Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮಾ.23: ಇಂದು ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ನಿಧನರಾಗಿದ್ದು, ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ" ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದರು.


ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕರು ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.


ಅವರು 1949ರ ಮೇ 3ರಂದು ಜನಿಸಿದ ಶ್ರೀಗಳು, 1970ರಲ್ಲಿ ಮಠದ ಪೀಠಾಧಿಪತಿಗಳಾಗಿ ನೇಮಕಗೊಂಡಿದ್ದರು. ಮೂಲತಃ ಕಾರ್ಕಳದ ವರಂಗ ಗ್ರಾಮದವರು ಅವರ ಪೂರ್ವಾಶ್ರಮದ ಹೆಸರು ರತ್ನವರ್ಮ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದರು, ಬಳಿಕ ಮೈಸೂರು ಯೂನಿವರ್ಸಿಟಿಯಲ್ಲಿ ಇತಿಹಾಸ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಅಲ್ಲದೇ ಚಾರುಕೀರ್ತಿ ಭಟ್ಟಾರಕ ಶ್ರೀಗಳು ಪ್ರಾಕೃತ, ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಪರಿಣತಿ ಹೊಂದಿದ್ದರು. ಸ್ವಸ್ಥಿ ಶ್ರಿ ಚಾರುಕೀರ್ತಿ ಎನ್ನುವ ಬಿರುದಾಂಕಿತ ಜೈನಭಟ್ಟಾರಕ ಶ್ರೀಗಳಿಗೆ ದೇಶಾದ್ಯಂತ ಅಪಾರ ಭಕ್ತವರ್ಗವಿದೆ. ಶಿಕ್ಷಣಕ್ಕೆ ಆದ್ಯತೆ ನೀಡಿದ್ದ ಶ್ರೀಗಳು ಪಾಲಿಟೆಕ್ನಿಕ್, ಇಂಜಿನಿಯರಿಂಗ್, ನರ್ಸಿಂಗ್, ಪ್ರಾಕೃತ ವಿವಿ ಸ್ಥಾಪನೆ ಮಾಡಿದ್ದರು. ಅಲ್ಲದೇ ಅನೇಕ ಜೈನ‌ ದೇವಾಲಯ ಪುನರುಜ್ಜೀವನ ಗೊಳಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.


12 ವರ್ಷ ವಾಹನ ಸಂಚಾರವನ್ನೇ ಮಾಡದೆ ದವಳ ಮತ್ತು ಜಯದವಳ ಆಗಮ ಗ್ರಂಥ ರಚನೆ ಮಾಡಿದ್ದ ಶ್ರೀಗಳು, ಇದುವರೆಗೆ ಮೊಬೈಲ್ ಬಳಕೆ ಮಾಡಿಲ್ಲ ಎಂಬುವುದು ಮತ್ತೊಂದು ವಿಶೇಷ.


ಚಾರುಕೀರ್ತಿ ಭಟ್ಟಾರಕ ಶ್ರೀಗಳು 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯಿಂದ ಕರ್ಮಯೋಗಿ ಎಂಬ ಬಿರುದೂ ಪಡೆದಿದ್ದರು. ಶ್ರವಣ ಬೆಳಗೊಳದಲ್ಲಿ ನಡೆದ ನಾಲ್ಕು ಮಹಾಮಸ್ತಕಾಭಿಷೇಕ ಇವರ ಸುಪರ್ದಿಯಲ್ಲಿ ನೆರವೇರಿತ್ತು ಎಂಬುವುದು ಉಲ್ಲೇಖನೀಯ.



ಶ್ರೀಗಳು ಇಂದು ಮುಂಜಾನೆ 5.30 ಘಂಟೆಯ ಸಮಯದಲ್ಲಿ ಶ್ರೀಗಳು ಸಮಾಧಿ ಮರಣವನ್ನು ಹೊಂದಿದ್ದಾರೆ ಎಂಬುವುದನ್ನು ತಿಳಿಸಿಲು ವಿಷಾದಿಸುತ್ತೇವೆ. ಈ ಪ್ರಯುಕ್ತ ಮಧ್ಯಾಹ್ನಮುಂಭಾಗದ ಚಾವುಂಡರಾಯ ಸಭಾ ಮಂಟಪದಲ್ಲಿ ಸಾರ್ವಜನಿಕರ ಅತಿಂಮ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು.


ಚಾವುಂಡರಾಯ ಮಂಟಪದಿಂದ ನಿಶಿಧಿಮಂಟಪದ ಕಡೆಗಡ ಅಂತಿಮ ಯಾತ್ರೆ ಸಂಜೆ 4.30 ಕ್ಕೆ ಹೊರಡುವುದು ಎಂದು ಮುಖ್ಯ ಕಾರ್ಯದರ್ಶಿ ಎಸ್‌.ಡಿ.ಜೆ.ಎಂ.ಐ ಮ್ಯಾನೇಜಿಂಗ್ ಕಮಿಟಿ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿದ್ದಾರೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ