Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನಂತಕುಮಾರ್ ಇಲ್ಲದೇ ತಬ್ಬಲಿಯಾಗಿದ್ದೇವೆ : ಬಿ.ಎಸ್. ಯಡಿಯೂರಪ್ಪ

ಸುದ್ದಿಮೂಲ ವಾರ್ತೆ

ಬೆಂಗಳೂರು ಸೆ. 23: ರಾಜ್ಯದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಕಾರ್ಯ ನಿರ್ವಹಿಸುತ್ತಿದ್ದ ನಾಯಕ ಅನಂತಕುಮಾರ್. ರಾತ್ರಿ ಹಗಲೆನ್ನದೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ವ್ಯಕ್ತಿಯನ್ನು ರಾಜ್ಯ ಕಳೆದುಕೊಂಡಂತೆ ಆಗಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ನಗರದ ಧೊಂಡುಸಾ ಸಭಾಂಗಣದಲ್ಲಿ ಆಯೋಜಿಸಿದ್ದ ಅನಂತ ನಮನ 64 - ಅನಂತಕುಮಾರ್ ಅವರ 64 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು, ಹಸಿರು ಭಾನುವಾರ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

1985 ರಲ್ಲೀ ನಾನು ಪದವಿ ಶಿಕ್ಷಣದ ಅಂತಿಮ ವರ್ಷದಲ್ಲಿ ಇದ್ದಾಗ ನನಗೆ ವಿಧಾನ ಸಭೆಗೆ ಸ್ಪರ್ಧಿಸುವ ಅವಕಾಶ ದೊರೆಯಿತು. ವಿದ್ಯಾರ್ಥಿ ಹೋರಾಟದ ಮೂಲಕ ಪರಿಚಯವಿದ್ದ ಅನಂತಕುಮಾರ್ ಅವರು ತಮ್ಮ ಸ್ನೇಹಿತರೊಂದಿಗೆ ಸೇರಿಕೊಂಡು ಆ ದಿನಗಳಲ್ಲಿ ದೊಡ್ಡ ಮೊತ್ತವಾದ 5 ಸಾವಿರ ರೂಪಾಯಿಗಳನ್ನು ನೀಡಿ ಪ್ರೋತ್ಸಾಹಿಸಿದನ್ನು ನೆನಪಿಸಿಕೊಂಡರು.

ಬೆಂಗಳೂರಿಗೆ ಮೆಟ್ರೋ ತಂದಿದ್ದೆ ಅನಂತಕುಮಾರ್

ಮೊನೊ ರೈಲೋ ಅಥವಾ ಮೆಟ್ರೋ ರೈಲೋ ಎನ್ನುವ ಗೊಂದಲ ಇದ್ದ ಸಂದರ್ಭದಲ್ಲಿ ಆಗಿನ ಕೇಂದ್ರ ನಗರಾಭಿವೃದ್ಧಿ ಸಚಿವರಾಗಿದ್ದ ಅನಂತಕುಮಾರ್ ಅವರು, ರಾಜ್ಯ ನಗರಾಭಿವೃದ್ಧಿ ಸಚಿವ ನಾಗಿದ್ದ ನನ್ನನ್ನು ಹಾಗೂ ಇನ್ನಿತರ 5 ಜನ ಸಚಿವರು ಮತ್ತು ಅಧಿಕಾರಿಗಳನ್ನು ಹೊರದೇಶಗಳಿಗೆ ಆಧ್ಯಯನ ಮಾಡಲು ಕಳುಹಿಸಿ ಕೊಟ್ಟಿದ್ದರು. ಆ ಅಧ್ಯಯನ ಪ್ರವಾಸದ ನಂತರ ಹಾಗೂ ದೆಹಲಿಯ ಮೆಟ್ರೋ ನೋಡಿ ಕೊನೆಯಲ್ಲಿ ಬೆಂಗಳೂರಿಗೆ ಮೆಟ್ರೋ ರೈಲೇ ಒಳ್ಳೆಯದು ಎಂದು ನಿರ್ಧಾರಕ್ಕೆ ಬರಲಾಯಿತು. ಬೆಂಗಳೂರಿಗೆ ಮೆಟ್ರೋ ತರಲು ನೂರು ಜನರು ತಾವೇ ಕಾರಣ ಎಂದು ಹೇಳಿದರು ಅದು ತಪ್ಪು. ಅದಕ್ಕೆ ಮೂಲ ಕಾರಣ ಅನಂತಕುಮಾರ್ ಎಂದು ಹೇಳಿದರು.

ಈ ಬಾರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನೆಯಲ್ಲಿ ಕುಳಿತಾಗ ಅನಂತಕುಮಾರ್ ಇದ್ದಿದ್ದರೆ ನಮಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ನೆನಪಿಸಿಕೊಂಡೆ. ರಾಜ್ಯದ ಅಭಿವೃದ್ಧಿ ವಿಷಯ ಬಂದಾಗ ಪಕ್ಷ ಭೇದ ಮರೆತು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದರು. ಅನಂತಕುಮಾರ್ ಇದ್ದಿದ್ದರೆ ನಮಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ಕಳೆದ 40 ವರ್ಷಗಳಲ್ಲಿ ನೂರಾರು ಜನ ನಾಯಕರನ್ನು ಬೆಳೆಸಿದ್ದಾರೆ. ಅವರೆಲ್ಲರೂ ತಬ್ಬಲಿಗಳಾಗಿದ್ದರೆ. ತೇಜಸ್ವಿನಿ ಅನಂತಕುಮಾರ್ ಅವರು ಉತ್ತಮ ನಾಯಕಿ. ಕಳೆದ 40 ವರ್ಷಗಳಿಂದ ಅನಂತಕುಮಾರ್ ಅವರ ಹಿಂದೆ ನಿಂತು ಉತ್ತಮ ಕಾರ್ಯಗಳನ್ನು ಮಾಡಿದ್ದೀರಿ. ಧೈರ್ಯದಿಂದ ಮುಂದೆ ನುಗ್ಗ ಬೇಕು. ನೀವು ಜನಗಳ ಪ್ರತಿನಿಧಿ ಆಗಬೇಕು. ನಿಮ್ಮ ಹಿಂದೆ ದೊಡ್ಡ ಶಕ್ತಿ ಇದೆ. ಧೈರ್ಯ ಮಾಡಿ ಮುಂದೆ ನುಗ್ಗಿ ನಿಮ್ಮ ಜೊತೆ ಜನಗಳು ಇದ್ದಾರೆ. ನಿಮ್ಮ ಕುಟುಂಬ, ರಾಜಕಾರಣದಲ್ಲಿ ಇರಬೇಕು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾತನಾಡಿ, ನನ್ನ ಮತ್ತು ಅನಂತಕುಮಾರ್ ಅವರ ಸ್ನೇಹ ರಾಜಕೀಯ ಮೀರಿದ್ದು. ಜೊತೆಯಲ್ಲಿಯೇ ರಾಜ್ಯ ಸುತ್ತಿ ಪಕ್ಷವನ್ನು ಬೆಳೆಸಿದೆವು. ಇಂದು ನಮ್ಮ ಪಕ್ಷ ಈ ಹಂತಕ್ಕೆ ಬರಲು ಪ್ರಮುಖ ಕಾರಣ ಅನಂತಕುಮಾರ್. ಅವರು ಇನ್ನೂ ಹೆಚ್ಚಿನ ಕಾಲ ಇರಬೇಕಾಗಿತ್ತು. ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ಅವರ ಮಾರ್ಗದರ್ಶನ ಅಗತ್ಯವಿತ್ತು. ನಾವು ಅವರನ್ನು ಕಳೆದುಕೊಂಡು ತಬ್ಬಲಿಗಳಾಗಿದ್ದೇವೆ. ಅವರು, ಇದ್ದಿದ್ದರೆ ರಾಜ್ಯದ ಚಿತ್ರಣವೇ ಬದಲಾಗುತ್ತಿತ್ತು. ತೇಜಸ್ವಿನಿ ಅನಂತ ಕುಮಾರ್ ಅವರು ಅದಮ್ಯ ಚೇತನ ಸಂಸ್ಥೆಯ ಮೂಲಕ ದಿವಂಗತ ಅನಂತಕುಮಾರ್ ಅವರ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಶಕ್ತಿ ದೇವರು ಕೊಡಲಿ ಎಂದರು.

ಅದಮ್ಯ ಚೇತನ ಶೂನ್ಯ ತ್ಯಾಜ್ಯ ಅಡುಗಮನೆ ಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ನೈಸರ್ಗಿಕ ಸಾಬೂನು ಗಳನ್ನೂ ಉದ್ಘಾಟಿಸಿದರು. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಅನಂತ ನಮನ ಪುಸ್ತಕ ಲೋಕಾರ್ಪಣೆ ಗೊಳಿಸಿದರು.

ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್, ಅನಂತಕುಮಾರ್ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಕೃಷ್ಣಾ ಭಟ್, ಪದ್ಮ ವಿಭೂಷಣ ವಿ.ಕೆ ಅತ್ರೆ, ಮಾಜಿ ಉಮುಖ್ಯಮಂತ್ರಿ ಗೋವಿಂದ ಕಾರಜೋಳ, ಆರ್ ಎಸ್ ಎಸ್ ನ ಹಿರಿಯ ಕ್ಷೇತ್ರೀಯ ಸಂಘ ಚಾಲಕರಾದ ವಿ ನಾಗರಾಜ್, ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ