Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿ ಬಾಕಿ ಬೆಳೆವಿಮೆ ಪರಿಹಾರ ವಿತರಣೆಗೆ ಕ್ರಮ : ಚಲುವರಾಯ ಸ್ವಾಮಿ

 ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.11:
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಾಪ್ತಿಿಯಲ್ಲಿ ಬೆಳೆ ವಿಮೆ ಪರಿಹಾರಕ್ಕೆೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಾಮಿ ಹೇಳಿದರು.
ವಿಧಾನಸಭೆ ಪ್ರಶ್ನೋೋತ್ತರ ಕಲಾಪದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಚುಕ್ಕೆೆ ಗುರುತಿನ ಪ್ರಶ್ನೆೆಗೆ ಉತ್ತರಿಸಿದ ಅವರು, 2022-23 ರಿಂದ 2024-25ನೇ ಸಾಲಿನವರೆಗೆ ಒಟ್ಟು 13,728 ರೈತರು ಪ್ರಧಾನ ಮಂತ್ರಿಿ ಸಲ್ ಬಿಮಾ ಯೋಜನೆಯಡಿ ನೊಂದಾಯಿಸಿಕೊಂಡಿದ್ದು ಈ ಪೈಕಿ 945 ರೈತರಿಗೆ ವಿವಿಧ ಕಾರಣಗಳಿಂದ ಬೆಳೆ ವಿಮೆ ಪರಿಹಾರ ಜಮೆಯಾಗಿರುವುದಿಲ್ಲ. ಸಮಸ್ಯೆೆಗಳನ್ನು ಪರಿಹರಿಸಿ ಸರ್ಕಾರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಿದೆ ಎಂದರು.
ಬೆಳೆವಿಮೆ ಪರಿಹಾರ ಬಾಕಿ ಇರುವ 945 ರೈತರ ಪೈಕಿ ಎನ್.ಪಿ.ಸಿ.ಐ ಸೀಡಿಂಗ್, ಆಧಾರ್ ಕಾರ್ಡ್ ನಿಷ್ಕ್ರಿಿಯತೆ, ಅಮಾನ್ಯವಾದ ಬ್ಯಾಾಂಕ್ ಖಾತೆ ಸೇರಿದಂತೆ ತಾಂತ್ರಿಿಕ ಕಾರಣಗಳಿಂದಾಗಿ ಒಟ್ಟು 133 ರೈತರಿಗೆ 40.09 ಲಕ್ಷ ರೂ.ಪರಿಹಾರ ಹಣ ಜಮೆಯಾಗದೆ ಹಿಂದಿರುಗಿದೆ. ಬೆಳೆ ಕಟಾವು ಇಳುವರಿ ಪ್ರಯೋಗ ವ್ಯತ್ಯಾಾಸದ ಹಿನ್ನೆೆಲೆಯಲ್ಲಿ 798 ಬೆಳೆ ಹೊಂದಾಣಿಕೆಯಾಗದೇ ಹಾಗೂ ಮಾರ್ಗಸೂಚಿಯಾನುಸಾರ ಬೆಳೆ ಕಟಾವು ಪ್ರಯೋಗಗಳ ಇಳುವರಿ ಲಭ್ಯವಿಲ್ಲದ ಕಾರಣ 14 ರೈತರಿಗೆ ಪರಿಹಾರ ಪಾವತಿ ಬಾಕಿಯಿದೆ. 2025-26ರ ಮುಂಗಾರು ಹಂಗಾಮಿನಲ್ಲಿ ವಿಮೆ ಮಾಡಿಸುವ ರೈತರ ಸಂಖ್ಯೆೆ ಹೆಚ್ಚಾಾಗಿದ್ದು, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಾಪ್ತಿಿಯಲ್ಲಿ ಒಟ್ಟು 10,054 ರೈತರು ನೋಂದಾಯಿಸಿಕೊಂಡಿದ್ದಾರೆ ಎಂದು ವಿವರಣೆ ನೀಡಿದರು.
ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ ಒಟ್ಟು 9861 ರೈತರಿಗೆ 9.06 ಕೋಟಿ ರೂ. ಬೆಳೆ ವಿಮೆ ಪರಿಹಾರ ಲೆಕ್ಕಾಾಚಾರ ಮಾಡಲಾಗಿದ್ದು, ವಿಮಾ ಸಂಸ್ಥೆೆಯವರಿಂದ ಪರಿಹಾರ ಇತ್ಯರ್ಥ ಪ್ರಕ್ರಿಿಯೆಯಲ್ಲಿದೆ. ಕಲಬುರಗಿ ಜಿಲ್ಲೆಗೆ ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ 990 ಕೋಟಿ ರೂ.ಪರಿಹಾರ ನೀಡಲಾಗಿದೆ. ರಾಜ್ಯದ ಎಲ್ಲಾ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ರೈತರಿಗೆ ಬೆಳೆವಿಮೆ ನೊಂದಣಿಗೆ ಪ್ರೋೋತ್ಸಾಾಹಿಸಬೇಕು. ಇದರಿಂದ ರೈತರಿಗೆ ಯಾವುದೇ ನಷ್ಟವಿಲ್ಲ. ವಿಮೆ ಮೊತ್ತ ಶೇ.2 ರಷ್ಟು ಮಾತ್ರ ರೈತರು ಪಾವತಿಸಬೇಕು. ಉಳಿದ ಬೆಳೆವಿಮೆ ಮೊತ್ತ ಸರ್ಕಾರ ಪಾವತಿಸುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿಿ ಸಲ್ ಬಿಮಾ ಯೋಜನೆಯಡಿ ರೈತರ ನೋಂದಣಿಯಿಂದ ಪ್ರಾಾರಂಭವಾಗಿ ಪರಿಹಾರ ವಿತರಣೆಯವರೆಗೆ ಸಂಪೂರ್ಣ ಪ್ರಕ್ರಿಿಯೆಯನ್ನು ಸಂರಕ್ಷಣೆ ಪೋರ್ಟಲ್ ಮೂಲಕವೇ ನಿರ್ವಹಿಸಲಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಾಮಿ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ