Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆ ಚರ್ಚೆ ಮಾಡಲು ಬುಲಾವ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.31: ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಲು ಸಚಿವರು, ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಆ.02 ರಂದು ಆಹ್ವಾನಿತ ಮುಖಂಡರು ನವದೆಹಲಿಗೆ ತೆರಳಲಿದ್ದಾರೆ. ಆಡಳಿತಾರೂಢ ಪಕ್ಷದಲ್ಲಿ ಅಸಮಾಧಾನ ತಲೆದೋರಿರುವ ಲಕ್ಷಣಗಳು ಗೋಚರಿಸಿರುವ ಬೆನ್ನಲ್ಲೇ ನಡೆಯುತ್ತಿರುವ ಈ ಸಭೆ ಕುತೂಹಲ ಮೂಡಿಸಿದೆ. ಇತ್ತೀಚೆಗೆ ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿಲ್ಲ, ಕೆಲವು ಸಚಿವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು.

ಹೌದು, ನಮಗೆ ರಾಜಕೀಯ ಅಜೆಂಡಾ ಇದೆ. ಸಂಸತ್ ಚುನಾವಣೆಗೆ ನಾವು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕಿದೆ. ಲೋಕಸಭಾ ಚುನಾವಣೆ ಹಾಗೂ ಟಿಕೆಟ್ ಹಂಚಿಕೆ ಪ್ರಕ್ರಿಯೆಗಾಗಿ ನಾನು ನಾಯಕರಿಗೆ ಅವರ ಜವಾಬ್ದಾರಿಗಳನ್ನು ಹಂಚಿಕೆ ಮಾಡಬೇಕಿದೆ ಎಂದು ಡಿ.ಕೆ ಶಿವಕುಮಾರ್ ಹೈಕಮಾಂಡ್ ಬುಲಾವ್ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸತ್ ಚುನಾವಣೆಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಬೇಕು? ಯಾವುದೇ ಸಚಿವರು ಅಥವಾ ಶಾಸಕರನ್ನು ಕಣಕ್ಕೆ ಇಳಿಸಬೇಕೇ? ಯಾರಿಗೆ ಜವಾಬ್ದಾರಿ ನೀಡಬೇಕು ಎಂಬ ಅಂಶಗಳ ಬಗ್ಗೆ ನಾವು ಮಾನದಂಡಗಳನ್ನು ನಿಗದಿಪಡಿಸಬೇಕಿದೆ ಆದ್ದರಿಂದ ಎಲ್ಲಾ ಹಿರಿಯ ನಾಯಕರ ಸಭೆಯನ್ನು ಹೈಕಮಾಂಡ್ ಕರೆದಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೆಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಇತರರು ದೆಹಲಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಪಕ್ಷದಲ್ಲಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ಕೆಲವು ಶಾಸಕರು ಸಿಎಲ್‌ಪಿ ಸಭೆಗೆ ಮನವಿ ಮಾಡಿದ್ದಾರೆ, ಅದರಂತೆ ಕಳೆದ ವಾರ ನಡೆದಿತ್ತು ಎಂದಷ್ಟೇ ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ