Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಬಳ್ಳಾಪುರ: ಮೂವರು ನಗರಸಭಾ ಸದಸ್ಯರು ಬಿಜೆಪಿ ಸೇರ್ಪಡೆ

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ,ಏ.28: ಚುನಾವಣೆ ಸಮೀಪಿಸುತ್ತಿದ್ದಂತೆ ಕೈ ಪಾಳೆಯದ ನಾಯಕರು ಒಬ್ಬೊಬ್ಬರಾಗಿ ಬಿಜೆಪಿ ಸೇರುತ್ತಿದ್ದು, ಕ್ಷೇತ್ರದಾದ್ಯಂತ ಕಮಲದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಕಂಡುಬಂದಿದೆ.

ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರುತ್ತಿದ್ದು, ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಸಾರುತ್ತಿದ್ದಾರೆ. ಗುರುವಾರ ಚಿಕ್ಕಬಳ್ಳಾಪುರ ನಗರಸಭೆಯ ಮೂವರು ಕಾಂಗ್ರೆಸ್ ನಗರಸಭಾ ಸದಸ್ಯರು ಸೇರಿದಂತೆ ಹಲವು ನಾಯಕರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಸಮ್ಮುಖದಲ್ಲಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಸೇರ್ಪಡೆಯಾದ ನಗರಸಭಾ ಸದಸ್ಯರು ಮಾತನಾಡಿ, ವಿಶೇಷ ಅನುದಾನ ತಂದು ನಗರದ ಸರ್ವತೋಮುಖ ಅಭಿವೃದ್ಧಿಗೆ ಸಚಿವ ಸುಧಾಕರ್ ಅವರು ಶ್ರಮಿಸಿದ್ದು, ನಗರಸಭೆ ಇತಿಹಾಸದಲ್ಲಿಯೇ ಎಂದೂ ಇಲ್ಲದ ರೀತಿಯಲ್ಲಿ ನಗರ ಅಭಿವೃದ್ಧಿ ಕಾಣುತ್ತಿದೆ. ಸಿಸಿ ರಸ್ತೆಗಳ ನಿರ್ಮಾಣ, ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಚ್ಚಿ ಅವರ ಕೈ ಬಲಪಡಿಸಲು ಬಿಜೆಪಿ ಸೇರಿರುವುದಾಗಿ ಘೋಷಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಗಂಧಗಾಳಿ ಗೊತ್ತಿಲ್ಲದವರಿಗೆ ಕಾಂಗ್ರೆಟ್ ಟಿಕೇಟ್ ನೀಡಲಾಗಿದೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಿದ ನಾಯಕರನ್ನು ಮೂಲಗುಂಪು ಮಾಡಲಾಗಿದೆ ಹೀಗಾಗಿ ನಮ್ಮ ವಾರ್ಡ್‍ಗಳ ಅಭಿವೃಧ್ಧಿಗಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಮೇಲೆ ವಿಶ್ವಾಸ ಇಟ್ಟು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ನಗರಸಭಾ ಸದಸ್ಯ ನರಸಿಂಹಮೂರ್ತಿ ತಿಳಿಸಿದರು.

ಸೇರ್ಪಡೆಯಾದ ನಗರಸಭಾ ಸದಸ್ಯರು:

15ನೇ ವಾರ್ಡಿನ ನಗರಸಭಾ ಸದಸ್ಯರಾದ ಅಂಬರೀಶ್, 20ನೇ ವಾರ್ಡ್ ನರಸಿಂಹಮೂರ್ತಿ ಮತ್ತು 27ನೇ ವಾರ್ಡಿನ ಸದಸ್ಯೆ ನೇತ್ರಾವತಿ ಹಾಗೂ ಮುಖಂಡ ಸಂತೋಷ್ ರಾಜ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು ಇವರೊಂದಿಗೆ ಹಲವು ಕಾಂಗ್ರೆಸ್ ಮುಖಂಡರೂ ಬಿಜೆಪಿ ಸೇರಿದ್ದು, 15ನೇ ವಾರ್ಡಿನ ನಾಗಾರ್ಜುನ, 28ನೇ ವಾರ್ಡಿನ ವೆಂಕಟೇಶ್, 13 ನೇ ವಾರ್ಡಿನ ಮುನಿಕೃಷ್ಣ, 15ನೇ ವಾರ್ಡಿನ ಆನಂದ್, ಶೇಖರ್, ಶಬರೀಶ್, 6ನೇ ವಾರ್ಡಿನ ಸುನೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಈ ಸಂದರ್ಭದಲ್ಲಿ ಬಿಎಂಟಿಸಿ ಉಪಾಧ್ಯಕ್ಷ ಕೆವಿ ನವೀನ್ ಕಿರಣ್, ನಗರಸಭೆಯ ಅಧ್ಯಕ್ಷ ಡಿ.ಎಸ್. ಆನಂದ್‍ರೆಡ್ಡಿ(ಬಾಬು) ಇನ್ನೂ ಹಲವು ಮುಖಂಡರು ಉಪಸ್ಥಿತರಿದ್ದರು.



 

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ