Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನುಡಿದಂತೆ ನಡೆಯುವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 20: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ ರಾಜ್ಯದ ಜನರಿಗೆ ಸಿಕ್ಕಿರುವ ಗೆಲುವು. ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು, ಹಿಂದೆ ನುಡಿದಂತೆ ನಡೆದಿದ್ದೇವೆ, ಮುಂದೆಯೂ ನಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಚಾರ ಆರಂಭವಾಗಿದ್ದು, ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಮೂಲಕ. ಇದರ ಜತೆಗೆ ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಗಾಂಧಿ ಹಾಗೂ ಅನೇಕ ನಾಯಕರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದು ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಇದರ ಜತೆಗೆ ಸಾಹಿತಿಗಳು, ಚಿಂತಕರು, ಸಂಘಟನೆ ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದು, ಧನ್ಯವಾದ ಅರ್ಪಿಸುತ್ತೇನೆ.

ರಾಜ್ಯದ ಯುವಕರು, ರೈತರು, ಕಾರ್ಮಿಕರು, ಮಹಿಳೆಯರಿಗೂ ಧನ್ಯವಾದ ತಿಳಿಸುತ್ತೇನೆ. ಈ ಕಾರ್ಯಕ್ರಮಕ್ಕೆ ಬಂದು ನಮಗೆ ಶುಭ ಕೋರಿ ಆಶೀರ್ವಾದ ಮಾಡಲು ಬಂದಿರುವ ಎಲ್ಲಾ ಪ್ರಮುಖ ನಾಯಕರು ಹಾಗೂ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ. ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ.

ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು ಇವತ್ತೇ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ ಆದೇಶ ಹೊರಡಿಸಿ ಜಾರಿಗೆ ತರುತ್ತೇವೆ. ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ