Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದ ಅರಮನೆ ಮೈದಾನದಲ್ಲಿ ಕಂಬಳ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ. 24 : ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದಿನಿಂದ ಕಂಬಳ ನಡೆಯಲಿದ್ದು, ಅರಮನೆ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.

ಕಂಬಳದಲ್ಲಿ ವಿಜೇತರಾಗುವ ಕೋಣದ ಮಾಲೀಕರಿಗೆ 1 ಲಕ್ಷ ರೂ. ನಗದು, 16 ಗ್ರಾಂ ಸ್ವರ್ಣ ಕೊಡಲಾಗುತ್ತದೆ. ದ್ವಿತೀಯ ಸ್ಥಾನ ಗಳಿಸಿದವರಿಗೆ 50 ಸಾವಿರ ರೂ. ಜತೆಗೆ 2.8 ಗ್ರಾಂ ಚಿನ್ನ ಮತ್ತು ತೃತೀಯ ಸ್ಥಾನ ಪಡೆದವರಿಗೆ 25 ಸಾವಿರ ರೂ. ನಗದು ಹಾಗೂ 4 ಗ್ರಾಂ ಬಂಗಾರದ ಪದಕವನ್ನು ಬಹುಮಾನವಾಗಿ ನೀಡಲಾಗುತ್ತದೆ.

ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.

ಕರಾವಳಿಯಿಂದ ಬಂದ ಕುಡಿಯುವ ನೀರು

ಈಗಾಗಲೇ ಕಂಬಳದಲ್ಲಿ ಭಾಗವಹಿಸಲು ಸುಮಾರು 200 ಜೊತೆ ಕೋಣಗಳು ಕರಾವಳಿಯಿಂದ ಬಂದಿಳಿದಿವೆ. ಈ ಕೋಣಗಳ ಜೊತೆಯಲ್ಲಿ ಅವುಗಳು ಸೇವಿಸುವ ನೀರು ಕೂಡ ಮಂಗಳೂರಿನಿಂದಲೇ ಬಂದಿವೆ. ಈ ಕೋಣಗಳು ಕುಡಿಯುವ ನೀರನ್ನು ಮಂಗಳೂರಿನಿಂದ ಟ್ಯಾಂಕರ್‌ ಗಳು ಮೂಲಕ ಬೆಂಗಳೂರಿಗೆ ತರಲಾಗಿದೆ. ಕುಡಿಯಲು ಈ ನೀರನ್ನು ಮಾತ್ರವೇ ಬಳಸಲಾಗುತ್ತಿದೆ. ಕಾರಣ ಕೋಣಗಳ ಆರೋಗ್ಯದ ಬಗ್ಗೆ ಇರುವ ಹೆಚ್ಚಿನ ಕಾಳಜಿ. ಕೋಣಗಳಿಗೆ ನೀರು ಮಾತ್ರವಲ್ಲ ಕೋಣಗಳಿಗೆ ಕೊಡಬೇಕಾದ ಆಹಾರ, ಬೈ ಹುಲ್ಲನ್ನು ಅಲ್ಲಿಂದಲೇ ಲಾರಿಯಲ್ಲಿ ತರಲಾಗಿದೆ. ಈ ಕಂಬಳದಲ್ಲಿ ಪಶುವೈದ್ಯರು ಮತ್ತು ನಾಟಿ ವೈದ್ಯರು ಮೊಕ್ಕಾಂ ಹೂಡಲಿದ್ದಾರೆ.

ಸಾಮಾನ್ಯವಾಗಿ ನವೆಂಬರ್‌ ನಿಂದ ಏಪ್ರಿಲ್‌ ವರೆಗೂ ಕಂಬಳ ನಡೆಯಲಿವೆ. ಹೀಗಾಗಿ, ಕೋಣಗಳ ಆರೋಗ್ಯ ಬಹಳ ಮುಖ್ಯವಾಗಿರುತ್ತದೆ. ಈ ಕೋಣಗಳು ಪ್ರತಿ ವಾರ ಒಂದೊಂದು ಕಂಬಳದಲ್ಲಿ ಎರಡು ದಿನಗಳ ಕಾಲ ಭಾಗವಹಿಸಬೇಕಾಗಿರುತ್ತದೆ. ಪ್ರತಿ ಶನಿವಾರ ಮತ್ತು ಭಾನುವಾರ ನಿರಂತರವಾಗಿ ಕಂಬಳ ಇದ್ದೇ ಇರುತ್ತದೆ. ಹೀಗಾಗಿ ಅವುಗಳ ಆರೋಗ್ಯ ತುಂಬಾ ಮುಖ್ಯವಾಗಿರುತ್ತದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ