Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,ನ.24: ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಅದು ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ. 668 ಕೋಟಿ ವೆಚ್ಚದಲ್ಲಿ ಕಮಂಡ್ ಸೆಂಟರ್ ನಿರ್ಮಾಣವಾಗಿದೆ. ನಿರೀಕ್ಷಿತ ಫಲ ಸಿಕ್ಕದೇ ಹೋದರೆ ಕಷ್ಟ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ, ಮಹಿಳೆಯರ ಮೇಲೆ ದೌರ್ಜನ್ಯ, ಒಂಟಿ ಮನೆಗಳಿರುವಲ್ಲಿ, ವೃದ್ಧರು ಒಂಟಿಯಾಗಿರುವಲ್ಲಿ ಹೆಚ್ಚಿನ ಗಮನ ನೀಡಬೇಕು ಎಂದರು.

ಅಪರಾಧಗಳು ನಡೆಯದ ರೀತಿ ತಡೆಯಬೇಕು

ಅಪರಾಧವಾದ ನಂತರ ಶಿಕ್ಷೆ ಕೊಡುವುದು ಒಂದು ಭಾಗ. ಆದರೆ ಅಪರಾಧಗಳು ನಡೆಯದ ರೀತಿ ತಡೆಯಬೇಕು. ಬೆಂಗಳೂನಲ್ಲಿ ಕೊಲೆಯಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿಗಳ ಕೊಲೆ ಪ್ರಕರಣವನ್ನು ಉದಾಹರಿಸಿದ ಮುಖ್ಯಮಂತ್ರಿಗಳು ಇಂಥವು ನಡೆಯದಂತೆ ನೋಡಿಕೊಳ್ಳಬೇಕು ಎಂದರು. ಅದಕ್ಕೆ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಪೋಲಿಸರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕೆಂದರು.

ಬೆಂಗಳೂರು ಸುರಕ್ಷಿತ ನಗರವಾಗಬೇಕು

ನಗರದಲ್ಲಿ ಮೊದಲ ಬಾರಿ ಕಮಾಂಡ್ ಸೆಂಟರ್ ಸ್ತಾಪನೆಯಾಗಿದ್ದು ಇದರ ಅವಶ್ಯಕತೆ ಇರುವವರಿಗೆ ಇದರ ಪ್ರಯೋಜನ ದೊರಕಲಿ ಎಂದರು. ಅತ್ಯಾಧುನಿಕ ಉಪಕರಣಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದ್ದು ಇವೆಲ್ಲವೂ ಉಪಯೋಗವಾಗಬೇಕು . ಹಾಗಾದಾರೆ ಕಮಾಂಡ್ ಸೆಂಟರ್ ನಿಂದ ಬೆಂಗಳೂರು ನಿಜವಾಗಿಯೂ ಸುರಕ್ಷಿತ ನಗರವೆನಿಸುತ್ತದೆ. ಪೋಲಿಸಿನವರಿಗೂ ಉತ್ತಮ ಹೆಸರು ಬರಲಿದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ