Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ : ಬೊಮ್ಮಾಯಿ‌

ಸುದ್ದಿಮೂಲ ವಾತೆ

ಬೀದರ್, ಏ.29:  ಕಾಂಗ್ರೆಸ್ ನಾಯಕರು ಲಿಂಗಾಯತರು ಭ್ರಷ್ಟರು ಅಂತ ಹೇಳಿದರು. ರಾಜ್ಯದ ಅತ್ಯಂತ ಭ್ರಷ್ಟ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ನರೇಂದ್ರ ನೋದಿ ಅವರ ಬಗ್ಗೆ ಖರ್ಗೆ ಅವರು ಆರೋಪಿಸಿದ್ದಾರೆ. ನರೇಂದ್ರ ಮೋದಿ ಅವರು ಅಂದರೆ ಕಾಂಗ್ರೆಸ್ ನವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಹುಮ್ನಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ವಿಶ್ವಮಾನವ ಬಸವಣ್ಣ ಅವರ ನಾಡಲ್ಲಿ ವಿಶ್ವ ನಾಯಕ ನರೇಂದ್ರ ಮೋದಿ ಯವರಿಗೆ ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ ಅವರು,
ಪ್ರಜಾಪ್ರಭುತ್ವದ ಮೊದಲನೇ ಕರ್ತವ್ಯ ಎಲ್ಲರನ್ನೂ ಸಮಾನವಾಗಿ ನೋಡುವುದು. ಕಾಂಗ್ರೆಸ್ ಇಷ್ಟು ವರ್ಷ ಅದನ್ನು ಮಾಡಿಲ್ಲ. ನಾವು ಎಲ್ಲ ಸಮುದಾಯಗಳನ್ನು ಸಮಾನವಾಗಿ ನೋಡುತ್ತಿದ್ದೇವೆ ಎಂದರು.

ನಮ್ಮ ಪ್ರಧಾನ ಮಂತ್ರಿ ಇಡೀ ದೇಶ ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತಿದ್ದಾರೆ‌. ಕರ್ನಾಟಕದಲ್ಲಿ 13 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದಾರೆ‌. ಜಲ ಜೀವನ್ ಮಿಷನ್ ಅಡಿಯಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 54 ಲಕ್ಷ ರೈತರಿಗೆ 16000 ಕೋಟಿ ನೀಡಿದ್ದೇವೆ‌ ಎಂದರು.

ರಾಜ್ಯದಲ್ಲಿ ಟೆಕ್ಸ್ ಟೈಲ್ ಪಾರ್ಕ್ ನೀಡಿದ್ದಾರೆ. ಇದರಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. ಬೀದರ್ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ