Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೆಟ್ಟರ್ ರಾಜೀನಾಮೆಯಿಂದ ಪಕ್ಷಕ್ಕೆ ಸ್ವಲ್ಪ ಹಾನಿಯಾಗಲಿದೆ: ಬೊಮ್ಮಾಯಿ








ಸುದ್ದಿಮೂಲ ವಾರ್ತೆ

ಹುಬ್ಬಳ್ಳಿ, ಏ.17: ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ ಪ್ರಮುಖ ನಾಯಕರು.ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ನಾನು ಅವರ ವಿರುದ್ದ ಸ್ಪರ್ಧೆ ಮಾಡಿದ್ದೆ. ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಕೆ.ಎಸ್. ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ಕೊಡಲಾಗುವುದು ಎಂದು . ಜೆ.ಪಿ.ನಡ್ಡಾ, ಅಮಿತ್ ಶಾ ಅವರು ತಿಳಿಸಿದ್ದರು ಎಂದು ಹೇಳಿದರು.

ನಿನ್ನೆಯೂ ಚರ್ಚಿಸಿ ಅವರು ಹೇಳಿದವರಿಗೆ ಟಿಕೆಟ್ ಕೊಡಲಾಗುವುದು ಎಂದು ತಿಳಿಸಲಾಯಿತು. ಜಗದೀಶ್ ಶೆಟ್ಟರ್ ಅವರು ಮುಂದುವರಿಸಿಕೊಂಡು ಹೋಗಿದ್ದರೆ ಉತ್ತಮವಾಗಿತ್ತು ಎಂದರು.

ಯಡಿಯೂರಪ್ಪ ನಮಗೆ ಆದರ್ಶರು. ಮುಖ್ಯಮಂತ್ರಿ ಇರೋವಾಗಲೇ ರಾಜಿನಾಮೆ ಕೊಟ್ಟಿದ್ದಾರೆ. ನಮಗೆಲ್ಲ ಪಕ್ಷದ ಆದರ್ಶ ಹೇಳಿಕೊಟ್ಟವರು. ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳದು ನಿಂತಿದೆ. ಎರಡನೇ ಪೀಳಿಗೆಯಲ್ಲಿ ಲಿಂಗಾಯತ ಸಮುದಾಯದ ಸಿ.ಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸ್ಥಾನ ,ಅತೀ ಹೆಚ್ಚು ಮಂತ್ರಿ ಸ್ಥಾನ ನೀಡಿದ್ದು ಬಿಜೆಪಿ ಎಂದರು.

ನಿನ್ನೆ ಸ್ವತಃ ಅಮಿತ್ ಶಾ ಅವರು ಶೆಟ್ಟರ್ ಜೊತೆ ಮಾತಾಡಿದ್ದಾರೆ. ರಾಜ್ಯ, ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರು ಇತ್ತು. ಇದು ಮೇಲಿನವರ ತೀರ್ಮಾನ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬದಲಾವಣೆ ತರುವಂತಹ ಕಾಲ ಇದು ಎಂದರು.

ಡ್ಯಾಮೇಜ್ ಕಂಟ್ರೋಲ್:

ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆ. ಅವರ ಎಲ್ಲಾ ಪ್ರಶ್ನೆಗೆ ನಾನು ಉತ್ತರ ನೀಡುವುದಿಲ್ಲ. ಹೊಸ ಬೆಳವಣಿಗಾಗಿ ಈ ಪ್ರಯತ್ನ. ಶೆಟ್ಟರ್ ರಾಜಿನಾಮೆಯಿಂದ ಬಿಜೆಪಿಗೆ ಸ್ವಲ್ಪ ಹಾನಿಯಾಗಲಿದೆ. ಡ್ಯಾಮೇಜ್ ಕಂಟ್ರೋಲ್‌ಗೆ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.












Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ