Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೆನ್ನೈನ ಕಲಾವಿದ ಆರ್. ಎಂ. ಪಳನಿಯಪ್ಪನ್ ಅವರಿಗೆ ಪ್ರಶಸ್ತಿ ಪ್ರಧಾನ 

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು 6 : ಯಾವುದೇ ಒಂದು ಸಂಸ್ಥೆ ನಿರ್ಮಾಣಕ್ಕೆ ದೂರ ದೃಷ್ಟಿ ಮತ್ತು ನಿರ್ದಿಷ್ಟ ಗುರಿ ಜೊತೆಗೆ ನಿಸ್ವಾರ್ಥವಾಗಿ ಕೈಗೊಳ್ಳುವ ಕೆಲಸ ಯಶಸ್ವಿಯಾಗುತ್ತದೆ ಎಂಬುದಕ್ಕೆ ಚಿತ್ರಕಲಾ ಪರಿಷತ್ ಸಾಕ್ಷಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

ಚಿತ್ರಕಲಾ ಪರಿಷತ್ತಿನ ಸಂಸ್ಥಾಪಕ ಕಾರ್ಯದರ್ಶಿಗಳಾದ ಪ್ರೊಫೆಸರ್ ಎನ್.ಎಸ್ ನಂಜುಂಡರಾವ್ ಅವರ 91ನೇ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಚಿವರು ಮಾತನಾಡಿದರು.

ಪ್ರೊಫೆಸರ್ ಎಂ.ಎಸ್ ನಂಜುಂಡರಾವ್ ಅವರನ್ನು ನಾವಿಂದು ನೆನಪಿಸಿಕೊಳ್ಳಲು ಅವರ ಕನಸು, ಅವರು ಹಾಕಿದ ಭದ್ರ ಬುನಾದಿಯೇ ಚಿತ್ರಕಲಾ ಪರಿಷತ್ ಇಂದು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉಜ್ವಲವಾಗಿ ಬೆಳೆಯಲು ಕಾರಣವಾಗಿದೆ. ನಂಜುಂಡ ರಾವ್ ಅವರ ಪರಿಶ್ರಮದ ಫಲವೇ ಇಂದು ಚಿತ್ರಕಲಾ ಪರಿಷತ್ ಚಿತ್ರಕಲೆಗಳ ಮಹಾವಿದ್ಯಾಲಯವನ್ನು ಒಳಗೊಂಡು ಪ್ರತಿ ವರ್ಷ ನೂರಾರು ಸ್ನಾತಕ ಮತ್ತು ಸ್ನಾತಕ್ಕೂತ್ತರ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುವಂತಾಗಿದೆ ಎಂದರು.

ಚಿತ್ರಕಲಾ ಪರಿಷತ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಟಿಯು ಮಾಜಿ ಉಪಕುಲಪತಿ, ಬಲವೀರ ರೆಡ್ಡಿ, ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಬಿ ಎಲ್ ಶಂಕರ್, ಕಾರ್ಯದರ್ಶಿ ಶಶಿಧರ್ ಇದ್ದರು. ಚೆನ್ನೈನ ಖ್ಯಾತ ಕಲಾವಿದ ಆರ್. ಎಂ ಪಳನಿಯಪ್ಪನ್ ಅವರಿಗೆ ಈ ಸಂದರ್ಭದಲ್ಲಿ ಚಿತ್ರಕಲಾ ಪರಿಷತ್ತಿನ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರ ವಿಸಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ