Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರಿನಲ್ಲಿ ಬಂಜೆತನದ ಕುರಿತು ಅಭಿಯಾನ 

ಸುದ್ದಿಮೂಲ ವಾರ್ತೆ

ತುಮಕೂರು, ಸೆ.9 : ಗರ್ಭಗುಡಿ ಐವಿಎಫ್ ಕೇಂದ್ರದ ಸಹಕಾರದೊಂದಿಗೆ ಗರ್ಭಜ್ಞಾನ್ ಫೌಂಡೇಷನ್ ಹಾಗೂ ಸುವರ್ಣ ದೀಪ ಅಂಧರು ಹಾಗೂ ಬುದ್ಧಿಮಾಂದ್ಯ ಟ್ರಸ್ಟ್ ಸಹಯೋಗದಲ್ಲಿ ಬಂಜೆತನ ಮುಕ್ತ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ಟ್ರಸ್ಟ್‌ ವ್ಯವಸ್ಥಾಪಕ ನಿರ್ದೇಶಕ ಹಾಗೂ ದೀಪಕ್ ಆರ್. ಸಾಗರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಮಕ್ಕಳಿಲ್ಲದ ದಂಪತಿಗಳು ಆಧುನಿಕ ಚಿಕಿತ್ಸೆ ಪಡೆಯುವ ಮೂಲಕ ಮಕ್ಕಳನ್ನು ಪಡೆಯುವ ಉದ್ದೇಶದಿಂದ ಸೆಪ್ಟೆಂಬರ್ ತಿಂಗಳಲ್ಲಿ ವಿವಿಧ ಕಲಾವಿದರ ತಂಡದೊಂದಿಗೆ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ರಾಜ್ಯದ 31 ಜಿಲ್ಲೆಗಳಲ್ಲಿ ಈ ಅಭಿಯಾನ ನಡೆಯಲಿದ್ದು, ಈಗಾಗಲೆ 28 ಜಿಲ್ಲೆಗಳಲ್ಲಿ ಅಭಿಯಾನ ಮುಕ್ತಯವಾಗಿದ್ದು, ಉಳಿದ ಜಿಲ್ಲೆಗಳಲ್ಲೂ ಇದನ್ನು ನಡೆಸಲಾಗುವುದು. ಬಂಜೆತನಕ್ಕೆ ಮಹಿಳೆಯರನ್ನು ಮಾತ್ರ ದೂಷಿಸುವುದು ನಮ್ಮ ಸಮಾಜದಲ್ಲಿ ಕಂಡು ಬರುತ್ತಿದ್ದು, ಮಹಿಳೆಯರಷ್ಟೆ ಪುರುಷರು ಇದಕ್ಕೆ ಕಾರಣ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗೆ ಪುರುಷರಲ್ಲೇ ಬಂಜೆತನ ಹೆಚ್ಚಾಗಿ ಕಂಡು ಬರುತ್ತಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿಎಫ್‌ಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಚಿಕಿತ್ಸಾ ಸೌಲಭ್ಯಗಳಿಲ್ಲ ಎಂದ ಅವರು, ನಾವು ಅಭಿಯಾನ ನಡೆಸಿದ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸಂತಾನರಹಿತ ದಂಪತಿಗಳು ಹೆಚ್ಚಾಗಿ ಇರುವುದು ಕಂಡು ಬಂದಿದೆ ಎಂದರು.

ಮಕ್ಕಳಿಲ್ಲದ ದಂಪತಿಗಳು ಅಂಚೆ ಕಾರ್ಡಿನಲ್ಲಿ ಮಾಹಿತಿ, ಮೊಬೈಲ್ ಸಂಖ್ಯೆ, ತಮ್ಮ ಪ್ರಶ್ನೆಗಳನ್ನು ಬರೆದು ಗರ್ಭಗುಡಿ ಐವಿಎಫ್ ಸೆಂಟರ್ ನಂ.41, 2ನೇ ಮಹಡಿ, ಶುಭಶ್ರೀ ಫ್ರೆಂಡ್‌, ಸೌತ್ ಎಂಡ್ ರಸ್ತೆ, ಭಾರತಿ ನರ್ಸಿಂಗ್ ಹೋಮ್ ಪಕ್ಕ, ಟಾಟಾ ಸಿಲ್ಕ್ ಫಾರಂ, ಬಸವನಗುಡಿ ಬೆಂಗಳೂರು ಇಲ್ಲಿಗೆ ಕಳುಹಿಸಬಹುದು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ