ಮಲ್ಲೇಶ್ವರದಿಂದ ಡಾ ಸಿ ಎನ್ ಅಶ್ವತ್ಥನಾರಾಯಣ ಆಯ್ಕೆ: ಕಾರ್ಯಕರ್ತರ ಸಂಭ್ರಮ
ಸುದ್ದಿಮೂಲ ವಾರ್ತೆ
ಬೆಂಗಳೂರು. ಮೇ 14: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶನಿವಾರ ಸಂಭ್ರಮಿಸಿದರು.
ಮಲ್ಲೇಶ್ವರದಲ್ಲಿರುವ ಶಾಸಕರ ಕಚೇರಿ ಬಳಿ ಜಮಾಯಿಸಿದ ಹೆಚ್ಚಿನ ಸಂಖ್ಯೆಯ ಜನರು ಕುಣಿದು ಕುಪ್ಪಳಿಸಿ ಸಂಭ್ರಮಪಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು, ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಿದರು.
"ಕ್ಷೇತ್ರದ ವಿಧಾನಸಭಾ ಪ್ರತಿನಿಧಿಯಾಗಿ ಇಲ್ಲಿಗೆ ಏನೇನು ಕೆಲಸಗಳು ಆಗಬೇಕಿದೆಯೋ ಅದನ್ನು ಮುಂದುವರಿಸುತ್ತೇನೆ. ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸೇರಿದಂತೆ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಹಿಂದಿನಂತೆಯೇ ಒತ್ತು ನೀಡುತ್ತೇನೆ" ಎಂದು ಹೇಳಿದರು.
ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.