Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳು ಅಂಕಗಳಿಸುವ ಯಂತ್ರಗಳಲ್ಲ : ಚಂದ್ರಯ್ಯ ನಾಯ್ಡು

ಸುದ್ದಿಮೂಲ ವಾರ್ತೆ

ಆನೇಕಲ್, ಸೆ. 8 : ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರಿಯಾತ್ಮಕ ಕಲೆಗಳನ್ನು ಕಲಿಸಲು ಶಿಕ್ಷಣ ಸಂಸ್ಥೆಗಳು ಒತ್ತು ನೀಡಬೇಕು ಎಂದು ಸೆಂಟ್ ಫಿಲೋಮಿನಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚಂದ್ರಯ್ಯ ನಾಯ್ಡು ಹೇಳಿದರು.



ಸರ್ಜಾಪುರದ ಸೆಂಟ್ ಫಿಲೋಮಿನಾಸ್ ಶಾಲೆಯ ಆವರಣದಲ್ಲಿ ಸ್ಕೌಟ್ ಗೈಡ್ ಮಕ್ಕಳು ಹಮ್ಮಿಕೊಂಡಿದ್ದ ಗ್ಯಾಡ್ಜೆಟ್ ಮೇಳ ಹಾಗೂ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಬದುಕುವ ಕಲೆಯನ್ನು ಕಲಿಸಬೇಕು. ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಗ್ರಹಿಸುವ ವಿಷಯಗಳು ಅವರ ಜೀವನದುದ್ದಕ್ಕೂ ನೆನಪಿರುತ್ತದೆ. ಹಾಗಾಗಿ ಅವರಿಗೆ ಮೌಲ್ಯಗಳು, ಕರಕುಶಲತೆ, ಸಾಮರ್ಥ್ಯ ವೃದ್ಧಿಸುವಂತಹ ಕಲೆ ಮುಂತಾದ ಕೌಶಲ್ಯಗಳನ್ನು ಕಲಿಸಲು ಇದು ಸೂಕ್ತ ಸಂದರ್ಭ. ಪೋಷಕರೂ ಸಹ ತಮ್ಮ ಮಕ್ಕಳಿಗೆ ಕೇವಲ ಅಂಕಗಳನ್ನು ಗಳಿಸುವ ಯಂತ್ರಗಳನ್ನಾಗಿಸದೆ ಅವರ ಸರ್ವತೋಮುಖ ಅಭಿವೃದ್ಧಿಗೆ ಗಮನ ಕೊಡಬೇಕು ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಚಿನ್ನಸ್ವಾಮಿ ರೆಡ್ಡಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಮಕ್ಕಳನ್ನು ಸಾಮಾಜಿಕ, ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕವಾಗಿ ಸದೃಢರನ್ನಾಗಿಸಲಿದೆ. ಮಕ್ಕಳಿಗೆ ವಿಭಿನ್ನ ಹಾಗೂ ವಿಶೇಷ ಕಾರ್ಯಕ್ರಮಗಳನ್ನುರೂಪಿಸುವ ಮೂಲಕ ಮಕ್ಕಳ ಸರ್ವಾಂಗೀಣ ಹಾಗೂ ಸರ್ವತೋನ್ಮುಖ ಅಭಿವೃದ್ಧಿ ಸಾಧ್ಯ ಎಂದರು.

ಶಿಬಿರದಲ್ಲಿ ಜೀವನಕ್ಕೆ ಪೂರಕವಾದ ವಿವಿಧ ಗ್ಯಾಡ್ಜೆಕ್ಟ್ ಗಳು ಹಾಗೂ ಪೂರ್ವಜರು ಕೃಷಿ, ವಾಸ ಹಾಗೂ ಜೀವನಕ್ಕಾಗಿ ಬಳಸುತ್ತಿದ್ದ ಅನೇಕ ಪರಿಕರಗಳು ಮತ್ತು ವಿವಿಧ ಪ್ರಾಂತ್ಯಗಳ ಸಾಂಸ್ಕೃತಿಕ ಉಡುಗೆ ತೊಡುಗೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಸ್ಕೌಟ್, ಗೈಡ್, ಕಬ್, ಬುಲ್‌ಬುಲ್ ಮಕ್ಕಳು ಆಯೋಜಿಸಿದ್ದ ಮಕ್ಕಳ ಸಂತೆ ಅತ್ಯಂತ ಆಕರ್ಷಣೀಯವಾಗಿದ್ದು ಪೋಷಕರು ಸೊಪ್ಪು, ತರಕಾರಿ ಹಾಗೂ ಕರಕುಶಲ ವಸ್ತುಗಳನ್ನು ಮುಗಿಬಿದ್ದು ಖರೀದಿಸುತ್ತಿದ್ದ ದೃಷ್ಯ ಕಂಡುಬಂತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಎ.ಎನ್. ನರೇಂದ್ರ ಕುಮಾರ್, ಶಾಲಾ ಪ್ರಾಂಶುಪಾಲೆ ಎಸ್.ಆರ್.ಮಮತಾ, ಉಪಪ್ರಾಂಶುಪಾಲೆ ಬಿ.ಎಸ್. ಪದ್ಮಜಾ, ಸ್ಥಳೀಯ ಸಂಸ್ಥೆಯ ಅಧ್ಯಕ್ಷ ವಿ. ಮಂಜೇಗೌಡ, ಕಾರ್ಯದರ್ಶಿ ರಾಮಕೃಷ್ಣಯ್ಯ, ಸ್ಕೌಟ್ ಗೈಡ್ ಶಿಕ್ಷಕರಾದ ಧನಲಕ್ಷ್ಮೀ, ಹರೀಶ್ ಮೊದಲಾದವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ