Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಸಿ ನೆಡುವ ಮೂಲಕ ಪರಿಸರ ದಿನ ಆಚರಣೆ

ಸುದ್ದಿಮೂಲ ವಾರ್ತೆ

ಮಾಲೂರು, ಜೂ.6 : ಮುಂದಿನ ಪೀಳಿಗೆಯ ಉಳಿವಿಗಾಗಿ ಗಿಡ ಮರಗಳನ್ನು ಬೆಳೆಸುವ ಮೂಲಕ ಪರಿಸರ ಉಳಿಸುವಂತೆ ಶಾಸಕ ಕೆ.ವೈ ನಂಜೇಗೌಡ ತಿಳಿಸಿದರು.

ಪರಿಸರ ದಿನಾಚರಣೆ ಅಂಗವಾಗಿ ವಲಯ ಅರಣ್ಯ ಇಲಾಖೆ ವತಿಯಿಂದ ಪಟ್ಟಣದ ಕೆಎಸ್ಆರ್ಟಿಸಿ ಡಿಪೋ ಕೇಂದ್ರೀಯ ತರಬೇತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾಗರೀಕತೆ ಬೆಳೆದಂತೆ ಕೈಗಾರಿಕೆಗಳು ಬೆಳೆಯುತ್ತಿದೆ. ಕಾಡು ಗಿಡ-ಮರಗಳು , ಶುದ್ಧಗಾಳಿ ಇಲ್ಲದೆ ಉಸಿರಾಟಕ್ಕೆ ತೊಂದರೆ ಆಗುವುದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳ ಬಳಿ ಗಿಡ-ಮರಗಳನ್ನು ಬೆಳೆಸುವುದರಿಂದ ಆಮ್ಲಜನಕ ಉತ್ಪಾದಾನೆಯಾಗಲಿದೆ. ಇದರಿಂದ ಮುಂದಿನ ಪೀಳಿಗೆಗೂ ಅನುಕೂಲವಾಗುತ್ತದೆ ಎಂದರು.

ವಲಯ ಅರಣ್ಯ ಇಲಾಖೆ ಅಧಿಕಾರಿ ಧನಲಕ್ಷ್ಮಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿ ಹಾಗೂ ಮುಂದಿನ ಭವಿಷ್ಯದಲ್ಲಿ ಒಳ್ಳೆಯ ಹವಾಮಾನಕ್ಕಾಗಿ ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು. ಅರಣ್ಯ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಪರಿಸರಸ್ನೇಹಿ ಅಭ್ಯಾಸಗಳನ್ನು ಅನುಸರಿಸುವ ಮೂಲಕ ಪ್ರಕೃತಿ ಸಂಪತ್ತನ್ನು ಉಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಅಧಿಕಾರಿಗಳಾದ ವೆಂಕಟರಾಮ್, ಹರೀಶ್, ತರಬೇತಿ ಕೇಂದ್ರದ ಪ್ರಾಂಶುಪಾಲ ಚಂದ್ರಶೇಖರ್, ಸಹಾಯಕ ಜೋಶಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ  ರಮೇಶ್ ಬಾಬು, ಕೆಪಿಸಿಸಿ ಸದಸ್ಯ ಅಂಜನಿ ಸೋಮಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ಪುರಸಭಾ ಸದಸ್ಯರಾದ ಎ ರಾಜಪ್ಪ, ಜಾಕಿರ್ ಖಾನ್, ಪರಮೇಶ್  ಸಿಬ್ಬಂದಿ ಕೃಷ್ಣಪ್ಪ ಮುನಿರಾಜು ಶ್ರೀನಿವಾಸ್ ಇನ್ನಿತರರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ