Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಲಸನಹಟ್ಟಿ ಗ್ರಾಮಕ್ಕೆ ಸಿಇಓ ಭೇಟಿ; ಪರಿಶೀಲನೆ

ಸುದ್ದಿಮೂಲವಾರ್ತೆ

ಕೊಪ್ಪಳ,ಜೂ.30: ಅನಾರೋಗ್ಯದಿಂದ ಜೂನ್ 29ರಂದು ಮೃತಪಟ್ಟ, ಕನಕಗಿರಿ ತಾಲೂಕಿನ ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದ ಸುನೀಲ್‌ಕುಮಾರ ಕಂದಕೂರು ಅವರ ನಿವಾಸಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.



ಮೃತನು ಚಿಕಿತ್ಸೆಗಾಗಿ ದಾಖಲಾದ ಸಂದರ್ಭದಲ್ಲಿ ನೀಡಿದ ಚಿಕಿತ್ಸೆಯ ಕುರಿತು ಸಿಇಓ ಅವರು ಇದೆ ವೇಳೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಗ್ರಾಮಸ್ಥರೊಂದಿಗೆ ಸಹ ಸಿಇಓ ಅವರು ಚರ್ಚಿಸಿದರು.

ಹುಲಸನಹಟ್ಟಿ ಗ್ರಾಮದಲ್ಲಿ ವಾಂಧಿ-ಬೇಧಿ ಪ್ರಕರಣಗಳು ಕಂಡುಬಾರದ ಹಾಗೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಬೇಕು. ಕುಡಿಯುವ ನೀರಿನ ಪೈಪ್‌ಲೈನ್‌ಗಳ ಪರಿಶೀಲನೆ, ಚರಂಡಿಗಳ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕನಕಗಿರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಕಂದಕೂರು, ತಾಲೂಕು ಆರೋಗ್ಯಾಧಿಕಾರಿಗಳಾದ ಶರಣಪ್ಪ ಚಕ್ಕೊಟಿ, ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಸಹನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿಕ್ಕಬೊಮ್ಮನಾಳ ಅಂಗನವಾಡಿ ಕೇಂದ್ರಕ್ಕೆ ಸಿಇಓ ಭೇಟಿ:* ಹುಲಸನಹಟ್ಟಿಗೆ ತೆರಳುವ ಮಾರ್ಗದ ಮಧ್ಯೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಸಹ ಭೇಟಿ ಮಾಡಿದರು. ಈ ವೇಳೆ ಅಂಗನವಾಡಿ ಕೇಂದ್ರದಲ್ಲಿನ ಅಡುಗೆ ಕೋಣೆ, ಆಹಾರ ಸಾಮಗ್ರಿಗಳ ದಾಸ್ತಾನು ವೀಕ್ಷಣೆ ನಡೆಸಿದರು. ಅಂಗನವಾಡಿ ಕೇಂದ್ರದಲ್ಲಿನ ಮಕ್ಕಳು ಹಾಗೂ ಬಾಣಂತಿಯರಿಗೆ ನೀಡುವ ಪೌಷ್ಠಿಕ ಆಹಾರದ ವಿವರ, ಹಾಜರಾತಿ ವಿವರ ಹಾಗೂ ಇತರ ದಾಖಲಾತಿಗಳನ್ನು ಪರಿಶೀಲಿಸಿದರು.

ಆಟ ಸೇರಿದಂತೆ ಮಕ್ಕಳ ಕಲಿಕಾ ಚಟುವಟಿಕೆಗಳಿಗೆ ಸಂಬAಧಿಸಿದ ವ್ಯವಸ್ಥೆಯನ್ನು ಕಂಡು ಸಿಇಓ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕರು, ಸಹಾಯಕರು ಸೇರಿದಂತೆ ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ