Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆಲೆಬ್ರಿಟಿಗಳು, ಸಿದ್ದು-ಡಿಕೆಶಿ ಕುಟುಂಬದವರು ಭಾಗಿ

ಸಿದ್ದರಾಮಯ್ಯ , ಡಿಕೆ ಶಿವಕುಮಾರ್ ಮತ್ತು 8 ಮಂದಿ ಸಚಿವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಟರು, ಸಾಹಿತಿಗಳು ಮತ್ತು ಅಧಿಕಾರ ಸ್ವೀಕರಿಸಿದವರ ಕುಟುಂಬಸ್ಥರು ಭಾಗಿಯಾಗಿದ್ದರು.



ಬಹುಭಾಷಾ ಖ್ಯಾತ ನಟ ಕಮಲ್ ಹಾಸನ್ ಸಾಮಾನ್ಯರಂತೆ ವಿಐಪಿ ಗ್ಯಾಲರಿಯಲ್ಲಿ ಬಂದು ಕುಳಿತು ಅಚ್ಚರಿ ಮೂಡಿಸಿದರು. ಬಳಿಕ ಅವರನ್ನು ಮುಖ್ಯ ವೇದಿಕೆಗೆ ಕರೆತರಲಾಯಿತು. ಕಮಲ್ ಹಾಸನ್ ಬರುತ್ತಿದ್ದಂತೆ ಜನರು ಜೋರಾಗಿ ಘೋಷಣೆ ಕೂಗಿದರು.



ನಟ ಶಿವರಾಜ್‌ಕುಮಾರ್, ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್, ನಟ ದುನಿಯಾ ವಿಜಯ್, ನಟಿಯರಾದ ರಮ್ಯಾ, ಭಾವನಾ, ಮಾಜಿ ಸಚಿವೆ ಉಮಾಶ್ರೀ, ಕೆಪಿಸಿಸಿ ಸಾಂಸ್ಕೃತಿಕ ಘಟಕದ ಸಾಧು ಕೋಕಿಲಾ, ಬಾಬು ರಾಜೇಂದ್ರ ಪ್ರಸಾದ್ ಭಾಗಿಯಾಗಿದ್ದರು.

ಇದಲ್ಲದೆ, ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ, ಮತ್ತೊರ್ವ ಪುತ್ರ ದಿವಂಗತ ರಾಕೇಶ್ ಅವರ ಪತ್ನಿ ಮತ್ತು ಅವರ ಪುತ್ರ ಹಾಗೂ ಪುತ್ರಿ, ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ ಭಾಗಿಯಾಗಿದ್ದರು.

ಡಿ.ಕೆ. ಶಿವಕುಮಾರ್ ಅವರ ಪತ್ನಿಉಷಾ ಶಿವಕುಮಾರ್, ಪುತ್ರಿ ಐಶ್ವರ್ಯಾ, ಪುತ್ರ ಹಾಗೂ ಸಹೋದರ ಸಂಸದ ಡಿ.ಕೆ. ಸುರೇಶ್ ಸಹಿತ ಕುಟುಂಬದ ಹಲವು ಭಾಗಿಯಾಗಿದ್ದರು.

ಇನ್ನು ಸಚಿವರಾದ 8 ಮಂದಿಯ ಕುಟುಂಬ ಸದಸ್ಯರು ಸಹ ಸಮಾರಂಭದಲ್ಲಿ ಪಾಲ್ಗೊಂಡು ಕಣ್ತುಂಬಿಕೊಂಡರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ