ಮುಗಬಾಳ ಗ್ರಾಮ ಪಂಚಾಯ್ತಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭೇಟಿ
ಸುದ್ದಿಮೂಲ ವಾರ್ತೆ
29:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣೆ ಅಧಿಕಾರಿಯದ ಶ್ರೀಮತಿ ಅನುರಾಧ ಕೆ ಎನ್.ರವರು . ಹೊಸಕೋಟೆ ತಾಲೂಕು ನಂದಗುಡಿ ಸಮೀಪವಿರುವ ಮುಬಾಳ ಗ್ರಾಮ ಪಂಚಾಯಿತಿಗೆ.ಭೇಟಿ ನೀಡಿ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ಹಾಗೂ ನಾಳೆಯ ಕಾರ್ಯಕ್ರಮಕ್ಕೆ ಕೈ ಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ತಾಲೂಕು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಕಾರ್ಯ ಕ್ರಮದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಎಲ್ಲಾ ಆಯಾಮಗಳಲ್ಲೂ ಹೆಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಲು ಅಗತ್ಯ ಸೂಚನೆಗಳನ್ನು ನೀಡಿದರು
ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿಗಳಾದ TK ರಮೇಶ್ ಹಾಗೂ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಕರ್ ಕೆ ಎಸ್* ಸರ್ ಹಾಗೂ ತಾಲೂಕು ಮಟ್ಟದ ಅಧಿಕಾರಿ ಗಳಾದ ತಾಲೂಕು ಯೋಜನಾಧಿಕಾರಿಗಳು, ಶಿಶು ಅಬಿವೃದ್ದಿ ಯೋಜನಾಧಿಕಾರಿಗಳು, ತಾಲೂಕು ಆರೋಗ್ಯ ನಿರೀಕ್ಷಕರು ಹಾಗೂ ಗ್ರಾಮ ಪಂಚಾಯಿತಿ ಅಬಿವೃದ್ದಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.