Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳ ವೈಫಲ್ಯಗಳನ್ನು ಸಹಿಸುವುದಿಲ್ಲ: ಮುಖ್ಯಮಂತ್ರಿ ಖಡಕ್ ಎಚ್ಚರಿಕೆ 

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.27: ಇವತ್ತು ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡು ತಿಂಗಳ ಹಿಂದೆಯೇ ನಡೆಯಬೇಕಾಗಿತ್ತು. ಎಲ್ಲಾ ಜಿಲ್ಲಾ ಸಚಿವರಿಗೆ ಪತ್ರ ಬರೆದಿದ್ದೆ. ಜಿಲ್ಲೆಗಳಲ್ಲಿ ಜನತಾ ಸ್ಪಂದನ ಕಾರ್ಯಕ್ರಮ ಮಾಡಿ ನನಗೆ ವರದಿ ಸಲ್ಲಿಸಬೇಕೆಂದು ತಿಳಿಸಲಾಗಿತ್ತು. ಕೆಲವು ಜಿಲ್ಲೆಗಳಿಂದ ಮಾತ್ರ ವರದಿ ಬಂದಿದೆ. ಉಳಿದ ಜಿಲ್ಲೆಗಳಿಂದ ವರದಿ ಬಂದಿಲ್ಲ. ಇದನ್ನು ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಆಗಿ ಹೇಳಿದ್ದಾರೆ.



ಬೆಂಗಳೂರಿನಲ್ಲಿ ನಡೆದ ಮುಖ್ಯಮಂತ್ರಿಗಳ ಜನಸ್ಪಂದನ ಕಾಯರ್ಯಕ್ರಮದ ಪ್ರಮುಖ ಹೈಲೈಟ್ಸ್‌ಗಳು ಹೀಗಿವೆ.

ಜನತಾ ಸ್ಪಂದನ- ಅನೇಕ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ನೀಡಲು ಸಾಧ್ಯವಾಗುತ್ತದೆ. ಕೆಲವು ಅರ್ಜಿಗಳು ಕೂಡಲೇ ತೀರ್ಮಾನ ಮಾಡಲು ಆಗೊದಿಲ್ಲ. ಸಮಯ ಬೇಕಾಗುತ್ತದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಇಲ್ಲವಾದರೆ ಬೆಳೆಯುತ್ತಲೇ ಹೋಗುತ್ತವೆ. ಅರ್ಜಿಗಳಲ್ಲಿ ಬಹುತೇಕವಾಗಿ ಕಂದಾಯ, ಪೊಲೀಸ್‌ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ, ವಸತಿ ಕೊಡಿ, ಉದ್ಯೋಗ ಕೊಡಿಸಿ ಎಂಬ ಮನವಿಗಳು ಸಲ್ಲಿಕೆಯಾಗಿವೆ.

ವಿಶೇಷವಾಗಿ ಅಂಗವಿಕಲರು ಉದ್ಯೋಗ ಕೊಡಿಸಿ, ತ್ರಿಚಕ್ರ ವಾಹನ ಕೊಡಿಸಿ ಎಂದು ಮನವಿ ಸಲ್ಲಿಸಿದ್ದಾರೆ. 4000 ತ್ರಿಚಕ್ರ ವಾಹನ ಒದಗಿಸಲಾಗಿದೆ. ವಿಶೇಷವಾಗಿ ಜಿಲ್ಲಾಧಿಕಾರಿಗಳು ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ. ಖಾತೆ, ಪಹಣಿ, ಪೋಡಿ ಮಾಡಲು ನನ್ನ ಬಳಿ ಬರಬೇಕಾ? ಜಿಲ್ಲಾಧಿಕಾರಿಗಳು, ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು ಕೆಲಸ ಮಾಡಿದರೆ ಜನರು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆಯನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಸ್ಪತ್ರೆ, ಪೊಲೀಸ್‌ ಠಾಣೆ, ಹಾಸ್ಟೆಲುಗಳು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಬೇಕು. ಜನರ ಸಮಸ್ಯೆ ಬಗೆಹರಿಸಬೇಕು. ವಿಳಂಬ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಕೂಡಲೇ ಜನರಿಗೆ ಸ್ಪಂದಿಸಲು ಸೂಚಿಸಿದರು. ಕಾನೂನು ರೀತ್ಯ ಮಾಡಲು ಸಾಧ್ಯವಾಗದಿದ್ದರೆ, ಹಿಂಬರಹ ನೀಡಬೇಕು. ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಹದಿನೈದು ದಿನದೊಳಗೆ ಇವುಗಳನ್ನು ವಿಲೇವಾರಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಿಯಮಾವಳಿಗಳಡಿ ಅವಕಾಶವಿಲ್ಲದೆ ಇದ್ದರೆ, ಹಿಂಬರಹ ನೀಡಬೇಕು. ಕೆಳಹಂತದ ಅಧಿಕಾರಿಗಳಿಗೆ ನೀವು ಕೂಡಲೇ ಸ್ಪಂದಿಸಬೇಕು. ಕನಿಷ್ಠ ಮೂರು ತಿಂಗಳಿಗೊಮ್ಮೆ ಜನತಾಸ್ಪಂದನ ಕಾರ್ಯಕ್ರಮ ಮಾಡುತ್ತೇನೆ. ಮುಂದಿನ ಬಾರಿ ಹೆಚ್ಚು ಜನ ಬಂದರೆ, ತಳಹಂತದ ಅಧಿಕಾರಿಗಳು ಕೆಲಸ ಸರಿಯಾಗಿ ಮಾಡುತ್ತಿಲ್ಲ ಎಂದು ಪರಿಗಣಿಸಲಾಗುವುದು ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಮೂರುವರೆ ಸಾವಿರ ಅರ್ಜಿ ಸ್ವೀಕರಿಸಲಾಗಿದೆ. ಇವುಗಳನ್ನು ಪರಿಶೀಲಿಸಿ, ಕಾನೂನು ರೀತ್ಯ ಪರಿಹಾರ ನೀಡಬೇಕು. ಸಾಧ್ಯವಾಗದಿದ್ದರೆ ಹಿಂಬರಹ ನೀಡಬೇಕು. ತಳಹಂತದ ಅಧಿಕಾರಿಗಳು ಅರ್ಜಿಯನ್ನು ಇತ್ಯರ್ಥಪಡಿಸಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ