಾಡುವ ತಿಗಳ ಸಮುದಾಯ ಇದೆ. ಆ ಸಮುದಾಯದ ಅಭಿವೃದ್ಧಿಗೆ ನಿಗಮ, ಗಾಣೀಗೆರ ಅಭಿವೃದ್ಧಿ ನಿಗಮ, ಕಾಯಕ ಮಾಡುವ ಕುಲಗಳಿಗೆ ಅಭಿವೃದ್ಧಿ ನಿಗಮ ಮಾಡಿದ್ದೇವೆ. ಒಕ್ಕಲಿಗರ ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದೇವೆ. ಎಲ್ಲ ಸನುದಾಯಗಳ ಅಭಿವೃದ್ಧಿಯನ್ನು ನಮ್ಮ ಸರ್ಕಾರ ಮಾಡಿದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ