Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಬಾಗಲಕೋಟೆ,ಏ.18: ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಕೆಲವರು ಮುಳುಗುವ ಹಡಗು ಹತ್ತಿದ್ದಾರೆ‌. ಇಲ್ಲಿ ಇದ್ದಿದ್ದರೆ ಅವರು ದಡ ಸೇರುತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮುಧೋಳದಲ್ಲಿ ಗೋವಿಂದ ಕಾರಜೋಳ ಅವರ ಪರ ರೋಡ್ ಶೋ ನಡೆಸಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕದಲ್ಲಿ ಅಭೂತಪೂರ್ವ ಜನ ಬೆಂಬಲ ಬಿಜೆಪಿಗೆ ದೊರೆತಿದೆ. ಕಾರಜೋಳ ಅವರು ಒಬ್ಬ ಸಚಿವರಾಗಿ ಕಳೆದ ಮೂವತ್ತು ವರ್ಷದಿಂದ ಸೇವೆ ಸಲ್ಲಿಸಿದ್ದಾರೆ. ಲೋಕೋಪಯೋಗಿ, ನೀರಾವರಿ, ಸಮಾಜ ಕಲ್ಯಾಣ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.

ಉತ್ತರ ಕರ್ನಾಟಕ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ

ಕೃಷ್ಣಾ ಮೇಲೆ ಆಣೆ ಮಾಡಿದ ಕಾಂಗ್ರೆಸ್ ನವರು ಏನೂ ಮಾಡಲಿಲ್ಲ. ಉತ್ತರ ಕರ್ನಾಟಕ ಜನರಿಗೆ ಮೋಸ ಮಾಡಿದರು. ಭೂಮಿ ಕಳೆದುಕೊಂಡ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿದರು, ರೈತರಿಗೆ ಪರಿಹಾರ ನೀಡಲು ನಮ್ಮ ಕಾರಜೋಳ ಅವರು ಸಚಿವರಾಗಿ ಬರಬೇಕಾಯಿತು. ನಾನು ಸಚಿವ ಸಂಪುಟದ ಉಪ ಸಮಿತಿ ಮಾಡಿ ಎಲ್ಲರಿಗೂ ಸಮಾನವಾದ ಪರಿಹಾರ ನೀಡಿದ್ದು, ಭೂಮಿ ಕಳೆದುಕೊಂಡವರಿಗೆ ಸಮಾನ ಪರಿಹಾರ ನೀಡಲಾಗಿದೆ. ಈ ಭಾಗದಲ್ಲಿ ಏತ ನೀರಾವರಿ ಮಾಡುವ ಮೂಲಕ ಮುಧೋಳ ಅಭಿವೃದ್ಧಿ ಮಾಡಲಾಗಿದೆ ಎಂದರು.

ಬಿಜೆಪಿ ಸುನಾಮಿ

ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಮತ್ತೆ ಬಿಜೆಪಿ ಸರ್ಕಾರ ನೂರಕ್ಕೆ ನೂರು ಬರುತ್ತದೆ. ಕಾಂಗ್ರೆಸ್ ನವರು ನೀಡುತ್ತಿರುವುದು ಗ್ಯಾರೆಂಟಿ ಕಾರ್ಡ್ ಅಲ್ಲ, ಅದು ವಿಜಿಟಿಂಗ್ ಕಾರ್ಡ್, ಅದು ಮುಂದೆ ಗಳಗಂಟಿ ಆಗುತ್ತದೆ.

ಕಾರಜೋಳ ಅವರು ರಾಜ್ಯ ಸುತ್ತಬೇಕಿದೆ. ನಾವು ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಒಳ ಮೀಸಲಾತಿ ನೀಡಿದ್ದೇವೆ. ಒಕ್ಕಲಿಗ ಲಿಂಗಾಯತರ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಕಾರಜೋಳ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ಕಾಂಗ್ರೆಸ್ ನವರು ಮುಂದಿನ ಬಾರಿ ಅರ್ಜಿ ಹಾಕದಂತೆ ಮಾಡಬೇಕು ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ