Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2047ರೊಳಗೆ ಭಾರತ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಲ್ಲಿ ಅಗ್ರಸ್ಥಾನ ಗಳಿಸಲಿದೆ: ಪ್ರಧಾನಿ‌ ನರೇಂದ್ರ ಮೋದಿ

ಸುದ್ದಿ ಮೂಲ ವಾರ್ತೆ

ಚಿಕ್ಕಬಳ್ಳಾಪುರ ಮಾ.25: ಭಾರತದ ಅಭಿವೃದ್ಧಿ ಪಥದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು ಮಹತ್ತರವಾದ ಪಾತ್ರವನ್ನು ವಹಿಸುತ್ತಿವೆ. ಈ ಸಂಸ್ಥೆಗಳು ಕೇವಲ ಧರ್ಮ ಮತ್ತು ನಂಬಿಕೆಯ ಸಂದೇಶವನ್ನು ಹರಡಲು ಸಹಾಯ ಮಾಡಿಲ್ಲ.ಬಡವರು, ಹಿಂದುಳಿದವರು,ಮಹಿಳೆಯರು, ಬುಡಕಟ್ಟು ಮತ್ತು ಸಮಾಜದ ಇತರ ಅಶಕ್ತ ವರ್ಗಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಅವರು ಇಂದು ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಗ್ರಾಮದಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದ ಶ್ರೀ ಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ( ಮೆಡಿಕಲ್ ಕಾಲೇಜು ) ಉದ್ಘಾಟನೆ ಮಾಡಿ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕದ ನನ್ನ ಎಲ್ಲ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದರು.

ಭಾರತವು ತನ್ನ ‘ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುವ ಹಾದಿಯಲ್ಲಿ ನಡೆಯಲು ನಿರ್ಧರಿಸಿದೆ. ಆದರೆ ಇಷ್ಟು ಕಡಿಮೆ ಅವಧಿಯಲ್ಲಿ ಈ ಸಾಧನೆಯನ್ನು ದೇಶ ಹೇಗೆ ಸ್ವೀಕರಿಸುತ್ತದೆ ಎಂಬ ಪ್ರಶ್ನೆಗಳು ಎದ್ದಿವೆ. ಅದು ಹೇಗೆ ಕಾರ್ಯಸಾಧ್ಯವಾಗುತ್ತದೆ? ಇಂತಹ ಪ್ರಶ್ನೆಗಳಿಗೆ ಒಂದೇ ಒಂದು ಉತ್ತರ ‘ಎಲ್ಲರ ಪ್ರಯತ್ನ’ ಎಂದು ಮೋದಿ ಹೇಳಿದರು.

ಕರ್ನಾಟಕವು ಋಷಿಮುನಿಗಳು, ಆಶ್ರಮಗಳು, ಮಠ ಮಾನ್ಯಗಳ ಪರಂಪರೆಯ ಪುಣ್ಯ ಭೂಮಿಯಾಗಿದೆ. ಈ ಪ್ರಾಚೀನ ಸಂಪ್ರದಾಯಗಳು ಇಲ್ಲಿ ಹೆಚ್ಚು ಜೀವಂತವಾಗಿವೆ. ಚಿಕ್ಕಬಳ್ಳಾಪುರವು ನಾಡಿನ ಜನರಿಗೆ ಶಿಕ್ಷಣ ಮತ್ತು ಆರೋಗ್ಯವನ್ನು ನೀಡುವ ಸಂಕಲ್ಪದ ಮೂಲಕ ಮಾನವೀಯತೆಯ ಸೇವೆಯ ಧ್ಯೇಯವನ್ನು ತೋರಿದೆ. ಈ ಸಾಧನೆಗಳು ಅದ್ಭುತವಾಗಿವೆ. ಇದಲ್ಲದೆ, ಇಂದು ಇಲ್ಲಿ ಉದ್ಘಾಟನೆಗೊಳ್ಳುತ್ತಿರುವ ವೈದ್ಯಕೀಯ ಕಾಲೇಜು ಈ ಮಹಾನ್ ಧ್ಯೇಯವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ದುಬಾರಿ ಅನ್ನಿಸುವಂತಹ ಆರೋಗ್ಯ ಸೇವೆಯನ್ನು ಸಹ ಸರ್ವರಿಗೂ ಉಚಿತವಾಗಿ ನೀಡಲು ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಮುದ್ದೇನಹಳ್ಳಿಯಲ್ಲಿ ಆರಂಭವಾಗಿರುವುದು ಶ್ಲಾಘನೀಯವಾದದ್ದು. ಈ ದಿಸೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಮುಂದಾಗಿರುವುದು ಅಭಿನಂದನಾರ್ಹ, ಇದು ನಿಜವಾದ ಆತ್ಮ ನಿರ್ಭರ ಭಾರತ ಎಂದರು.

5 ಲಕ್ಷ ವಿಮಾ ವ್ಯಾಪ್ತಿಗೆ ಒಳ ಪಟ್ಟು ಉಚಿತ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ "ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ "

ಯೋಜನೆ ಅನುಷ್ಠಾನದಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, 1.5 ಕೋಟಿ ಜನರನ್ನು ಈ ಯೋಜನೆಯಡಿ ಈ ವರೆಗೆ ನೋಂದಾಯಿಸಲಾಗಿದೆ ಎಂದು ಈ ವೇಳೆ ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿಗೆ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಮುದ್ದೇನಹಳ್ಳಿ ಗ್ರಾಮಕ್ಕೆ ಬಂದಿಳಿದ ಮೋದಿ ಅವರು ಮುಖ್ಯ ಮಂತ್ರಿ ಬಸರಾಜ ಬೊಮ್ಮಯಿ ಅವರೊಂದಿಗೆ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೂ ಭೇಟಿ ನೀಡಿ ಮಾಹಿತಿ ಪಡೆದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ