Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಕೂಡಲೆ ಪರಿಹರಿಸಲು ಸೂಚನೆ: ಮುಖ್ಯ ಆಯುಕ್ತರು.

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ 22: ಬಿಬಿಎಂಪಿ ವ್ಯಾಪ್ತಿಯಲ್ಲಿ ದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಕೇಂದ್ರ ಕಛೇರಿಯಲ್ಲಿರುವ ಕಂಟ್ರೋಲ್ ರೂಂಗೆ ಖುದ್ದಾಗಿ ಭೇಟಿ ನೀಡಿ ದೂರುಗಳ ಮಾಹಿತಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ದೂರುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.



ತದನಂತರ ಪಾಲಿಕೆ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ 6ನೇ ಮಹಡಿಯಲ್ಲಿರುವ ಕೊಮ್ಯಾಂಡ್ ಕಂಟ್ರೋಲ್ ಸೆಂಟರ್ ಗೆ ಭೇಟಿ ನೀಡಿ ಸಹಾಯ ತಂತ್ರಾಂಶದ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಿದರು. ಈ ಪೈಕಿ ಸಹಾಯ ತಂತ್ರಾಂಶದಲ್ಲಿ ಸುಮಾರು 70 ದೂರುಗಳು ಬಂದಿದ್ದು, ಮೂರು ದಿನಗಳೊಳಗಾಗಿ ಬಂದಿರುವಂತಹ ದೂರುಗಳನ್ನು ಪರಿಹರಿಸಲು ಸೂಚಿಸಿದರು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ತಿಳಿಸಿದರು.



ಮುಂದುವರೆದು, ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಿಸಲು ಸೂಚಿಸಿದರು. ಮಳೆ ಹಾನಿ ಸಂಬಂಧ ದೂರಿನ ಮಾಹಿತಿ ಹಾಗೂ ತೆಗೆದುಕೊಂಡಿರುವ ಮಾಹಿತಿಯನ್ನು ತಮ್ಮ ಗಮನಕ್ಕೆ ತರಲು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾನ್ಯ ವಿಶೇಷ ಆಯುಕ್ತರು(ಮಾಹಿತಿ ತಂತ್ರಜ್ಞಾನ) ಶ್ರೀ ಉಜ್ವಲ್ ಕುಮಾರ್ ಗೋಷ್ ಹಾಗೂ ಬಿಬಿಎಂಪಿ ಉಪ ಆಯುಕ್ತರು ( ಅಡಳಿತ) ಶ್ರೀ ಮಂಜುನಾಥ ಸ್ವಾಮಿ.ಬಿ.ಎಸ್ ರವರು ಉಪಸ್ಥಿತರಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ