Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹದೇವಪುರ ವಲಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ

ಸುದ್ದಿಮೂಲ ವಾರ್ತೆ

ಮಹದೇವಪುರ, ಜು 19 : ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಕೂಡಲೇ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಕಲ್ಪಿಸಲು ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹದೇವಪುರ ವಲಯದ ಹಗದೂರು ವಾರ್ಡ್ ಹಾಗೂ ಹೂಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಬರುವ ಹಳ್ಳಿಗಳಿಗೆ ಭೇಟಿ ನೀಡಿ ಸ್ಥಳಿಯ ನಿವಾಸಿಗಳ ಅಹವಾಲುಗಳನ್ನು ಸ್ವೀಕರಿಸಿ ನೀರಿನ ಸಮಸ್ಯೆಯಿರುವ ಕಡೆ ಕೂಡಲೆ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಗದೂರು ವಾರ್ಡ್ ವಾರ್ಡ್ ವ್ಯಾಪ್ತಿಯಲ್ಲಿ ಬರುವ ರಾಮಗೊಂಡನಹಳ್ಳಿ, ನಲ್ಲೂರಹಳ್ಳಿ, ಪಟ್ಟಂದೂರು ಅಗ್ರಹಾರ, ಗಾಂಧಿಪುರ ಗ್ರಾಮಗಳಿಗೆ ಭೇಟಿ ನೀಡಿ, ರಾಮಗೊಂಡನಹಳ್ಳಿ ಹಾಗೂ ಗಾಂಧಿಪುರದಲ್ಲಿ ತಲಾ 2 ಬೋರ್ ವೆಲ್ ಕೊರೆಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಪರಿಶೀಲನೆಯಲ್ಲಿ ಪಾಲಿಕೆಯ ಇಂಜಿನಿಯರ್ ಗಳು, ಜಲಮಂಡಳಿಯ ಇಂಜಿನಿಯರ್ ಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ