Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಗರ ಪೋಲಿಯೋ ಲಸಿಕೆ ಟಾಸ್‌ಕ್‌ ೆರ್ಸ್ ಸಮಿತಿ ಸಭೆ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಆಯುಕ್ತ ಜುಬಿನ್ ಮೊಹೊಪಾತ್ರ

ಸುದ್ದಿಮೂಲ ವಾರ್ತೆ ರಾಯಚೂರು, ಡಿ.16:
ರಾಯಚೂರು ನಗರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ.21ರಿಂದ 24ರವರೆಗೆ ಐದು ವರ್ಷದೊಳಗಿನ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಕೆಲಸಗಳನ್ನು ಅಚ್ಚುಕಟ್ಟಾಾಗಿ ನಿರ್ವಹಿಸಬೇಕೆಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಡಿಸೆಂಬರ್ 16ರ ಮಂಗಳವಾರ ದಂದು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿದ ಪಲ್ಸ್ ಪೋಲಿಯೋ ನಗರ ಟಾಸ್‌ಕ್‌ ೆರ್ಸ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಲು ನಗರ ಪ್ರದೇಶಗಳಲ್ಲಿ ಒಟ್ಟು 143 ಲಸಿಕಾ ಕೇಂದ್ರ ಸ್ಥಾಾಪಿಸಲಾಗಿದೆ. 9 ಟ್ರಾಾಂಜಿಟ್ ಹಾಗೂ 06 ಸಂಚಾರಿ (ಮೊಬೈಲ್) ತಂಡ ರಚಿಸಲಾಗಿದೆ. ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಒಟ್ಟು 286 ವ್ಯಾಾಕ್ಸಿಿನೆಟರ್ಸ್, 31 ಮೇಲ್ವಿಿಚಾರಕರಿದ್ದು, ರಾಯಚೂರು ನಗರದಲ್ಲಿ ಒಟ್ಟು 62,685 ಮನೆಗಳನ್ನು ಲಸಿಕಾ ಅಭಿಯಾನದಡಿ ಸಂದರ್ಶಿಸುವ ಗುರಿ ಹೊಂದಲಾಗಿದೆ ಎಂದು ಆಯುಕ್ತರು ತಿಳಿಸಿದರು.
ಮಕ್ಕಳಿಗೆ ಎರಡು ಹನಿ ಪೋಲಿಯೋ ಹಾಕಿಸುವ ಮೂಲಕ ಕಳೆದ 14 ವರ್ಷಗಳಿಂದ ನಮ್ಮ ದೇಶದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಎಂಬ ಹೆಗ್ಗಳಿಕೆಯನ್ನು ನಾವು ಮುಂದುವರೆಸೋಣ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರಾಾ ಅವರು ಸೂಚಿಸಿದರು.
ಭಾನುವಾರದಂದು ಕುಟುಂಬದ ಸದಸ್ಯರೆಲ್ಲರೂ ಮನೆಯಲ್ಲಿ ಇರುವುದರಿಂದ ಇಂದಿನಿಂದಲೇ ನಗರಪಾಲಿಕೆಯ ತ್ಯಾಾಜ್ಯ ವಿಲೇವಾರಿ ವಾಹನದ ಮೂಲಕ ಮೈಕಿಂಗ್, ಪ್ರಮುಖ ಸ್ಥಳಗಳಲ್ಲಿ ಹೊರ್ಡಿಂಗ್‌ಸ್‌‌ಗ ೆ ಪ್ಲೇಕ್ಸ್ ಅಳವಡಿಕೆ ಹಾಗೂ ವಾಟ್ಸ್ ಆಪ್, ೇಸ್ಬುಕ್, ಎಕ್ಸ್ ಸೇರಿದಂತೆ ಮುಂತಾದ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಬಸ್ ನಿಲ್ದಾಾಣ, ರೈಲ್ವೆೆ ನಿಲ್ದಾಾಣ ಹಾಗೂ ಮಾರುಕಟ್ಟೆೆ, ಕೈಗಾರಿಕಾ ಪ್ರದೇಶ ಸೇರಿದಂತೆ ಎಲ್ಲ 143 ಬೂತ್‌ಗಳಲ್ಲಿ ಮೊದಲ ದಿನವೇ ಶೇಕಡ 100 ರಷ್ಟು ಗುರಿ ಸಾಧಿಸಲು ಕಾರ್ಯಯೋಜನೆ ಹಾಕಿಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್, ಪಾಲಿಕೆ ಆರೋಗ್ಯಾಾಧಿಕಾರಿ ಡಾ.ಮಹಮ್ಮದ್ ಶಾರ್ಕೀ ಮೊಹಿಯುದ್ದಿನ್, ತಾಲೂಕಾ ಆರೋಗ್ಯಾಾಧಿಕಾರಿ ಡಾ.ಪ್ರಜ್ವಲ್‌ಕುಮಾರ್, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಪರಿಸರ ಅಭಿಯಂತರರು ಜಯಪಾಲ್ ರೆಡ್ಡಿಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಬಿ.ಹೆಚ್.ಇ.ಓ, ಸರೋಜಾ ಕೆ, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಸುರೇಶ್, ಕ್ಷೇತ್ರ ಲಸಿಕಾ ಮೇಲ್ವಿಿಚಾರಕ ಕೋಪ್ರೇೇಶ್, ಡಿ.ಡಿ.ಎಮ್ ಲೋಕೇಶ್ ಸೇರಿದಂತೆ ಪಾಲಿಕೆ ವಾಹನ ವಿಭಾಗದ ವೆಂಕಟೇಶ ಕುಲಕರ್ಣಿ ಹಾಗೂ ಪಾಲಿಕೆ ಆರೋಗ್ಯ ನಿರೀಕ್ಷಣಾಧಿಕಾರಿಗಳು ಸಭೆಯಲ್ಲಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ