Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಂಬಾಕು ರಹಿತ ಆರೋಗ್ಯಯುತ ಸಮಾಜ ನಿರ್ಮಾಣವಾಗಲಿ: ನೂರುನ್ನೀಸ

ಸುದ್ದಿಮೂಲ ವಾರ್ತೆ
ತುಮಕೂರು, ಮೇ 31: ಯುವ ಜನರು ವಿವಿಧ ರೀತಿಯಲ್ಲಿ ಹೆಚ್ಚಾಗಿ ತಂಬಾಕು ಸೇವಿಸಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಹಾಗೂ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ
ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಇಂದು ವಿಶ್ವ ತಂಬಾಕು ರಹಿತ
ದಿನಾಚರಣೆಯ ಅಂಗವಾಗಿ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

ಮಹಿಳೆಯರು ವಿಳ್ಯದೆಲೆ ಹಾಗೂ ಗುಟ್ಕಾ ಸೇವನೆಯಿಂದ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರಲ್ಲದೆ, ಯುವಜನರಲ್ಲಿ ಇದರಿಂದ ಸಂಭವಿಸಬಹುದಾದ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಯುತ ಹಾಗೂ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡೋಣವೆಂದು ತಿಳಿಸಿದರು.

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಮೊದಲು ತಮ್ಮ ಮನೆಗಳಲ್ಲಿ ಅರಿವು ಮೂಡಿಸಬೇಕು. ನಂತರ ನೆರೆಹೊರೆಯ ಜನರಿಗೂ ತಂಬಾಕು ಸೇವಿಸುವುದರಿಂದ ಸಂಭವಿಸುವ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ ತಂಬಾಕು ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್ ಮಾತನಾಡಿ, ತಂಬಾಕು ಸೇವನೆಯಿಂದ ಪ್ರತಿ ವರ್ಷ ಸುಮಾರು 5 ಲಕ್ಷ ಜನ ಮರಣ ಹೊಂದುತ್ತಿದ್ದಾರೆ. ತಂಬಾಕು, ಗುಟ್ಕಾ, ಪಾನ್ ಮಸಾಲ ಸೇವನೆಯಿಂದ ಬಾಯಿ, ನಾಲಿಗೆ, ಕರುಳು ಹಾಗೂ ಶ್ವಾಸಕೋಶ ಕ್ಯಾನ್ಸರ್ ಸಂಭವಿಸುತ್ತದೆ. ಒಂದು ಸಿಗರೇಟ್ ಸೇವನೆ ಮಾಡಿದರೆ 11 ದಿನಗಳ ಆಯಸ್ಸು ಕಡಿಮೆಯಾಗುತ್ತದೆ. ತಂಬಾಕು ಮತ್ತು ಅದರ ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ತಂಬಾಕು ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಆರ್.ವಿ.ಮೋಹನ್‌ದಾಸ್ ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಉತ್ಪಾದನೆಯಿಂದ ಪರಿಸರದ ಮೇಲೆ ಆಗುವ ಪರಿಣಾಮಗಳ ಬಗ್ಗೆ
ಜನರಲ್ಲಿ ಅರಿವು ಮೂಡಿಸಬೇಕು. ರೈತರು ತಂಬಾಕು ಬೆಳೆಗೆ ಪರ್ಯಾಯವಾಗಿ ಬೇರೆ ಬೆಳೆಯನ್ನು ಬೆಳೆಯುವ ಹಾಗೆ ಅರಿವು ಮೂಡಿಸಬೇಕು. “ಆಹಾರ ಬೇಕು ತಂಬಾಕು ಅಲ್ಲ” ಎಂಬುವುದು ಈ ವರ್ಷದ ಘೋಷ ವಾಕ್ಯವಾಗಿದೆ. ಜಿಲ್ಲೆಯಾದ್ಯಾಂತ ಎಲ್ಲಾ ತಾಲ್ಲೂಕಿನಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ: ಲಕ್ಷ್ಮೀಕಾಂತ್, ಶಿಕ್ಷಣ ಇಲಾಖೆಯ ಡಿಡಿಪಿಐ ನಂಜಯ್ಯ, ರವಿಪ್ರಕಾಶ್, ಹರೀಶ್, ರುಕ್ಮಿಣಿ, ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶಾ
ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ