Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಸಮೀಕ್ಷೆ ಬಗ್ಗೆೆ ಎಚ್ಚರಿಕೆಯಿಂದ ಇದ್ದು ಅಗತ್ಯ ಮಾಹಿತಿ ಮಾತ್ರ ನೀಡಿ ಸಮೀಕ್ಷೆಯಲ್ಲಿ ವೈಯಕ್ತಿಿಕ ಮಾಹಿತಿ ನೀಡಬೇಡಿ: ಆರ್. ಅಶೋಕ್

ಸುದ್ದಿಮೂಲ ವಾರ್ತೆ ಬೆಂಗಳೂರು,, ಸೆ.28:
ರಾಜ್ಯದಲ್ಲಿ ಕಾಂಗ್ರೆೆಸ್ ಸರ್ಕಾರ ನಡೆಸುತ್ತಿಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆೆಗಳನ್ನು ಕೇಳುತ್ತಿಿದ್ದಾರೆ. ಇಂತಹ ಪ್ರಶ್ನೆೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆೆಸ್ ರಾಜಕೀಯಕ್ಕೆೆ ಬಳಸಿಕೊಳ್ಳುತ್ತಿಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್ ಕಾರ್ಡ್ ರದ್ದು ಮಾಡುತ್ತಿಿದ್ದಾರೆ. ಅದಕ್ಕಾಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿಿದೆ ಎಂದರು.
ಮುಂದಿನ ಬಜೆಟ್ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ ಸಮೀಕ್ಷೆ. ಜನರಿಗೆ ಪಂಗನಾಮ ಹಾಕುವ ಸಮೀಕ್ಷೆ. ಯಾರೂ ವೈಯಕ್ತಿಿಕ ದಾಖಲೆಗಳನ್ನು ನೀಡಬಾರದು. ಯಾವ್ಯಾಾವ ಪ್ರಶ್ನೆೆಗೆ ಉತ್ತರ ಕೊಡಬಹುದೋ ಅಷ್ಟನ್ನು ಮಾತ್ರ ನೀಡಿದರೆ ಸಾಕು. ಹೈಕೋರ್ಟ್ ಕೂಡ ಎಲ್ಲ ಪ್ರಶ್ನೆೆಗಳಿಗೆ ಉತ್ತರ ನೀಡಬೇಕಿಲ್ಲ ಎಂದಿದೆ ಎಂದರು.
ಕಾಲ್ತುಳಿತಕ್ಕೆೆ ಡಿಎಂಕೆ ಕಾರಣ:
ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ ಘಟನೆಯಿಂದ ಇಡೀ ದೇಶ ಬೆಚ್ಚಿಿಬಿದ್ದಿದೆ. ವಿಧಾನಸೌಧದ ಮುಂಭಾಗ ಕಾಂಗ್ರೆೆಸ್ ಸರ್ಕಾರದಿಂದ ನಡೆದಿದ್ದ ಆರ್‌ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ಘಟನೆಯಿಂದಲೇ ನಾವೆಲ್ಲರೂ ದುಃಖಕ್ಕೊೊಳಗಾಗಿದ್ದೆವು. ತಮಿಳುನಾಡಿನಲ್ಲಿ ನಡೆದಿರುವ ದುರ್ಘಟನೆ ಇದಕ್ಕಿಿಂತಲೂ ದೊಡ್ಡದಾಗಿದೆ ಎಂದು ಅಶೋಕ್ ಮರುಕ ವ್ಯಕ್ತಪಡಿಸಿದರು.
ತಮಿಳುನಾಡಿನ ಡಿಎಂಕೆ ಸರ್ಕಾರ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. ಡಿಎಂಕೆ ಸರ್ಕಾರ 10 ಸಾವಿರ ಜನರಿಗೆ ಅನುಮತಿ ನೀಡಿದೆ. ಆದರೆ ಪೊಲೀಸ್ ಬಂದೋಬಸ್‌ತ್‌ ವ್ಯವಸ್ಥೆೆ ಮಾಡಿಲ್ಲ. ಈ ಹಿಂದೆಯೇ ಸರ್ಕಾರಕ್ಕೆೆ ಕೋರ್ಟ್ ಸೂಚನೆ ನೀಡಿದ್ದರೂ, ಅದನ್ನು ಸರ್ಕಾರ ಧಿಕ್ಕರಿಸಿದೆ. ಈ ಅನಾಹುತಕ್ಕೆೆ ಸ್ಟಾಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದರು.
ನಟ ವಿಜಯ್ ಕೂಡಲೇ ಕ್ಷಮಾಪಣೆ ಕೇಳಿ, ಆಸ್ಪತ್ರೆೆಗೆ ಭೇಟಿ ನೀಡಬೇಕಿತ್ತು. ಅದನ್ನು ವಿಜಯ್ ಮಾಡಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಾಯಮೂರ್ತಿಯ ಸಮಿತಿಗೆ ತನಿಖೆಗೆ ನೀಡಬೇಕೆಂದು ಕರ್ನಾಟಕದ ಬಿಜೆಪಿ ಘಟಕ ಆಗ್ರಹಿಸುತ್ತದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ