Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.7:ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಕರ್ನಾಟಕ ಶೋಷಿತ ವರ್ಗಗಳ ಮಹಾಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದರು.

ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, (preferential treatment) ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಒಕ್ಕೂಟದ ಮುಖಂಡರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ.ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ.ನರಸಿಂಹಯ್ಯ, ಪ್ರೊ.ಜಾಫೆಟ್, ಬಿ.ಟಿ.ಲಲಿತಾನಾಯಕ್, ಜಿ.ಎಸ್.ಪಾಟೀಲ್ ಸೇರಿ 150 ಕ್ಕೂ ಹೆಚ್ಚು ಮಂದಿ ನಾನಾ ಜಾತಿಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ