Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋಮಶೇಖರ್ ಸಮಾಧಾನಪಡಿಸುವ ಹೊಣೆ ಬಿಎಸ್‌ವೈ ಹೆಗಲಿಗೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.7: ಪಕ್ಷದಲ್ಲಿಯೇ ಇದ್ದು ತಮ್ಮ ಮಾತುಗಳ ಮೂಲಕ ಬಿಜೆಪಿಗೆ ತಲೆನೋವಾಗಿರುವ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಸಮಾಧಾನಪಡಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಚಿಸಲಾಗಿದೆ.

ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಹೇಳಿಕೆ ನೀಡದಂತೆ ಸೋಮಶೇಖರ್ ಅವರಿಗೆ ಮನವರಿಕೆ ಮಾಡಿಕೊಡುವ ಮತ್ತು ಸೂಚನೆ ನೀಡುವ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಯಡಿಯೂರಪ್ಪ ಅವರಿಗೆ ವಹಿಸಿದೆ.

ಮೈತ್ರಿ ಕುರಿತು ಹೈಕಮಾಂಡ್ ನಿರ್ಧಾರಕ್ಕೆ ವಿರುದ್ಧವಾಗಿ ಹೋದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬಿಜೆಪಿ ಹಿಂದೇಟು ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಸೋಮಶೇಖರ್ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು, ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ನಾವು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು, ಸೋಮಶೇಖರ್ ಕೂಡ ಇದಕ್ಕೆ ಹೊರತಾಗಿಲ್ಲ. ಒಂದು ವೇಳೆ ಅವರು ಬಯಸಿದರೇ ಪಕ್ಷ ತೊರೆದು ಸಂತೋಷವಾಗಿರುವ ಪಕ್ಷಕ್ಕೆ ಸೇರಲಿ ಎಂದು ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದರು.

ಸೋಮಶೇಖರ್ ಯಾವಾಗಲೂ ತಮ್ಮ ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಹಿರಿಯ ನಾಯಕ ಸಿ ಟಿ ರವಿ ಟೀಕಿಸಿದ್ದಾರೆ. ಅಧಿಕಾರ ಇಲ್ಲವೆಂದರೆ ಕೆಲವರಿಗೆ ಉಸಿರು ಕಟ್ಟುತ್ತೆ, ಎಸಿ ರೂಮ್‌ನಲ್ಲಿದ್ದರೆ ವಾತಾವರಣ ಚೆನ್ನಾಗಿರುತ್ತದೆ ಎಂದು ಮಾಜಿ ಶಾಸಕ ಸಿಟಿ ರವಿ ಹೇಳಿದ್ದಾರೆ.

ಇವರಿಗೆ ಯಾವಾಗಲೂ ಅಧಿಕಾರದಲ್ಲಿರಬೇಕು‌ ಆಗ ಎಲ್ಲವೂ ಚೆನ್ನಾಗಿರುತ್ತದೆ, ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂಬ ಮಾಜಿ ಸಚಿವ ಎಸ್‌ಟಿ‌ ಸೋಮಶೇಖರ್ ಹೇಳಿಕೆಗೆ ಸಿಟಿ ರವಿ ತಿರುಗೇಟು ನೀಡಿದರು.

ಮೈತ್ರಿ ಕುರಿತು ವರಿಷ್ಠರ ನಿರ್ಧಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಸೋಮಶೇಖರ್ ತೆಗೆದುಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಡಾ ಸಿಎನ್ ಅಶ್ವಥ್ ನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ