Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿಿ ಪದಕ ವಿತರಣೆ: ಹುಲಿ, ಆನೆಗಳ ಹತ್ಯೆೆ ಪ್ರಕರಣಗಳ ಬಗ್ಗೆೆ ಕಳವಳ ಪ್ರಾಾಣಿಗಳನ್ನು ಕೊಂದರೆ ಕಠಿಣ ಕ್ರಮ ಶತಸಿದ್ಧ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.08:
ಪ್ರಾಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.
ವಿಧಾನಸೌಧದ ಬ್ಯಾಾಂಕ್ವೆೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಾಹದ ಸಮಾರೋಪ ಸಮಾರಂಭದಲ್ಲಿ ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿಿ ಪದಕ ವಿತರಿಸಿ ಮಾತನಾಡಿದ ಅವರು, ಪರಿಸರ, ಪ್ರಾಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಿಗೆ ಮೌಲ್ಯವೇ ಇಲ್ಲ. ಹೀಗಾಗಿ ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾನವ-ವನ್ಯಜೀವಿ ಸಹಬಾಳ್ವೆೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಾಗಿ ವನ್ಯಜೀವಿ ಸಪ್ತಾಾಹ ಆಚರಿಸಲಾಗುತ್ತಿಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.
ಆನೆ ಮತ್ತು ಹುಲಿ ಸಂಪತ್ತಿಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾಾನದಲ್ಲಿದೆ. ಇದರ ಜೊತೆಗೆ ಪ್ರಾಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿಿ ಸಹಬಾಳ್ವೆೆ ಏರ್ಪಡಬೇಕು. ಇದಕ್ಕಾಾಗಿ ಪ್ರಾಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿಿವೆ ಎನ್ನುವ ಬಗ್ಗೆೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.
ಹುಲಿ, ಆನೆಗಳ ಹತ್ಯೆೆ ಪ್ರಕರಣಗಳ ಬಗ್ಗೆೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಿಗಳು ಅರಣ್ಯಾಾಧಿಕಾರಿಗಳು ಹೆಚ್ಚು ಜವಾಬ್ದಾಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆೆ ಮಾಡಿದವರು ಮತ್ತು ಪ್ರಾಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಮುಖ್ಯಮಂತ್ರಿಿಗಳು ಎಚ್ಚರಿಸಿದರು.
ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.
514 ಗಸ್ತು ವನಪಾಲಕರ ಆಯ್ಕೆೆ ಪಟ್ಟಿಿ ಬಿಡುಗಡೆ:
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 540 ಗಸ್ತು ವನಪಾಲಕರ ನೇಮಕಾತಿ ಪ್ರಕ್ರಿಿಯೆ ನಡೆದಿದ್ದು, ಈ ಪೈಕಿ ಆಯ್ಕೆೆಯಾಗಿರುವ 514 ಗಸ್ತು ವನಪಾಲಕರ ಆಯ್ಕೆೆ ಪಟ್ಟಿಿಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.
ಅನಿಲ್ ಕುಂಬ್ಳೆೆ ಮಾತನಾಡಿ, ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೂ ರಾಷ್ಟ್ರಪತಿ ಸೇವಾ ಪದಕ ನೀಡುವಂತೆ ಕೇಂದ್ರ ಸರ್ಕಾರಕ್ಕೆೆ ಶಿಾರಸು ಮಾಡುವಂತೆ ಮುಖ್ಯಮಂತ್ರಿಿಗಳಿಗೆ ಅನಿಲ್ ಕುಂಬ್ಳೆೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಅರಣ್ಯ, ವನ್ಯಜೀವಿ ರಾಯಭಾರಿಯಾಗಿ ನೇಮಕವಾಗಿರುವ ಖ್ಯಾಾತ ಕ್ರಿಿಕೆಟಿಗ ಅನಿಲ್ ಕುಂಬ್ಳೆೆ ಮತ್ತು ಅರಣ್ಯಪಡೆ ಮುಖ್ಯಸ್ಥರು ಒಡಂಬಡಿಕೆಗೆ ಸಹಿ ಹಾಕಲಾಯಿತು. ವನ್ಯಜೀವಿ ಸಪ್ತಾಾಹದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾಾರ್ಥಿಗಳಿಗೆ ಪ್ರಶಸ್ತಿಿ ಪ್ರದಾನ ಮಾಡಲಾಯಿತು.
ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆೆ, ಅರಣ್ಯ ರಾಯಬಾರಿ ಅನಿಲ್ ಕುಂಬ್ಳೆೆ, ಮುಖ್ಯಮಂತ್ರಿಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್‌ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿಿತರಿದ್ದ
ಬನ್ನೇರುಘಟ್ಟ ರಾಷ್ಟ್ರದ ಪ್ರಥಮ ಸೌರ ವಿದ್ಯುತ್ ಜೈವಿಕ ಉದ್ಯಾಾನ: ಖಂಡ್ರೆೆ
ಬೆಂಗಳೂರು, ಅ.8: ಬನ್ನೇರುಘಟ್ಟ ಜೈವಿಕ ಉದ್ಯಾಾನವನದಲ್ಲಿ 1 ಮೆಗಾವ್ಯಾಾಟ್ ಕ್ಯಾಾಪ್ಟಿಿವ್ ಸೌರ ವಿದ್ಯುತ್ ಸ್ಥಾಾವರ ಸ್ಥಾಾಪಿಸಲಾಗುತ್ತಿಿದ್ದು, ಇದು ರಾಷ್ಟ್ರದ ಮೊದಲ ಸೌರ ವಿದ್ಯುತ್ ಜೈವಿಕ ಉದ್ಯಾಾನ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆೆ ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬನ್ನೇರುಘಟ್ಟ ಜೈವಿಕ ಉದ್ಯಾಾನವನದಲ್ಲಿ 1 ಮೆಗಾವ್ಯಾಾಟ್ ಕ್ಯಾಾಪ್ಟಿಿವ್ ಸೌರ ವಿದ್ಯುತ್ ಸ್ಥಾಾವರ ಸ್ಥಾಾಪಿಸಲಾಗುತ್ತಿಿದ್ದು, ಉದ್ಯಾಾನದ ಇಂದಿನ ಮತ್ತು ಭವಿಷ್ಯದ ಇಂಧನ ಅಗತ್ಯವನ್ನು ಸೌರ ವಿದ್ಯುತ್ ನಿಂದಲೇ ಪೂರೈಸಲು ತೀರ್ಮಾನಿಸಲಾಗಿದೆ. ದೇಶದಲ್ಲೇ ಪ್ರಥಮ ಪರಿಸರ ಸ್ನೇಹಿ ವಿದ್ಯುತ್ ಸೌಲಭ್ಯದ ಜೈವಿಕ ಉದ್ಯಾಾನಕ್ಕೆೆ ಮುಂದಿನ ವಾರ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಪ್ರಸಕ್ತ ಸನ್ನಿಿವೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಳ ಕಷ್ಟಸಾಧ್ಯವಾಗಿದ್ದು, ಇರುವ ಅರಣ್ಯ ಒತ್ತುವರಿಯಾಗದಂತೆ ಕಾಪಾಡುವುದು ಎಲ್ಲರ ಹೊಣೆಯಾಗಿದೆ. ಈ ಕರ್ತವ್ಯವನ್ನು ಅರಣ್ಯ ಸಿಬ್ಬಂದಿ ಪ್ರಾಾಮಾಣಿಕವಾಗಿ ಮಾಡಬೇಕು. ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆಯಿಂದ ಪ್ರಕೃತಿಯ ಮೇಲೆ ದುಷ್ಪರಿಣಾಮ ಆಗುತ್ತಿಿದ್ದು, ಪ್ರಕೃತಿ ಪರಿಸರ ಉಳಿಸಲು ಎಲ್ಲರೂ ಮುಂದಾಗಬೇಕು ಎಂದರು.
ಸಸ್ಯ ಸಂಕುಲ, ಪ್ರಾಾಣಿ ಸಂಕುಲ, ಕೀಟ ಸಂಕುಲಗಳಿಂದ ಕೂಡಿದ ಪಶ್ಚಿಿಮಘಟ್ಟ ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಾಪಾಕವಾಗಿ ಹಬ್ಬಿಿದ್ದು, ಜೀವವೈವಿಧ್ಯತೆಯ ಅದ್ಭುತ ತಾಣವಾಗಿದೆ. ಇಷ್ಟು ಸಮೃದ್ಧ ಕಾನನ ಹೊಂದಿರುವ ನಾವು ಅದೃಷ್ಟವಂತರು ಎಂದರು.
ಹುಲಿಗಳ ಸಂಖ್ಯೆೆಯಲ್ಲಿ ರಾಜ್ಯ 2ನೇ ಸ್ಥಾಾನದಲ್ಲಿದ್ದರೆ, ಆನೆಗಳ ಸಂಖ್ಯೆೆಯಲ್ಲಿ ಪ್ರಥಮ ಸ್ಥಾಾನದಲ್ಲಿದೆ. ಎಷ್ಟೇ ಕಟ್ಟುನಿಟ್ಟಿಿನ ಕ್ರಮ ಕೈಗೊಂಡರೂ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಧಾಮದಲ್ಲಿ ಕಳೆದ ಜೂನ್ ತಿಂಗಳಲ್ಲಿ 5 ಹುಲಿಗಳ ಹತ್ಯೆೆ ಆಗಿತ್ತು. ಇತ್ತೀಚೆಗೆ ಮತ್ತೊೊಂದು ಹುಲಿ ಸಾವಿಗೀಡಾಗಿದೆ. ಇದು ಹಸುವನ್ನು ಕೊಂದ ವನ್ಯಜೀವಿ ವಿರುದ್ಧದ ಪ್ರತೀಕಾರದ ಕ್ರಮವಾಗಿದ್ದು, ಇದು ಅತ್ಯಂತ ನೋವಿನ ಸಂಗತಿ. ಈ ನಿಟ್ಟಿಿನಲ್ಲಿ ಅರಣ್ಯದೊಳಗಿನ ಹಾಗೂ ಅರಣ್ಯದಂಚಿನ ಜನರಿಗೆ ಜಾಗೃತಿ ಮೂಡಿಸಲು ಜನಸಂಪರ್ಕ ಸಭೆ ನಡೆಸಲು ಸೂಚಿಸಿರುವುದಾಗಿ ತಿಳಿಸಿದರು.
ತಾವು ಸಚಿವರಾದ ಬಳಿಕ ಹೊಸದಾಗಿ 15 ಸಾವಿರ ಎಕರೆ ಪ್ರದೇಶವನ್ನು ಹೊಸದಾಗಿ ಅರಣ್ಯ ಎಂದು ಅಧಿಸೂಚನೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 250 ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.
ಮುಂದಿನ ಪೀಳಿಗೆಗೆ ಹಸಿರುಹೊದಿಕೆ ಉಳಿಸುವ ಸಲುವಾಗಿ ಮತ್ತು ಶ್ವಾಾಸತಾಣಗಳನ್ನು ಸಂರಕ್ಷಿಸುವ ಸಲುವಾಗಿ ಬೆಂಗಳೂರು ಹೆಸರುಘಟ್ಟ ಕೆರೆ ಬಳಿಯ 5678 ಎಕರೆ ಪ್ರದೇಶವನ್ನು ಗ್ರೇೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ. ಜೊತೆಗೆ ಮಾತಪ್ಪನ ಹಳ್ಳಿಿಯಲ್ಲಿ 153 ಎಕರೆ ಪ್ರದೇಶದಲ್ಲಿ ಬೃಹತ್ ಜೈವಿಕ ಉದ್ಯಾಾನ ನಿರ್ಮಿಸಲಾಗುತ್ತಿಿದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ