Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.27: ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಅವರು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ ಎಂಬ ಪ್ರತಿಪಕ್ಷ ನಾಯಕ ಆರ್ .ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೇವಲ ಆರೋಪ ಮಾಡುವ ಉದ್ದೇಶದಿಂದ ಆರೋಪಿಸುತ್ತಿದ್ದಾರೆ. ಇದುವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದೆ. ಇದರಲ್ಲಿ 1.14 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿದ್ದು, ಇನ್ನೂ 3 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿಸಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಗೃಹಲಕ್ಷ್ಮಿ ನೋಂದಾಯಿಸಿಕೊಂಡಿರುವವರಿಗೆ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ನೀಗಿಸಿ, ಹಣ ಒದಗಿಸಲು ಸೂಚನೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 4.34 ಕೋಟಿ ಜನರಿಗೆ ಪ್ರತಿ ಮಾಹೆ 170 ರೂ. ನೀಡಲಾಗುತ್ತಿದೆ. ಇದುವರೆಗೆ 1.50 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುತ್ತಿರುವುದು ಸುಳ್ಳು ಎಂದು ಬಿಜೆಪಿಯವರು ಸಾಬೀತುಪಡಿಸಲಿ ಎಂದರು.

ಬರಪರಿಹಾರ ಬಿಡುಗಡೆ : ಕೇಂದ್ರದ ವಿಳಂಬಕ್ಕೆ ಕಾರಣವೇನು?

ಕೇಂದ್ರದಿಂದ ಬರಪರಿಹಾರ ಬಿಡುಗಡೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಉತ್ತರಿಸಿ, ರಾಜ್ಯದಿಂದ ಪಡೆದ ಹಣವನ್ನೇ ಕೇಂದ್ರ ಸರ್ಕಾರ ಪರಿಹಾರವಾಗಿ ನೀಡುತ್ತದೆ. ಈ ಪರಿಹಾರವನ್ನು ನೀಡಲು ಕೇಂದ್ರ ವಿಳಂಬನೀತಿ ತೋರುತ್ತಿದೆ. ಈ ವಿಳಂಬಕ್ಕೆ ಕಾರಣವೇನು ? ಕರ್ನಾಟಕದಿಂದ ಸುಮಾರು 4 ಲಕ್ಷ ಕೋಟಿ ತೆರಿಗೆ ಹಣ ಕೇಂದ್ರಕ್ಕೆ ತಲುಪಿದರೂ, ರಾಜ್ಯಕ್ಕೆ ಪರಿಹಾರವಾಗಿ ಕೇವಲ 50 ರಿಂದ 60 ಸಾವಿರ ಕೋಟಿ ಬರುತ್ತದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ