Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಜಯಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು,ಆ.30; ರಾಜ್ಯ ಮಟ್ಟದ ಶರಣ ಶ್ರೀ ಕುಳುವ ನುಲಿಯ ಚಂದಯ್ಯನವರ 916ನೇ ಜಯಂತಿಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉದ್ಘಾಟಿಸಲಿದ್ದಾರೆ. ಈ ಮಹತ್ವದ ಮತ್ತು ಐತಿಹಾಸಿಕ ಕಾರ್ಯಕ್ರಮದಲ್ಲಿ ಕುಳುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅಖಿಲ ಕರ್ನಾಟಕ ಕುಳುವ ಮಹಾಸಂಘ ಮನವಿ ಮಾಡಿದೆ.

ಈ ಕುರಿತು ಹೇಳಿಕೆ ನೀಡಿರುವ ಸಂಘದ ಗೌರವಾಧ್ಯಕ್ಷ ಮತ್ತು ಮಾಜಿ ಶಾಸಕ ಜಿ.ಚಂದ್ರಣ್ಣ, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಎಂ. ಭಜಂತಿ ಮತ್ತು ಪ್ರಧಾನ ಕಾರ್ಯದರ್ಶಿ ಆನಂದ್‌ ಕುಮಾರ್‌ ಏಕಲವ್ಯ, ಪ್ರಮುಖ ಶರಣರಲ್ಲಿ ನುಲಿಯ ಚಂದಯ್ಯ ತನ್ನ ಕಾಯಕ ಮತ್ತು ದಾಸೋಹದ ಮೂಲಕ ಪ್ರಸಿದ್ಧರಾಗಿದ್ದು, ಬಸವಾದಿ ಶರಣರಲ್ಲಿ, ಕಾಯಕ ಸಿದ್ಧಾಂತಕ್ಕೆ ಅಕ್ಷರಶಃ ಮಹತ್ವ ನೀಡಿ ಆದರೆ ಮೌಲ್ಯ ಹೆಚ್ಚಿಸಿದ್ದಾರೆ. ಅವರ ಜಯಂತಿ ಆಚರಿಸುವ ಮೂಲಕ ಬಹು ದಿನಗಳ ಬೇಡಿಕೆಗೆ ಸರ್ಕಾರ ಗೌರವ ನೀಡುತ್ತಿದೆ ಎಂದು ಹೇಳಿದ್ದಾರೆ.

ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮುಖ್ಯಮಂತ್ರಿ ಅವರ ಜೊತೆಗೆ ಸಾಣೆಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯಾದ್ಯಾಂತ ಜಿಲ್ಲಾ, ತಾಲ್ಲೂಕು ಆಡಳಿತದ ಜೊತೆಗೂಡಿ ಅರ್ಥಪೂರ್ಣವಾಗಿ ಆಚರಣೆ ಮಾಡುವಂತೆ ಕೋರಿದ್ದಾರೆ.

12ನೇ ಶತಮಾನದ ಕಲ್ಯಾಣದ ವೈಚಾರಿಕ ಕಾಂತ್ರಿಯ ಹರಿಕಾರರಾದ ಬಸವಸಾಧಿ ಪ್ರಮಥರ ಸಮಾಕಾಲೀನರು, ಕಲ್ಯಾಣದ ಸ್ವತಃ ಕಾಯಕ ಮತ್ತು ದಾಸೋಹಕ್ಕೆ ಮಾದರಿಯಾದ ಶ್ರೇಷ್ಠ ಕಾಯಕ ಹಠಯೋಗಿ, ಕೊರಮ-ಕೊರಚ ಸಮುದಾಯದ ಶರಣ ಶ್ರೀ ಕುಳುವ ನುಲಿಯಚಂದಯ್ಯ ಜಯಂತೋತ್ಸವವನ್ನು ಪ್ರತಿ ವರ್ಷ ನೂಲ ಹುಣ್ಣಿಮೆ ದಿನ ಆಚರಿಸಲು ಎ.ಕೆ.ಎಂ.ಎಸ್ ಸಂಘದ ಮನವಿಗೆ ಸ್ಪಂದಿಸಿ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು.

ಶರಣರ ಕಾಯಕ ತತ್ವಾದರ್ಶಗಳ ಬಗ್ಗೆ ಇಂದಿನ ಯುವ ಪೀಳಿಗೆಗೆ ತಿಳಿಸುವ ಜೊತೆಗೆ ಸಮುದಾಯದ ಒಗ್ಗಟ್ಟು ಮತ್ತು ಧಾರ್ಮಿಕ ಅಸ್ಮಿತೆಯ ಬದ್ದತೆಯನ್ನು ಎತ್ತಿಹಿಡಿಯಬೇಕು. ಈ ಮೂಲಕ ಸಮಾಜವನ್ನು ಮುಖ್ಯ ವಾಹಿನಿಗೆ ತರಲು ಸಹಕಾರಿಯಾಗಬೇಕೆಂದು ಕೋರಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ