Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಪ್ಪು ಸುಲ್ತಾನ್ ಹಾಗೂ ಮೌಲಾನ ಅಬುಲ್ ಕಲಾಂ ಜಯಂತಿ ಆಚರಣೆ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ. ನ.10:ಮೈಸೂರು ಹುಲಿ ಹಝ್ರತ್ ಟಿಪ್ಪು ಸುಲ್ತಾನ್ ಯುವಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಾಮಮೂರ್ತಿ ನಗರ ವಾರ್ಡ್ ನ ಕೌದೇನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ, ಟಿಪ್ಪು ಸುಲ್ತಾನ್ ಹಾಗೂ ಮೌಲಾನ ಅಬುಲ್ ಕಲಾಂ ಆಝಾದ್ ರವರ ಜಯಂತಿ ಅಂಗವಾಗಿ ಶುಕ್ರವಾರ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಸಂಸ್ಥಾಪಕ ಅಧ್ಯಕ್ಷ ಅಮ್ಜದ್ ಖಾನ್ ಅವರು, ಇದೇ ಮೊದಲ ಬಾರಿಗೆ ನಮ್ಮ ಸಂಘದ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಇನ್ನೂ ಭವಿಷ್ಯದಲ್ಲಿಯೂ ಇದೇ ರೀತಿ ಸಮಾಜಮುಖಿ ಕಾರ್ಯಗಳನ್ನು ಮುಂದುವರೆಸಲಾಗುವುದು ಎಂದರು.

ನಮ್ಮ ಗ್ರಾಮದಲ್ಲಿ ಯಾವುದೇ ಬಗೆಯ ಆಚರಣೆಗಳು, ಕಾರ್ಯಕ್ರಮಗಳು ಇದ್ದರೂ ಪ್ರತಿಯೊಂದು ಸಮಾಜದವರು ಸೇರಿ ಆಚರಣೆ ಮಾಡೋದು ಪ್ರತೀತಿ. ಇಂದಿನ ಕಾರ್ಯಕ್ರಮಕ್ಕೂ ನಮ್ಮ ಗ್ರಾಮದ ಎಲ್ಲಾ ಹಿರಿಯರು, ಯುವ ಮುಖಂಡರು ಸಹಕಾರ ನೀಡಿದ್ದಾರೆ. ಅದಕ್ಕಾಗಿ ನಾನು ಅವರನ್ನೆಲ್ಲ ಅಭಿನಂದಿಸುತ್ತೇನೆ ಎಂದು ಅಮ್ಜದ್ ಖಾನ್ ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಎ.ಮಾದಪ್ಪ, ಎಸ್.ಎ.ಅಝೀಝ್, ಅನ್ವರ್ ಬಾಷಾ,

ನಟ ಆರ್.ಡಿ.ಅನಿಲ್, ಅಮೀರ್ ಜಾನ್, ಮುನವ್ವರ್ ಬಾಷಾ, ಗೋಪಾಲ್, ಯುವ ಮುಖಂಡರಾದ ರವಿ, ಭರತ್, ಸುಹೇಲ್, ಫಯಾಝ್ ಪಾಷ, ಶ್ರಬೇಜ್, ಖ್ವಾಜಾ, ಆಫ್ತಾಬ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ