Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಕೃಷಿ ಕಾಯ್ದೆಗಳು ಉದ್ಯಮಿಗಳ ಪರ: ಪಿ. ಸಾಯಿನಾಥ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಆ.24: ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳು ಸಂವಿಧಾನದ ಆಶಯಕ್ಕೆ ದಕ್ಕೆ ಉಂಟು ಮಾಡಿವೆ. ಈ ಕಾಯ್ದೆಯಿಂದ ತೊಂದರೆಗೆ ಒಳಗಾದವರು ಕಾಯ್ದೆಯ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವಂತಿಲ್ಲ. ಹಾಗಾದರೆ ಕಾಯ್ದೆಗಳು ಬಡವರ ಪರವಾಗಿರದೆ ಅದಾನಿ, ಅಂಬಾನಿ ಸೇರಿದಂತೆ ಉದ್ದಿಮೆಗಳ ರಕ್ಷ ಕವಚವಾಗಿವೆ ಎಂದು ಮ್ಯಾಗ್ಸಸ್ಸೆ ಪುರಸ್ಕೃತ ಹಾಗೂ ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಆಯೋಜಿಸಿದ ‘ಪರ್ಯಾಯ ಕೃಷಿ ಧೋರೆಗಳು’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಮಸೂದೆ ಭೂ ದಾಖಲೆಗಳಿಗೆ ಸಂಬಂಧಿಸಿದ ಪರಿಣಾಮವಾಗಿ, ರೈತರು ಸೇರಿದಂತೆ ಇತರ ವಲಯದ ಜನರ ಪರವಾಗಿ ಕಾಯ್ದೆ ವಿರುದ್ಧ ವಕೀಲರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವಂತಿಲ್ಲ. ಇದರಿಂದ ವಕೀಲರು ಕೂಡ ತಮ್ಮ ವೃತ್ತಿವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಮಸೂದೆಯ ಕರಾಳತೆ ವಿಶ್ಲೇಷಿಸಿದರು.

ಗೋ ಹತ್ಯೆ ನಿಷೇಧದಿಂದ ಗ್ರಾಮೀಣ ಭಾಗದಲ್ಲಿ ಶೇ. 50 ರಷ್ಟು ಆರ್ಥಿಕತೆ ಕುಸಿದಿದೆ. ಹೈನುಗಾರಿಕೆ ನಂಬಿ ಜೀವನ ಸಾಗಿಸುತ್ತಿದ್ದ ರೈತರು, ದನದ ಮಾಂಸ ವ್ಯಾಪಾರಿಗಳು, ದಲಿತರು ಇಂದು ಬೀದಿಗೆ ಬಿದ್ದಿದ್ದಾರೆ. ಮಹಾರಾಷ್ಟ್ರದ ಕೊಲಾಪುರಿ ಚಪ್ಪಲಿ ಕಂಪನಿ ಸ್ಥಗಿತವಾಗಿದೆ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಅತಿ ಹೆಚ್ಚು ರೈತರ ಸಾಗುವಳಿ ಜಮೀನು ಕಾರ್ಪೊರೇಟ್ ಕಂಪನಿಗಳ ಪಾಲಾಗಿವೆ. ರಾಷ್ಟ್ರೀಯ ಕೃಷಿ ಸಮೀಕ್ಷೆ ಪ್ರಕಾರ ಕೃಷಿಯಿಂದ ಆದಾಯ ಕಡಿಮೆ ಬರುತ್ತಿದೆ. ಆದರೆ ಪಶುಸಂಗೋಪನೆಯಿಂದ ಬರುವ ಆದಾಯ ಹೆಚ್ಚಳವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೂ ಸರ್ಕಾರ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಿಲ್ಲ. ಕೃಷಿ ಕೂಲಿಕಾರರಿಂದ ಆದಾಯ ಹೆಚ್ಚಿಗೆ ಬರುತ್ತಿದೆ ಎಂದು ಹೇಳಿ ಮನರೇಗಾ ಅನುದಾನ ಕಡಿತ ಮಾಡಲಾಗುತ್ತಿದೆ ಎಂದು ಕೇಂದ್ರ ಸರಕಾರದ ನೀತಿ ವಿರುದ್ಧ ಆತಂಕ ವ್ಯಕ್ತಪಡಿಸಿದರು.

ಡಾ.ಸ್ವಾಮಿನಾಥನ್ ಆಯೋಗದ ವರದಿ ರೈತರಿಗೆ ಪರಿಪೂರ್ಣ ಇಲ್ಲದಿದ್ದರು ರೈತರ ಉತ್ಪಾದನಾ ವಲಯಕ್ಕೆ ಅನುಕೂಲವಾಗಿದೆ. ಆದರೆ ಸರಕಾರ ಪದೇ ಪದೇ ಆಯೋಗ ರಚನೆ ಮಾಡಿ ಡಾ.ಸ್ವಾಮಿನಾಥನ್ ಆಯೋಗವನ್ನು ಹತ್ಯೆ ಮಾಡುತ್ತಿದೆ. ಪರಿಣಾಮ ರೈತರು ಡಾ.ಸ್ವಾಮಿನಾಥನ್ ವರದಿ ಜಾರಿಗಾಗಿ ದೇಶಾದ್ಯಂತ ರೈತ ಆಂದೋಲನ ತೀವ್ರವಾಗಿ ನಡೆಸಬೇಕು ಎಂದು ಕರೆ ನೀಡಿದರು.

ಅಖಿಲ ಭಾರತ ಕಿಸಾನ್ ಸಭಾದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಡಿ.ರವೀಂದ್ರ ಮಾತನಾಡಿ, ರೈತರು ಬೆಳೆದ ಬೆಳೆಯ ಉತ್ಪಾದನಾ ವೆಚ್ಚ ಹಿಂತಿರುಗಿ ಬರದೇ ಕರ್ನಾಟಕದಲ್ಲಿ 1 ಲಕ್ಷ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಎಲ್ಲಾ ವಲಯಗಳ ಉತ್ಪಾದನೆ ಸ್ಥಗಿತಗೊಂಡರೆ, ಕೃಷಿ ವಲಯ ಮಾತ್ರ ಉತ್ಪಾದನೆಯಲ್ಲಿ ತೊಡಗಿತ್ತು. ಆದರೂ ಇಂತಹ ವಲಯವನ್ನು ಸರಕಾರ ದಿವಾಳಿ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಕಿಡಿ ಕಾರಿದರು.

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಕಾರ್ಯಕ್ರಮದ ಅಧ್ಯಕ್ಷೆತೆ ವಹಿಸಿ ಮಾತನಾಡಿದರು. ಕೆಪಿಆರ್ ಎಸ್ ರಾಜ್ಯ ಉಪಾಧ್ಯಕ್ಷ ಎನ್. ವೆಂಕಟಾಚಲಯ್ಯ ಉಪಸ್ಥಿತದ್ದರು. ಕೆಪಿಆರ್ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಪ್ರಾಸ್ತಾವಿಕ ಭಾಷಣ ಮಾಡಿದರು. ಕೆಪಿಆರ್ ಎಸ್ ರಾಜ್ಯ ಹಣಕಾಸು ಕಾರ್ಯದರ್ಶಿ ಹೆಚ್.ಆರ್. ನವೀನ್ ಕುಮಾರ ಸ್ವಾಗತಿಸಿದರು. ಕೆಪಿಆರ್ ಎಸ್ ರಾಜ್ಯ ಉಪಾಧ್ಯಕ್ಷ ಶಾಂತಾರಾಮ ನಾಯಕ ನಿರೂಪಿಸಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ