Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ ಜಲ ವಿವಾವ: ಸೆ.1ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ, ಆ.25: ಕಾವೇರಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ ಮುಂದಿನ ವಿಚಾರಣೆಯನ್ನು ಬರುವ ಸೆ.1ಕ್ಕೆ ಮುಂದೂಡಿದೆ.

ಇದೇ ವೇಳೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ. ನಾವು ತಜ್ಞರಲ್ಲ ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ. ಆದ್ದರಿಂದ ಈ ಮಧ್ಯಂತರ ಅವಧಿಯಲ್ಲಿ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ.

ಮೊದಲಿಗೆ ವಾದ ಮಾಡಿದ ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ 40 ಟಿಎಂಸಿ ನೀರು ಬಿಡುತ್ತಿಲ್ಲ. ಅಲ್ಲದೇ 15 ದಿನಗಳು 10 ಸಾವಿರ ಕ್ಯೂಸೆಕ್ ನೀರು ಬಿಡಲು ಕೇಂದ್ರ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿತ್ತು. ಇದು ಮುಂದಿನ 20 ದಿನಗಳಿಗೆ ಮುಂದುವರೆಯಬೇಕು ಹೇಳಿದರು.

ಮಳೆ ಕಡಿಮೆ ಆಗಿದೆ

ಕರ್ನಾಟಕ ರಾಜ್ಯದ ಪರ ವಾದಿಸಿದ ಶ್ಯಾಮ್‌ ದಿವಾಣ್‌ ಅವರು, ಮಳೆ ಪ್ರಮಾಣ ಕಡಿಮೆ ಇದೆ. ಹೀಗಾಗಿ ನೀರಿನ ಪ್ರಮಾಣ ತುಂಬಾ ಕಡಿಮೆ ಇದೆ. ಈ ವಿಚಾರವನ್ನು ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ನಮ್ಮ ಸಮಸ್ಯೆಗಳನ್ನು ಹೇಳಲು ಪ್ರಯತ್ನಿಸಿದಾಗ ತಮಿಳುನಾಡು ಸರ್ಕಾರದ ಅಧಿಕಾರಿಗಳು ಕೇಳದೆ ಸಭೆಯಿಂದ ಹೊರನಡೆದರು ಎಂದು ತಮ್ಮ ವಾದ ಮಂಡನೆ ವೇಳೆ ಪ್ರತಿಪಾದಿಸಿದರು.

ಪರ-ವಿರೋಧ ವಾದ ಆಲಿಸಿದ ಸುಪ್ರೀಕೋರ್ಟ್ ತ್ರಿಸದಸ್ಯ ಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿತು.

ಸೋಮವಾರವೇ ಸಭೆ:

ಕಾವೇರಿ ನದಿ ನೀರಿಗಾಗಿ ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆ ವೇಳೆ ಸಭೆ ಕರೆಯುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರವು ಸೋಮವಾರವೇ (ಆ.28) ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದು, ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರದ ಅಭಿಪ್ರಾಯ ಸಂಗ್ರಹಿಸಲಿದೆ.

ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಕೇಂದ್ರ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ‌ ನೀರು ಹರಿಸುವಂತೆ ಕೇಳುತ್ತಿದೆ. ಆದರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ ಶೇ. 42 ರಷ್ಟು ಕಡಿಮೆ ನೀರು ಸಂಗ್ರಹವಾಗಿದೆ.

ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ. ಅದಾಗ್ಯೂ ಕರ್ನಾಟಕ ತಮಿಳುನಾಡಿಗೆ ನೀರು ಹರಿಸಿ ಆದೇಶವನ್ನು ಕರ್ನಾಟಕ ಪಾಲಿಸಿದೆ ಎಂದು ಅಫಿಡೆವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ