Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವನಾಥಪುರ ವಿಎಸ್‌ಎಸ್‌ಎನ್‌ಗೆ ನೂತನ ಅಧ್ಯಕ್ಷರಾಗಿ ಸಿ.ಪ್ರಸನ್ನ ಕುಮಾರ್ ಆಯ್ಕೆ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ.23 : ತಾಲ್ಲೂಕಿನ ವಿಶ್ವನಾಥಪುರ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ಪ್ರಸನ್ನ ಕುಮಾರ್, ಉಪಾಧ್ಯಕ್ಷರಾಗಿ ಶ್ರೀರಾಮಯ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.

ನೂತನ ಅಧ್ಯಕ್ಷ ಸಿ.ಪ್ರಸನ್ನ ಕುಮಾರ್ ಮಾತನಾಡಿ, 'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೂ ಜನಪರವಾಗಿ ಕೆಲಸ ಮಾಡುತ್ತಿದೆ. ಕಳೆದ ಸಾಕಷ್ಟು ವರ್ಷಗಳಿಂದ ಕಾಂಗ್ರೆಸ್‌ ಬೆಂಬಲಿತರ ತೆಕ್ಕೆಯಲ್ಲಿಯೇ ವಿಶ್ವನಾಥಪುರ ವ್ಯವಸಾಯ ಸೇವಾ ಸಹಕಾರ ಸಂಘವಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುತ್ತೇವೆ' ಎಂದು ತಿಳಿಸಿದರು.

ಈಗಾಗಲೇ ಸಾಕಷ್ಟು ರೈತರು ಸಂಘದಲ್ಲಿ ಸಕ್ರಿಯ ಸದಸ್ಯರಾಗಿದ್ದು, ಕೃಷಿ ಚಟುವಟಿಕೆಗಳ ಉತ್ತೇಜನಕ್ಕಾಗಿ ಸಾಕಷ್ಟು ಸಾಲ ಸೌಲಭ್ಯಗಳನ್ನು ಪಡೆದುಕೊಂಡು, ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ಪಡೆದುಕೊಂಡು ಮತ್ತಷ್ಟು ಅಭಿವೃದ್ಧಿ ಪರವಾದ ಕೆಲಸಗಳನ್ನು ಮಾಡಲು ಯೋಜನೆ ರೂಪಿಸಿದ್ದೇವೆ' ಎಂದರು.

ಕೆಪಿಸಿಸಿ ಸದಸ್ಯರಾದ ವಿ.ಶಾಂತ ಕುಮಾರ್ ಮಾತನಾಡಿ ನೂತನ ಅಧ್ಯಕ್ಷರು ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು ಅವರಿಗೆ ತುಂಬಾ ಅನುಭವವಿದ್ದು ಸಂಘವನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ತರಬೇಕು ಹಾಗೂ ಸಹಕಾರಿ ಸಂಘಗಳ ಬೆಳವಣಿಗೆಯೂ ರೈತರ ಭಾಗವಹಿಸುವಿಕೆಯಿಂದ ಮಾತ್ರವೇ ಸಾಧ್ಯ, ಆರ್ಥಿಕ ಚೈತನ್ಯವಿದ್ದರಷ್ಟೇ ಯಾವುದೇ ಸಂಘಗಳು ಮತ್ತಷ್ಟು ಅನ್ನದಾತರಿಗೆ ಅಗತ್ಯ ಸಾಲ ಸೌಲಭ್ಯ, ಉತ್ತಮವಾದ ರಸಗೊಬ್ಬರು, ಬಿತ್ತನೆಗೆ ಅಗತ್ಯವಾಗಿರುವ ಅಂಶಗಳನ್ನು ಒದಗಿಸಲು ಸುಲಭವಾಗುತ್ತದೆ. ಆದ ಕಾರಣ ಎಲ್ಲ ಸದಸ್ಯರೂ ಸಕಾಲದಲ್ಲಿ ಸಾಲ ಮರು ಪಾವತಿ ಮಾಡಿ ಸಹಕಾರಿಸಿ' ಎಂದು ಮನವಿ ಮಾಡಿದರು.

ಇದೇ ವೇಳೆ ಕೆಪಿಸಿಸಿ ಸದಸ್ಯರಾದ ವಿ.ಶಾಂತ ಕುಮಾರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್‌.ನಾಗೇಗೌಡ, ಸಂಘದ ನೂತನ ನಿರ್ದೇಶಕರಾದ ಚಂದ್ರಪ್ಪ,ಮುನೇಗೌಡ ಸಿ, ಸುಬ್ಬೇಗೌಡ ಎಂ.ಆರ್‌, ಶಿಲ್ಪ.ಬಿ, ವೆಂಕಟಲಕ್ಷ್ಮಮ್ಮ, ನರಸಿಂಹರಾಜು ಎಸ್‌, ರಮೇಶ್‌ ಎ, ರವಿ ಕುಮಾರ್‌ ಟಿ, ಮುನಿರಾಜು ಆರ್‌.ಎಂ, ಅರ್ಜುನ್‌ ಗೌಡ ಆರ್‌.ಕೆ ರವರು ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ